ದುರ್ಗಾ ಪಾತ್ರಧಾರಿ ರಿಷಿಕಾ ಕುರಿತು ಹೇಳುವುದಾದರೆ, ರಿಷಿಕಾಗೆ ಇದು ನಾಲ್ಕನೇ ಧಾರಾವಾಹಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಕನ್ಯಾಕುಮಾರಿ' ಧಾರಾವಾಹಿಯಲ್ಲಿ ನಾಯಕನ ತಂಗಿ ಐಶ್ವರ್ಯಾ ಆಗಿ ಕಿರುತೆರೆಗೆ ಎಂಟ್ರಿ ಕೊಟ್ಟರು. ಮೊದಲ ಸೀರಿಯಲ್ನಲ್ಲಿ ಸೈಡ್ ರೋಲ್ನಲ್ಲಿ ಕಾಣಿಸಿಕೊಂಡಿದ್ದರೂ, ನಟನೆಯ ಮೂಲಕ ಕಿರುತೆರೆ ವೀಕ್ಷಕರ ಮನ ಸೆಳೆದರು. ಬಳಿಕ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಕನ್ಯಾದಾನ' ಧಾರಾವಾಹಿಯಲ್ಲಿ ಚಿತ್ರಾ ಆಗಿ ನಟಿಸಿದ ಈಕೆ ಅಲ್ಲೂ ತಮ್ಮ ನಟನೆಯ ಮೂಲಕ ಗುರುತಿಸಿಕೊಂಡ ಪ್ರತಿಭೆ.