ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಕಂಠಿ ಪಾತ್ರದ ಮೂಲಕ ಜನಪ್ರಿಯತೆ ಪಡೆದ ನಟ ಧನುಷ್ ಇದೀಗ ಭರ್ಜರಿಯಾಗಿ ಚಂದನವನಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಈಗಾಗಲೇ ಸಿನಿಮಾ ಮುಹೂರ್ತ ಕೂಡ ನಡೆದಿದೆ. ಯಾವ ಸಿನಿಮಾ? ನಾಯಕಿ ಯಾರು? ಇಲ್ಲಿದೆ ಮಾಹಿತಿ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಾಯಕ ಕಂಠಿ ಪಾತ್ರದ ಮೂಲಕ ಜನರಿಗೆ ಚಿರಪರಿಚಿತರಾದ ನಟ ಧನುಷ್ ಎನ್ ಇದೀಗ ಚಂದನವನಕ್ಕೆ ಎಂಟ್ರಿ ಕೊಡಲು ತಯಾರಾಗಿ ನಿಂತಿದ್ದಾರೆ. ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
25
ಹೊಸ ಸಿನಿಮಾ ಮುಹೂರ್ತ
ಕಂಠಿಯಾಗಿ ಕರುನಾಡ ಜನಮನ ಗೆದ್ದ ಧನುಷ್, ಸದ್ಯದಲ್ಲೇ ನಾಯಕನಾಗಿ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ಬಂಡೆಕಾಳಿ ದೇವಸ್ಥಾನದಲ್ಲಿ ಸಿನಿಮಾ ಮುಹೂರ್ತ ಅದ್ಧೂರಿಯಾಗಿ ನಡೆದಿದೆ. ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಪ್ರೊಡಕ್ಷನ್ ನಂ 2ʼ ಹೆಸರಿನಲ್ಲಿ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನೆರವೇರಿದೆ.
35
ಟಗರು ಪಲ್ಯ ನಿರ್ದೇಶಕರ ಹೊಸ ಪ್ರಯತ್ನ
ʻಟಗರು ಪಲ್ಯʼ ಸಿನಿಮಾ ಮೂಲಕ ಅಪಾರ ಮೆಚ್ಚುಗೆ ಪಡೆದುಕೊಂಡ ನಿರ್ದೇಶಕ ಉಮೇಶ್ ಕೆ ಕೃಪ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇದು ನಿರ್ದೇಶಕರ ಎರಡನೇ ಸಿನಿಮಾ ಆಗಿದೆ. ಮತ್ತೊಂದು ಹೊಸ ಕಥೆಯೊಂದಿಗೆ ನಿರ್ದೇಶಕರು ತಯಾರಿ ನಡೆಸಿದ್ದಾರೆ. ಆಕಾಂಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಗೇಶ್ ವಾಸ್ಟರ್ ಅವರು ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ.
ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಎಲ್ಲವನ್ನೂ ನಿರ್ದೇಶಕ ಉಮೇಶ್ ಕೆ ಕೃಪ ಅವರೇ ಮಾಡಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಹಣ, ಪಳನಿ ಡಿ ಸೇನಾಪತಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಎ ಸತೀಶ್ ಅವರ ಕಲಾ ನಿರ್ದೇಶನ, ಎಚ್ ಜಗದೀಶ್ ರಾವ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
55
ಧನುಷ್ ಗೆ ನಾಯಕಿಯಾದ ಮನಸ್ವಿ
ಇನ್ನು ಧನುಷ್ ಅವರಿಗೆ ಕನ್ನಡ ಕಿರುತೆರೆಯ ಮತ್ತೊಬ್ಬ ನಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಸದ್ಯ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೈ ಲಲಿತಾ ಧಾರಾವಾಹಿ ನಾಯಕಿ ಲಲಿತಾ ಪಾತ್ರಧಾರಿ ಮನಸ್ವಿ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.