ಬಿಗ್‌ಬಾಸ್‌ ಆರಂಭಕ್ಕೆ ಕಂಟಕ? ಅನುಮತಿ ಸುತ್ತ ಅನುಮಾನದ ಹುತ್ತ, ಅರ್ಜಿಯೇ ಸಲ್ಲಿಸಿಲ್ಲ

Published : Sep 02, 2026, 07:12 AM IST

ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭದ ಬಗ್ಗೆ ಪ್ರೋಮೋಗಳು ಬಿಡುಗಡೆಯಾಗುತ್ತಿದ್ದರೂ, ಶೋ ನಡೆಸಲು ಜಿಲ್ಲಾಡಳಿತದಿಂದ ಯಾವುದೇ ಅನುಮತಿ ಕೋರಿ ಅರ್ಜಿ ಬಂದಿಲ್ಲ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

PREV
16
ರಿಯಾಲಿಟಿ ಶೋ ಅನುಮತಿಗಾಗಿ ಇಲ್ಲಿವರೆಗೆ ಯಾವುದೇ ಅರ್ಜಿ ಬಂದಿಲ್ಲ

ಖಾಸಗಿ ವಾಹಿನಿ ನಡೆಸುವ ಬಿಗ್ ಬಾಸ್ ರಿಯಾಲಿಟಿ ಶೋ ಅನುಮತಿಗಾಗಿ ಇಲ್ಲಿವರೆಗೆ ಯಾವುದೇ ಅರ್ಜಿ ಬಂದಿಲ್ಲ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್‌ ವಿ. ಗುರುಕರ್‌ ಪ್ರತಿಕ್ರಿಯಿಸಿದ್ದಾರೆ. ಇದೇ ಸೆಪ್ಟೆಂಬರ್ 6ರಿಂದ ಬಿಗ್‌ಬಾಸ್ ಶೋ ಆರಂಭವಾಗಲಿದೆ ಎಂದು ವಾಹಿನಿ ಹೇಳಿಕೊಂಡಿದೆ. ಈ ಸಂಬಂಧ ಪ್ರೋಮೋಗಳನ್ನ ಸಹ ಬಿಡುಗಡೆ ಮಾಡಲಾಗುತ್ತಿದೆ.

26
ಜಾಲಿವುಡ್‌ ಸ್ಟುಡಿಯೋ

ಬಿಗ್‌ಬಾಸ್ ಶೋ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾಲಿವುಡ್‌ ನವರು ಮಾಲಿನ್ಯನಿಯಂತ್ರಣ ಮಂಡಳಿಯಲ್ಲಿ ಕನ್ಸೆಂಟ್ ಫಾರ್‌ಎಸ್ಟಾಬ್ಲಿಷ್‌ಮೆಂಟ್‌ಗೆ ಅನುಮತಿ ಪಡೆ ದಿದ್ದಾರೆ. ಅಪೂರ್ವಲ್ ಆಗುವುದಕ್ಕೆ ಬೋರ್ಡ್‌ನಲ್ಲಿ ಪೆಂಡಿಂಗ್ ಇದೆ. ಮಂಡಳಿಯ ಸೂಚನೆಯಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

36
ಜಿಲ್ಲಾಧಿಕಾರಿಗಳಿಂದ ಮಾಹಿತಿ

ಆದರೆ ಬಿಗ್‌ಬಾಸ್ ಶೋ ನಡೆಸಲು ಅನುಮತಿಗೆ ಯಾವುದೇ ಅರ್ಜಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ್‌ ವಿ. ಗುರುಕರ್‌ ಹೇಳಿದ್ದಾರೆ. ಜಿಲ್ಲಾಡಳಿತಕ್ಕೆ ಯಾವುದೇ ಅರ್ಜಿಗಳು ಬಂದಿಲ್ಲ. ಹಾಗೂಂದು ವೇಳೆ ಅರ್ಜಿ ಬಂದ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

46
ನಿಯಮ ಪಾಲಿಸಿದರೆ ಬಿಗ್‌ಬಾಸ್‌ಗೆ ಅನುಮತಿ ನೀಡ್ತೇವೆ: ರಾಮಲಿಂಗಾರೆಡ್ಡಿ

ಬಿಗ್‌ಬಾಸ್‌ ಕಾರ್ಯಕ್ರಮವನ್ನು ಲಕ್ಷಾಂತರ ಜನ ನೋಡುತ್ತಾರೆ. ನಾವು ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಿಲ್ಲ. ಅವರು ಸರಿಯಾಗಿ ದಾಖಲೆ ನೀಡಿ, ನಿಯಮ ಪಾಲಿಸಿದರೆ ಅನುಮತಿ ನೀಡುತ್ತೇವೆ ಎಂದು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

56
ಅನುಮತಿ ಕೇಳಿ ಪತ್ರ

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ನಮ್ಮ ಇಲಾಖೆಗೆ ಅನುಮತಿ ಕೇಳಿ ಪತ್ರ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಲು ಆಗುವುದಿಲ್ಲ ಎಂದರು.

66
ಜಾಲಿವುಡ್ ಸ್ಟುಡಿಯೋಸ್​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್-13’ ರಿಯಾಲಿಟಿ ಶೋಗೆ ಸೆಟ್

ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್-13’ ರಿಯಾಲಿಟಿ ಶೋಗೆ ಸೆಟ್ ಹಾಕಲಾಗಿದೆ. ಆದರೆ ಶೋ ನಡೆಸಲು ಬೇಕಿರುವ ಅಗತ್ಯ ಅನುಮತಿ ಪಡೆಯಲು ಆಯೋಜಕರು ಅರ್ಜಿಯನ್ನೇ ಸಲ್ಲಿಸಿಲ್ಲ. ಇದೆಲ್ಲ ನೋಡಿದರೆ ನಿಗದಿತ ಸಮಯದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಆರಂಭ ಆಗುತ್ತಾ ಎಂಬ ಅನುಮಾನ ಶುರುವಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories