ಅವರು ಈ ಹಿಂದೆ, ನಿಮಗೆ ಯಾರಾದರೂ ಕ್ರಶ್ ಇದ್ದಾರಾ ಎಂದು ಏಷಿಯಾನೆಟ್ ಸುವರ್ಣ ನ್ಯೂಸ್ ಪ್ರಶ್ನೆ ಮಾಡಿದ್ದಾಗ, ಹೌದು, ಕಳೆದ ಐದು ವರ್ಷದಿಂದ ಒಬ್ಬರೇ ನನಗೆ ಕ್ರಶ್ ಇದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಈಚೆಗೆ, ಚಿಕ್ಕಮಗಳೂರಿಗೆ ಹೋಗಿದ್ದರು. ಅಲ್ಲಿ ಸಹೋದರನ ಮದುವೆ ಎಂದು ಕ್ಯಾಪ್ಶನ್ ನೀಡಿ, ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳ ಮಧ್ಯೆ ಒಂದು ಫೋಟೋಕ್ಕೆ ದೃಷ್ಟಿ ತಾಕದೆ ಇರುವಂತೆ ಮಾಡುವ ಇಮೋಜಿ ಹಾಕಿದ್ದರು, ಆಗಲೇ ಭವ್ಯಾ ಗೌಡ ಅವರ ಪ್ರಿಯಕರ ಇವರೇ ಇರಬಹುದಾ ಎಂಬ ಪ್ರಶ್ನೆ ಬಂದಿತ್ತು.