ನಟಿ ಆಕಾಂಕ್ಷಾ ಪುರಿ ಅವರು ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಲು ಕಲಾವಿದರಿಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿದ್ಯಾರ್ಥಿಗಳ ಹೋರಾಟವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
ಪ್ರತಿಭಟನೆ ಹೆಸರಲ್ಲಿ ಹಣಗಳಿಕೆಗೆ ಆಮಿಷ: ನಟಿ ಆಕಾಂಕ್ಷಾ ಪುರಿ ಬಾಂಬ್!
ಟಿವಿ, ಸಿನಿಮಾದಲ್ಲಿ ಸಕ್ರಿಯರಾಗಿರುವ ಪ್ರಸಿದ್ಧ ನಟಿ ಆಕಾಂಕ್ಷಾ ಪುರಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ನಟ-ನಟಿಯರು ಹಾಗೂ ಕಂಟೆಂಟ್ ಕ್ರಿಯೇಟರ್ಸ್‌ಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರತಿಭಟನೆಯನ್ನು ವೈಯಕ್ತಿಕ ಪ್ರಚಾರಕ್ಕೆ ಅಥವಾ ಹಣ ಮಾಡುವ ಮಾರ್ಗವನ್ನಾಗಿ ಮಾಡಿಕೊಳ್ಳಬೇಡಿ ಎಂದು ಕಲಾವಿದರಲ್ಲಿ ಮನವಿ ಮಾಡಿದ್ದಾರೆ.
25
ಈ ಮಾರ್ಕೆಟಿಂಗ್ ಕಸದ ಭಾಗವಾಗಲು ನನಗಿಷ್ಟವಿಲ್ಲ
ಸಂದರ್ಶನವೊಂದರಲ್ಲಿ ಮಾತನಾಡಿದ ಆಕಾಂಕ್ಷಾ ಪುರಿ, ನನ್ನೊಂದಿಗೆ ಇರುವ ಹಲವು ನಟರು ಹಾಗೂ ಕಂಟೆಂಟ್ ಕ್ರಿಯೇಟರ್ಸ್‌ಗಳಿಗೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಆಪ್ರೋಚ್ ಮಾಡುತ್ತಿವೆ. ಪ್ರತಿಭಟನಾ ರ‍್ಯಾಲಿಗೆ ತೆರಳಿ ಮುಖ ತೋರಿಸಲು ಹಾಗೂ ಅದನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಹಣ ನೀಡುವ ಆಫರ್ ನೀಡಲಾಗುತ್ತಿದೆ. ಆದರೆ, ಈ ರೀತಿಯ ಕಸದ ಭಾಗವಾಗಲು ನನಗಿಷ್ಟವಿಲ್ಲ. ಧರಣಿ ಸ್ಥಳದಲ್ಲಿ ನಾನು ಸ್ಥಳದಲ್ಲಿ ಇರುತ್ತೇನೆಯೋ ಇಲ್ಲವೋ ಮುಖ್ಯವಲ್ಲ, ಆದರೆ ನಾನು ನಿಜವಾದ ಮತ್ತು ಸರಿಯಾದ ವಿಷಯಕ್ಕೆ ಮಾತ್ರ ಬೆಂಬಲ ನೀಡುತ್ತೇನೆ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.
35
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ; ಆಕಾಂಕ್ಷಾ ಕಳವಳ
ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ ನಟಿ, ವಿದ್ಯಾರ್ಥಿಗಳು ಈ ದೇಶದ ಭವಿಷ್ಯ. ಅವರ ಪ್ರಸ್ತುತ ಪರಿಸ್ಥಿತಿ ಹಾಗೂ ಜಂತರ್ ಮಂತರ್‌ನ ದೃಶ್ಯಗಳನ್ನು ಕಂಡು ನನಗೆ ತೀವ್ರ ಬೇಸರವಾಗಿದೆ. ವಿದ್ಯಾರ್ಥಿಗಳು ಕೇಳುತ್ತಿರುವುದು ಬಹಳ ಸಣ್ಣ ವಿಷಯ. ಅವರ ಧ್ವನಿಯನ್ನು ಸರ್ಕಾರ ಆಲಿಸಬೇಕು ಮತ್ತು ಪ್ರತಿಯೊಬ್ಬರೂ ನಿಜವಾದ ಸಂತ್ರಸ್ತ ವಿದ್ಯಾರ್ಥಿಗಳ ಪರವಾಗಿ ನಿಲ್ಲಬೇಕು. ಇದನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.
ಜುಲೈ 18 ರಂದು ಜಂತರ್ ಮಂತರ್‌ನಲ್ಲಿ 21 ದಿನಗಳ ಸುದೀರ್ಘ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಪ್ರಸಿದ್ಧ ಪರಿಸರ ಮತ್ತು ಶಿಕ್ಷಣ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ತೆರವುಗೊಳಿಸಿದ ನಂತರ ಈ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ, ವೈದ್ಯಕೀಯ ಸಲಹೆ ಹಾಗೂ ದೆಹಲಿ ಹೈಕೋರ್ಟ್ ಆದೇಶದಂತೆ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.
55
ಪರೀಕ್ಷಾ ಅಕ್ರಮ ಖಂಡಿಸಿ ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು
ದೇಶಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (ನೀಟ್ ಸೇರಿದಂತೆ) ನಡೆದಿದೆ ಎನ್ನಲಾದ ಭಾರಿ ಅಕ್ರಮ ಹಾಗೂ ಪೇಪರ್ ಲೀಕ್ ಪ್ರಕರಣಗಳನ್ನು ಖಂಡಿಸಿ ಸೋನಮ್ ವಾಂಗ್ಚುಕ್ ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಿರಂತರ ಹೋರಾಟ ನಡೆಸುತ್ತಿವೆ. ಈ ಹೋರಾಟದ ಸುತ್ತಲೂ ಈಗ ಮಾರ್ಕೆಟಿಂಗ್ ಮತ್ತು ಹಣದ ವ್ಯವಹಾರ ನಡೆಯುತ್ತಿದೆ ಎಂಬ ಆಕಾಂಕ್ಷಾ ಪುರಿ ಅವರ ಹೇಳಿಕೆಯು ತೀವ್ರ ಸಂಚಲನ ಮೂಡಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.