ಸ್ಯಾಂಡಲ್‌ವುಡ್‌ನಲ್ಲಿ ನಟಿ ಔಕಾಬಾರ ಸಿನಿಮಾದಲ್ಲಿ ಎರಡನೇ ನಾಯಕಿಯಾಗಿ ನಟಿಸಿದ್ದರು. ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿ ಬ್ಯುಸಿಯಾದರು. ಮೂಲತಃ ನಮ್ಮವರೇ, ನೋಟದ ಪುಟಗಳು (Notada Putagalu) ಎನ್ನುವ ಸಿನಿಮಾಗಳಲ್ಲಿ ಇವರು ನಟಿಸಿದ್ದರು. ಕಾವ್ಯ ರಮೇಶ್ ಕೇವಲ ಕನ್ನಡದಲ್ಲಿ ಮಾತ್ರವಲ್ಲ ತೆಲುಗು ಸಿನಿಮಾಗಳಲ್ಲೂ ಅಭಿನಯಿಸಿ ಸೈ ಎನಿಸಿಕೊಂಡರು. ತೆಲುಗಿನ ನಚ್ಚಿನಾವುಡು, ಆರ್.ಸಿ.ಎಂ.ಪುರಂ ಸಿನಿಮಾಗಳಲ್ಲಿ ನಟಿಸುವ ಮೂಲಕ ತೆಲುಗು ಪ್ರೇಕ್ಷಕರಿಗೂ ಇಷ್ಟವಾಗಿದ್ದರು.