ಬಿಗ್‌ಬಾಸ್ ಕಾರ್ಯಕ್ರಮದ ನಿರೂಪಕ ಸುದೀಪ್ ಅವರು ರಣಹದ್ದುಗಳ ಬಗ್ಗೆ ನೀಡಿದ ಹೇಳಿಕೆಯಿಂದಾಗಿ ಅರಣ್ಯ ಇಲಾಖೆಯು ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ. ಅಳಿವಿನಂಚಿನಲ್ಲಿರುವ ಪಕ್ಷಿಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಸ್ಪಷ್ಟೀಕರಣ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಬಿಗ್‌ಬಾಸ್ ಅಂದ್ರೆ ವಿವಾದ ಎಂಬ ಮಾತುಗಳಿವೆ. ಬಿಗ್‌ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಾಡುವ ಮಾತುಗಳು ಹೊರಗೆ ವಿವಾದದ ರೂಪ ಪಡೆದುಕೊಳ್ಳುತ್ತವೆ. ಈ ಸಂಬಂಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗುತ್ತಿರುತ್ತವೆ. ಈ ಬಾರಿಯಂತೂ ಸುಮಾರು 48 ಗಂಟೆಗಳ ಕಾಲ ಬಿಗ್‌ಬಾಸ್ ಮನೆಗೆ ಸರ್ಕಾರ ಬೀಗ ಹಾಕಿತ್ತು.
25
ಮತ್ತೊಂದು ಸಂಕಷ್ಟ
ಇಂದು ಬಿಗ್‌ಬಾಸ್ ಫಿನಾಲೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿಯೇ ಬಿಬಿ ಹೌಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಗ್‌ಬಾಸ್ ಸೀಸನ್ 12ರ ವಿನ್ನರ್ ಯಾರು ಎಂಬ ಚರ್ಚೆ ನಡೆಯುತ್ತಿದೆ. ಇದೀಗ ಆರಣ್ಯ ಇಲಾಖೆಯಿಂದ ಬಿಗ್‌ಬಾಸ್ ಆಯೋಜಕರಿಗೆ ನೋಟಿಸ್ ನೀಡಲಾಗಿದೆ.
35
ಟ್ರಸ್ಟ್‌ನಿಂದ ಅರಣ್ಯ ಇಲಾಖೆಗೆ ಪತ್ರ
ಕೆಲ ವಾರಗಳ ಹಿಂದೆ ಬಿಗ್‌ಬಾಸ್ ಕಾರ್ಯಕ್ರಮದ ನಿರೂಪಕ, ನಟ ಸುದೀಪ್ ವೇದಿಕೆ ರಣಹದ್ದು ಕುರಿತು ನೀಡಿದ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿತ್ತು. ಸುದೀಪ್ ಹೇಳಿಕೆಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವಿರೋಧ ವ್ಯಕ್ತಪಡಿಸಿತ್ತು. ಈ ಸಂಬಂಧ ಅರಣ್ಯ ಇಲಾಖೆಗೆ ಟ್ರಸ್ಟ್ ಪತ್ರ ಬರೆದಿತ್ತು.
ತಪ್ಪು ಮಾಹಿತಿ ಹರಡಿದ ಆರೋಪದಡಿ ಅರಣ್ಯ ಇಲಾಖೆಯ ಡಿಆರ್‌ಎಫ್‌ಒ ಸುಷ್ಮಾ ಅವರು ಖಾಸಗಿ ಚಾನೆಲ್‌ನ ಪ್ರೋಗ್ರಾಂ ಹೆಡ್‌ಗೆ ತಿಳುವಳಿಕೆ ನೋಟಿಸ್ ನೀಡಿದ್ದಾರೆ. ನಟ ಸುದೀಪ್ ಅವರ ಹೇಳಿಕೆ ಪಕ್ಷಿ ಪ್ರೇಮಿಗಳಿಗೆ ಬೇಸರ ತರಿಸಿದ್ದು, ಅಳಿವಿನಂಚಿನಲ್ಲಿರುವ ಪಕ್ಷಿ ಉಳಿವಿಗೆ ಹಿನ್ನಡೆಯಾಗಲಿದೆ. ಹಾಗಾಗಿ ಹದ್ದು ಹಾಗೂ ರಣಹದ್ದಿಗೂ ಇರುವ ವ್ಯತ್ಯಾಸದ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ.
ಬಿಗ್‌ಬಾಸ್‌ನ ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ನಟ ಸುದೀಪ್ ಅವರು ರಣಹದ್ದು ‘ಹೊಂಚು ಹಾಕಿ ಸಂಚು ಮಾಡಿ ಲಬಕ್ ಅಂತ ಹಿಡಿಯುವುದು’ ಎಂದು ಹೇಳಿದ್ದರು. ತಪ್ಪು ಮಾಹಿತಿ ಹರಡಿದ್ದಾರೆ ಎಂದು ರಣಹದ್ದು ಸಂರಕ್ಷಣಾ ಟ್ರಸ್ಟ್‌ನ ಪದಾಧಿಕಾರಿಗಳು ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.