ರಾಜೇಶ್ ನಟರಂಗ ಕುರಿತು ಹೇಳುವುದಾದರೆ, ಅವರು 'ಸ್ಮಶಾನ' ಮತ್ತು 'ಕುರುಕ್ಷೇತ್ರ' ಧಾರಾವಾಹಿಯ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಗುರುತಿಸಿಕೊಳ್ಳುವ ಮೂಲಕ ಕಿರುತೆರೆಗೆ ಕಾಲಿಟ್ಟವರು. 'ಮಾಯಾಮೃಗ' ಧಾರಾವಾಹಿಯಲ್ಲಿ ಮೊದಲ ಬಾರಿ ಬಣ್ಣ ಹಚ್ಚಿದ ರಾಜೇಶ್ ನಟರಂಗ ಮುಂದೆ 'ಮುಕ್ತ', 'ಬದುಕು', 'ಶಕ್ತಿ', 'ಗುಪ್ತಗಾಮಿನಿ', 'ನಾನೂ ನನ್ನ ಕನಸು' ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗೌತಮ್ ಪಾತ್ರಕ್ಕೆ ಜೀವ ತುಂಬಿರುವ ರಾಜೇಶ್, ಪೋಷಕನಟನಾಗಿ, ಖಳನಟನಾಗಿ ಕನ್ನಡ ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಕೂಡ ತಮ್ಮದೇ ಆದ ಛಾಪನ್ನ ಮೂಡಿಸಿದ್ದಾರೆ. ಅವರ ಅಭಿನಯಕ್ಕೆ ನಿಬ್ಬೆರಗಾಗದವರೇ ಇಲ್ಲ.