ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ದಿವಾನ್ ತಂಗಿ ಸುಧಾ ಪಾತ್ರದಲ್ಲಿ ನಟಿಸುತ್ತಿದ್ದ ನಟಿ ಮೇಘಾ ಶೆಣೈ ತಮ್ಮ ಬಹುಕಾಲದ ಗೆಳಯ ಭರತ್ ಸಿಂಗ್ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಸ್ಟ್ ಮ್ತಾರೀಡ್ ಎಂದು ನಟಿ ಮದುವೆ ವಿಡೀಯೋ ಪೋಸ್ಟ್ ಮಾಡಿದ್ದಾರೆ.
ಅಮೃತಧಾರೆ ಧಾರಾವಾಹಿಯಲ್ಲಿ ಸುಧಾ ಪಾತ್ರದ ಮೂಲಕ ಗಮನ ಸೆಳೆದ ನಟಿ ಮೇಘಾ ಶೆಣೈ ಇದೀಗ ತಮ್ಮ ಬಹುಕಾಲದ ಗೆಳೆಯ ಭರತ್ ಸಿಂಗ್ ಜೊತೆ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
27
ಭರತ್ ಸಿಂಗ್ ಜೊತೆ ಅದ್ದೂರಿ ವಿವಾಹ
ಮೇಘಾ ಶೆಣೈ ಮತ್ತು ಭರತ್ ಸಿಂಗ್ ವಿವಾಹವು ನವಂಬರ್ 10ರಂದು ಕುಟುಂಬದ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆದಿದೆ. ನಟಿ Just married, deeply blessed ಎಂದು ಕ್ಯಾಪ್ಶನ್ ಕೊಟ್ಟು ತಮ್ಮ ಮದುವೆ ವಿಡಿಯೋವನ್ನು ಶೇರ್ ಮಾಡಿದ್ದಾರೆ. ನಟಿಗೆ ಅಭಿಮಾನಿಗಳು ಮದುವೆಯ ಶುಭಾಶಯ ತಿಳಿಸಿದ್ದಾರೆ.
37
ಆಗಸ್ಟ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ
ಮೇಘಾ ಶೆಣೈ ಮಂಗಳೂರಿನವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ಮೇಘಾ, ಆಗಸ್ಟ್ 21 ರಂದು ತಮ್ಮ ಗೆಳೆಯ ಭರತ್ ಸಿಂಗ್ ಜೊತೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಮೇಘಾ ಶೆಣೈ ಅರಶಿನ ಶಾಸ್ತ್ರದ ಫೋಟೊಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ಹಂಚಿಕೊಂಡಿದ್ದರು. ಇದರ ಜೊತೆ ಜೊತೆಗೆ ಮೆಹೆಂದಿ ಮತ್ತು ಹಳದಿ ಶಾಸ್ತ್ರದ ಒಂದಷ್ಟು ಫೋಟೊ ವಿಡಿಯೋಗಳನ್ನು ಸಹ ನಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
57
ಭರತ್ ಸಿಂಗ್ ಯಾರು?
ಭರತ್ ಸಿಂಗ್ ಯಾರು? ಅವರ ಉದ್ಯೋಗದ ಬಗ್ಗೆ ಮಾಹಿತಿ ಇಲ್ಲ. ಆದರೆ ಇವರು ಉತ್ತರ ಭಾರತದ ಮೂಲದವರಾಗಿದ್ದು, ಬೆಂಗಳೂರಿನಲ್ಲೇ ನೆಲೆಸಿದ್ದಾರೆ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲೂ ಭರತ್ ಸಿಂಗ್ ಲೋ ಪ್ರೊಫೈಲ್ ಮೆಂಟೈನ್ ಮಾಡಿದ್ದು, ಹಾಗಾಗಿ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ.
67
ಮೇಘಾ ನಟನಾ ಜರ್ನಿ ಶುರುವಾಗಿದ್ದು ಯಾವಾಗ?
‘ಸುಂದರಿ' ಧಾರಾವಾಹಿಯ ಮೂಲಕ ನಟನೆ ಜರ್ನಿ ಶುರು ಮಾಡಿದ ಮೇಘಾ ಬಳಿಕ 'ಬ್ರಾಹ್ಮಿನ್ಸ್ ಕೆಫೆ', .ಜನುಮದ ಜೋಡಿ' ಧಾರಾವಾಹಿಯಲ್ಲಿ ಅಭಿನಯಿಸಿದರು. ನಂತ್ರ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ 'ಕಾವೇರಿ' ಧಾರಾವಾಹಿಯಲ್ಲಿ ವಿಲನ್ ಆಗಿ ಸದ್ದು ಮಾಡಿದರು.
77
ಮೇಘಾ ಶೆಣೈ ನಟಿಸಿದ ಪ್ರಮುಖ ಧಾರಾವಾಹಿಗಳು
ಇದಲ್ಲದೇ 'ಮಹಾದೇವಿ' ಧಾರಾವಾಹಿಯಲ್ಲಿ ಅಧಿಕಾರಿ ರಶ್ಮಿಯಾಗಿ, 'ರಕ್ಷಾಬಂಧನ' ಧಾರಾವಾಹಿಯಲ್ಲಿ ನಾಯಕನ ಪ್ರೇಯಸಿಯಾಗಿ, 'ಆರತಿಗೊಬ್ಬ ಕೀರ್ತಿಗೊಬ್ಬ' ಧಾರಾವಾಹಿಯಲ್ಲಿ ಕೀರ್ತಿ ಆಗಿ ಕಾಣಿಸಿಕೊಂಡಿದ್ದರು. ನಂತರ ಜೀವ ಹೂವಾಗಿದೆ ಧಾರಾವಾಹಿಯಲ್ಲಿ ನಟಿಸಿದ್ದರು. ಸದ್ಯ ಅಮೃತಧಾರೆಯಲ್ಲಿ ಸುಧಾ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ.