ಹಂಪಿ, ಕರ್ನಾಟಕ
ಹಂಪಿ ದಕ್ಷಿಣ ಭಾರತದ ಕರ್ನಾಟಕ ರಾಜ್ಯದ ಪುರಾತನ ಗ್ರಾಮವಾಗಿದೆ. 1336ರಿಂದ 1565ರ ವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ. ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಬಗಳು, ವಿಶ್ವವಿಖ್ಯಾತ ಕಲ್ಲಿನ ರಥ, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪತಿ, ಉಗ್ರನರಸಿಂಹ, ಕಮಲ ಮಹಲ್, ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.