Bigg Bossಗೆ ಅವಕಾಶ ಸಿಗದಿದ್ರೂ ಸಿಕ್ಕಿತು 5 ಲಕ್ಷ ಬಹುಮಾನದ ಜೊತೆ ಭರ್ಜರಿ ಜಾಬ್ ಆಫರ್​- ಕುಮಾರಿಗೆ ಒಲಿದ ಅದೃಷ್ಟ​

Published : Aug 31, 2026, 08:20 PM IST

‘ಬಿಗ್​ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಮುಗ್ಧತೆಯಿಂದ ಮನಗೆದ್ದಿದ್ದ ಸ್ಪರ್ಧಿ ಕುಮಾರಿ, ಆರೋಗ್ಯ ಸಮಸ್ಯೆಯಿಂದಾಗಿ ಸ್ಪರ್ಧೆಯಿಂದ ಹೊರನಡೆದರು. ಆದರೆ, ಅವರ ಕಣ್ಣೀರಿಗೆ ಅನಿರೀಕ್ಷಿತವಾಗಿ 5 ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಶಿಕ್ಷಣದ ನಂತರ ಉದ್ಯೋಗದ ಅವಕಾಶ ಸಿಕ್ಕಿದೆ.

PREV
16
60 ಮಂದಿ ಆಯ್ಕೆ

ಬಿಗ್​ಬಾಸ್ ಅಗ್ನಿಪರೀಕ್ಷೆ (Bigg Boss Agni Pareekshe)ಯಲ್ಲಿ ಬಿಗ್​ಬಾಸ್​ಗೆ ಹೋಗುವ ಆಸೆಯಿಂದ ಲಕ್ಷಾಂತರ ಮಂದಿ ಅರ್ಜಿ ಸಲ್ಲಿಸಿದ್ದರು. ಅವರ ಪೈಕಿ 60 ಮಂದಿ ಫೈನಲ್​ ಆಗಿ ಆಯ್ಕೆಯಾಗಿದ್ದರು. ಮೂವರನ್ನು ಮಾತ್ರ ಬಿಗ್​ಬಾಸ್​ ಮನೆಯೊಳಕ್ಕೆ ಕಳುಹಿಸುವುದಾಗಿ ಹೇಳಲಾಗಿದೆ.

26
ಮನಗೆದ್ದ ಕುಮಾರಿ

ಅವರ ಪೈಕಿ ಕುಮಾರಿ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ‘ನಾನು ಹಳ್ಳಿ ಹುಡುಗಿ ಕುಮಾರಿ’ ಅಂತ ಹೇಳಿಕೊಂಡು ಎಂಟ್ರಿ ಕೊಟ್ಟಿದ್ದರು ಲಾವಣ್ಯ ಕುಮಾರಿ. ರಕ್ಷಿತಾ ಶೆಟ್ಟಿ ಅವರನ್ನು ನೆನಪಿಸುವಂತೆ ಸಕತ್​ ಜೋಕ್​ ಮಾಡುತ್ತಿದ್ದರು ಕುಮಾರಿ. ಮುಗ್ಧವಾಗಿ ಮಾತನಾಡಿ ನಾಲ್ಕೂ ಜಡ್ಜಸ್​ ಮನೆ ಗೆದ್ದಿದ್ದರು. ‘ಸ್ಟಾರ್ ಕಂಟೆಂಡರ್’ ಆಗಿ ಸೆಲೆಕ್ಟ್ ಕೂಡ ಆಗಿದ್ದರು.

36
ವೈದ್ಯರ ಸಲಹೆ

ಆದರೆ ಷೋನಲ್ಲಿ ಮುಂದುವರೆಯಲು ಅವರಿಗೆ ಅವಕಾಶ ಸಿಗಲಿಲ್ಲ. ಆ್ಯಂಕರ್​ ನಿರಂಜನ್​ ಈ ಬಗ್ಗೆ ಹೇಳಿದ್ದರು. ಕುಮಾರಿ ಅವರು ಬಿಗ್​ಬಾಸ್​ ಆಟ ಮುಂದುವರೆಸದಂತೆ ವೈದ್ಯರು ಸಲಹೆ ನೀಡಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ. ಇದೇ ಕಾರಣಕ್ಕೆ, ವೈದ್ಯರ ಸಲಹೆ ಮೇರೆಗೆ ಬಿಗ್​ಬಾಸ್​ನಿಂದ ಹೊರಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನು ಕೇಳಿ ತೀರ್ಪುಗಾರರು ಬೇಸರ ಪಟ್ಟುಕೊಂಡಿದ್ದರು.

46
ಕುಮಾರಿ ಕಣ್ಣೀರು

ಬಳಿಕ ಕುಮಾರಿ, ಅಳುತ್ತಲೇ, ನಾನು ಹುಟ್ಟಿದಾಗಿನಿಂದ ಒಂದು ದಿನನೂ ಬೆಂಗಳೂರು ನೋಡೇ ಇರಲಿಲ್ಲ. ಹಾಗಾಗಿ ನಾನು ಊರಿಂದ ಬರುವಾಗ ಎಲ್ಲನೂ ಎಂಜಾಯ್ ಮಾಡಿಕೊಂಡು ಬಂದೆ. ನಾನು ವಾಪಸ್ ಹೋದ್ರೆ ಯಾವಾಗ ಬರುತ್ತೇನೆ ಗೊತ್ತಿಲ್ಲ. ಇದು ಲಾಸ್ಟ್ ಆಗುತ್ತದೆ ಅನ್ನೋದು ನನಗೆ ಬೇಜಾರ್ ಆಗುತ್ತಿದೆ ಎಂದು ಕಣ್ಣೀರಿಟ್ಟಿದ್ದಾರೆ.

56
5 ಲಕ್ಷ ಬಹುಮಾನ

ಆದರೆ ಅದೃಷ್ಟ ಎನ್ನುವುದು ಹೇಗೆ ಬೇಕಾದರೂ ಬರುತ್ತದೆ ಎನ್ನುವುದಕ್ಕೆ ಕುಮಾರಿ ಸಾಕ್ಷಿಯಾಗಿದ್ದಾರೆ. ಅವರ ಮುಗ್ಧತೆಗೆ ಈಗ ಭರ್ಜರಿ ಆಫರ್​ ಸಿಕ್ಕಿದೆ. ಕಾರ್ಯಕ್ರಮದ ಪ್ರಾಯೋಜಕರಾದ ‘ಇಕೋ ಪ್ಲ್ಯಾನೆಟ್ ಎಲಿವೇಟರ್’ ಸಂಸ್ಥೆಯು ಕುಮಾರಿಗೆ 5 ಲಕ್ಷ ನಗದನ್ನು ಸಹಾಯವಾಗಿ ನೀಡಿದೆ.

66
ಜಾಬ್ ಆಫರ್

ಇಷ್ಟೇ ಅಲ್ಲದೆ, ಕುಮಾರಿಯ ಶಿಕ್ಷಣ ಪೂರ್ಣಗೊಂಡ ಬಳಿಕ ಸಂಸ್ಥೆಯ ವತಿಯಿಂದ ಮತ್ತೊಂದು ದೊಡ್ಡ ಅವಕಾಶವನ್ನೂ ಘೋಷಿಸಲಾಗಿದೆ. ಕರ್ನಾಟಕದಲ್ಲಿರುವ ಸಂಸ್ಥೆಯ ಯಾವುದೇ ಶಾಖೆಯಲ್ಲಿ ಅಥವಾ ದುಬೈನಲ್ಲಿರುವ ಸಂಸ್ಥೆಯ ಶಾಖೆಯಲ್ಲಿ ಉದ್ಯೋಗ ಪಡೆಯುವ ಅವಕಾಶವನ್ನು ಕುಮಾರಿಗೆ ನೀಡಲಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories