ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಎಲ್ಲಿ ಹೋಗಿದ್ದಾರೆ, ಏನ್ ಮಾಡ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಇದೀಗ ದಿವ್ಯಾ ಬಗ್ಗೆ ಹೊಸ ಸುದ್ದಿ ವೈರಲ್ ಆಗಿದೆ. ನಟಿ ದಿವ್ಯಾ ಮತ್ತೆ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.
ದಿವ್ಯಾ ಸುರೇಶ್ ಹೊಸ ಧಾರಾವಾಹಿಯಲ್ಲಿ ನಟಿಸುತ್ತಿದ್ದು ಸದ್ಯದಲ್ಲೇ ಪ್ರಸಾರವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದಹಾಗೆ ಈಗಾಗಲೇ ದಿವ್ಯಾ ಹೊಸ ಧಾರಾವಾಹಿಯ ಲುಕ್ ವೈರಲ್ ಆಗಿದೆ.
ದಿವ್ಯಾ ನಾಗಿಣಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಡ್ರೆಸ್ ನಲ್ಲಿ ನಾಗಿಣಿ ಅವತಾರದಲ್ಲಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ಅಭಿಮಾನಿಗಳು ಪಕ್ಕಾ ಇದು ನಾಗಿಣಿ ಧಾರಾವಾಹಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಮೂಲಗಳ ಪ್ರಕಾರ ದಿವ್ಯಾ ಐತಿಹಾಸಿಕ ಧಾರಾವಾಹಿಯಲ್ಲಿ ನಟಿಸುತ್ತಿದ್ದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ದಿವ್ಯಾ ಯಾವುದೇ ಮಾಹಿತಿ ರಿವೀಲ್ ಮಾಡಿಲ್ಲ.
ಬಿಗ್ ಬಾಸ್ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಚಿರಪರಿಚಿತರಾದ ದಿವ್ಯಾ ಬಿಗ್ ಬಾಸ್‌ನಲ್ಲಿ ಭಾಗಿಯಾಗುವ ಮೊದಲೇ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ಹೇಳಿಕೊಳ್ಳುವಷ್ಟು ಹೆಸರು ತಂದುಕೊಟ್ಟಿಲ್ಲ.
ದಿವ್ಯಾ ನಟನೆಯ 9 ಹಿಲ್ಟನ್ ಹೌಸ್ ಸಿನಿಮಾ 2017ರಲ್ಲಿ ರಿಲೀಸ್ ಆಗಿತ್ತು. ಇನ್ನು ಡಿಗ್ರಿ ಕಾಲೇಜ್ ಸಿನಿಮಾ 2019ರಲ್ಲಿ ರಿಲೀಸ್ ಆಗಿತ್ತು. ಆದರೆ ಈ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿಲ್ಲ. ಇನ್ನು ಮೈ ಹೆಂಡ್ತಿ ಎಂಬಿಬಿಎಸ್, ಜೋಡಿ ಹಕ್ಕಿ, ನೈಟ್ ಔಟ್ ಧಾರಾವಾಹಿಗಳಲ್ಲಿ ನಟಿಸಿದ್ದರು.