ಆಶಾ ಕಾರ್ಯಕರ್ತೆಯರ ಧರಣಿಗೆ ಗೌತಮಿ ಜಾಧವ್ ಬೆಂಬಲ: 'ಪ್ರತಿಭಟನೆ ಮಾಡಿ ಹಕ್ಕು ಪಡೆಯೋದು ವಿಪರ್ಯಾಸ' ಎಂದ ನಟಿ

Published : Nov 23, 2026, 06:16 PM IST

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ನಟಿ ಗೌತಮಿ ಜಾಧವ್ ಬೆಂಬಲ ಸೂಚಿಸಿದ್ದಾರೆ. ಅವರ ಕಷ್ಟಗಳನ್ನು ಆಲಿಸಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PREV
15

ಬೆಂಗಳೂರು (ನ.23): ಮಾಸಿಕ ₹15,000 ನಿಗದಿತ ಗೌರವಧನ, ನಿವೃತ್ತಿ ಪರಿಹಾರ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಇದೀಗ ಕಿರುತೆರೆ ಹಾಗೂ ಸಿನಿಮಾ ರಂಗದಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. 'ಸತ್ಯ' ಧಾರಾವಾಹಿ ಖ್ಯಾತಿಯ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಗೌತಮಿ ಜಾಧವ್ ಅವರು ಪ್ರತಿಭಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿದ್ದಾರೆ.

25

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಕಳೆದ ಹಲವು ದಿನಗಳಿಂದ ಬೀದಿಯಲ್ಲೇ ಕುಳಿತು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿದ ಗೌತಮಿ ಜಾಧವ್, ಅವರ ಕಷ್ಟಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸುತ್ತಲೇ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿದರು.

35

- "ಆಶಾ ಕಾರ್ಯಕರ್ತರಾಗಿ ನೀವು ಮಾಡುತ್ತಿರುವ ನಿಸ್ವಾರ್ಥ ಸೇವೆಯ ಮುಂದೆ ನಾನು ಆಡುವ ಮಾತುಗಳು ತುಂಬಾ ಚಿಕ್ಕದು. ನಿಮ್ಮ ಕಷ್ಟ ಮತ್ತು ನೋವು ನನಗೆ ಚೆನ್ನಾಗಿ ಅರ್ಥವಾಗುತ್ತದೆ."

- "ನೀವು ಕಷ್ಟಪಟ್ಟು ದುಡಿಯುತ್ತಿದ್ದೀರಿ, ನಿಮ್ಮ ಶ್ರಮಕ್ಕೆ ತಕ್ಕಂತೆ ನಿಮಗೆ ಸಿಗಬೇಕಾದ ಹಣ ಗೌರವಯುತವಾಗಿ ಸಿಗಬೇಕು. ಆದರೆ, ಪ್ರತಿಯೊಂದನ್ನೂ ಬೀದಿಗಿಳಿದು ಪ್ರತಿಭಟನೆ ಮಾಡಿ ಪಡೆದುಕೊಳ್ಳುವ ಪರಿಸ್ಥಿತಿ ಬಂದಿರುವುದು ನಿಜಕ್ಕೂ ವಿಪರ್ಯಾಸ."

- "ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕಡಿಮೆ ಹಣದಲ್ಲಿ ಜೀವನ ನಡೆಸುವುದು ತುಂಬಾ ಕಷ್ಟ. ಸರ್ಕಾರ ಮನಸ್ಸು ಮಾಡಿದರೆ ನಿಮ್ಮ ಬೇಡಿಕೆಗಳನ್ನು ಬಹಳ ಸುಲಭವಾಗಿ ಈಡೇರಿಸಬಹುದು."

45

- "ಹೆಣ್ಣು ಮಕ್ಕಳು ತಮ್ಮ ಹಕ್ಕಿಗಾಗಿ ಫೈಟ್ ಮಾಡಲು ಯಾವತ್ತೂ ಸಿದ್ಧರಿದ್ದಾರೆ. ನಿಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಗಲೇಬೇಕು. ಆದಷ್ಟು ಬೇಗ ನಿಮ್ಮೆಲ್ಲರ ಬೇಡಿಕೆಗಳು ಈಡೇರಲಿ ಎಂದು ನಾನು ನಿಮ್ಮೆಲ್ಲರ ಪರವಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ."

55

ಹೆಚ್ಚುತ್ತಿರುವ ಜನಬೆಂಬಲ:

ಗ್ರಾಮೀಣ ಹಾಗೂ ನಗರ ಪ್ರದೇಶದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿರುವ ಆಶಾ ಕಾರ್ಯಕರ್ತೆಯರು ಕಳೆದ ಕೆಲವು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈಗಾಗಲೇ ನಟಿ ಕಾರುಣ್ಯಾ ರಾಮ್, ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಸೇರಿದಂತೆ ಹಲವು ಗಣ್ಯರು ಕಾರ್ಯಕರ್ತೆಯರ ಬೇಡಿಕೆಗಳಿಗೆ ಧ್ವನಿಗೂಡಿಸಿದ್ದು, ಇದೀಗ ಗೌತಮಿ ಜಾಧವ್ ಅವರ ಭೇಟಿಯು ಹೋರಾಟನಿರತ ಮಹಿಳೆಯರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories