ಹಂಪಿಯ ಸ್ಮಾರಕಗಳಲ್ಲಿ ಕಣ್ಮನ ಸೆಳೆಯುವ ತ್ರಿವರ್ಣ ಬೆಳಕಿನ ಚಿತ್ತಾರ

First Published | Aug 10, 2022, 12:46 PM IST

ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಂಪಿ ತ್ರಿವರ್ಣ ಧ್ವಜದ ವರ್ಣದಲ್ಲಿ ಕಂಗೊಳಿಸುತ್ತಿದೆ. ವಿದ್ಯುತ್ ದೀಪಾಲಂಕಾರಗಳು ಪ್ರವಾಸಿಗರನ್ನು ಸೆಳೆಯುತ್ತಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೊಸಪೇಟೆ ತಾಲೂಕಿನ ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಸ್ಮಾರಕಗಳು ತ್ರಿವರ್ಣ ಧ್ವಜದ ಬಣ್ಣದಲ್ಲಿ ಕಂಗೊಳಿಸುತ್ತಿವೆ. ಕಲರ್ ಪುಲ್ ಲೈಟಿಂಗ್ ‌ನಲ್ಲಿರೋ ಹಂಪಿಯ ಸೌಂದರ್ಯ ಡ್ರೋಣ್ ಕಣ್ಣಲ್ಲಿ ಸೆರೆಯಾಗಿದೆ. ಕಲ್ಲಿನ ತೇರು, ಸರಿಗಮಪ ಮಂಟಪಗಳಿಗೆ ಮತ್ತಷ್ಟು ಮೆರುಗು ಪಡೆದುಕೊಂಡಿದೆ. 

ಹಂಪಿಯ ಸ್ಮಾರಕಗಳು ಹಾಗೂ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಹಂಪಿಯ ವಿರೂಪಾಕ್ಷ ದೇವಸ್ಥಾನ, ವಿಜಯ ವಿಠಲ ದೇಗುಲದ ಪ್ರಾಂಗಣದಲ್ಲಿರುವ ಕಲ್ಲಿನ ತೇರು, ಸಪ್ತಸ್ವರ ಮಂಟಪ, ಕಡಲೆ ಕಾಳು ಗಣಪ, ಸಾಸಿವೆ ಕಾಳು ಗಣಪ ಸೇರಿದಂತೆ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳಿಗೆ ಅಲಂಕಾರ ಮಾಡಲಾಗಿದೆ.

Latest Videos


ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಬಣ್ಣಗಳ ಚಿತ್ತಾರ ನೋಡುಗರ ಕಣ್ಮನ ಸೆಳೆಯುತ್ತಿವೆ. ಕೆಲ ಸ್ಮಾರಕಗಳು ಪ್ರತಿಬಿಂಬದಿಂದ ತಮ್ಮ ಸೌಂದರ್ಯ ಹೆಚ್ಚಿಸಿಕೊಂಡ್ರೆ, ಕಲ್ಲಿನ ತೇರಿನ ವಿದ್ಯುತ್ ದೀಪಾಲಂಕರಾದ ಪ್ರತ್ಯೇಕ ಪೋಟೋ ನೋಡುಗರ ಕಣ್ಮನ ಸೆಳೆಯುತ್ತಿದೆ.

ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ ಆ.5 ರಿಂದ 15 ರವರೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವ್ಯಾಪ್ತಿಯ ಐತಿಹಾಸಿಕ ದೇಗುಲ, ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.ಎಲ್ಲಾ ಸಂರಕ್ಷಿತ ಸ್ಮಾರಕಗಳು ಅಥವಾ ತಾಣಗಳಿಗೆ ಪ್ರವಾಸಿಗರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

2021ರ ಮಾರ್ಚ್‌ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನ ಸಬರಮತಿ ಆಶ್ರಮದಿಂದ 'ಪಾದಯಾತ್ರೆ' (ಸ್ವಾತಂತ್ರ್ಯ ಮಾರ್ಚ್) ಆರಂಭ ಮಾಡಿದ್ದರು. ಆ ಮೂಲಕ 'ಆಜಾದಿ ಕಾ ಅಮೃತ್ ಮಹೋತ್ಸವ'ದ ದೇಶಾದ್ಯಂತ ಚಟುವಟಿಕೆಗಳಿಗೆ ಚಾಲನೆ ನೀಡಿದ್ದರು.

15 ಆಗಸ್ಟ್ 2022 ಕ್ಕೆ 75 ವಾರಗಳ ಮೊದಲು 'ಆಜಾದಿ ಕಾ ಅಮೃತ್ ಮಹೋತ್ಸವ'ದ ಪ್ರಾರಂಭವು ಆಗಸ್ಟ್ 15, 2023 ರವರೆಗೆ ಮುಂದುವರಿಯುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಉದ್ಘಾಟನೆಯ ಸಮಯದಲ್ಲಿ ಮಹಾತ್ಮ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ್ದರು.

click me!