ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ನಟಿ ವೈಷ್ಣವಿ ಗೌಡ ಅವರು ಸೀತಾರಾಮ ಸೀರಿಯಲ್‌ನಲ್ಲಿ ನಟಿಸುತ್ತಿದ್ದು ಅಭಿಮಾನಿಗಳ ಮನಗೆದ್ದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವೈಷ್ಣವಿ ಗೌಡ ಅವರಿಗೆ 1.4 ಮಿಲಿಯನ್ ಫಾಲೋವರ್ಸ್ ಇದ್ದಾರೆ.
ಗುಳಿ ಕೆನ್ನೆಯ ಚೆಲುವೆ ವೈಷ್ಣವಿ ಗೌಡ ಇದೀಗ ಸ್ಕೂಲ್ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹೊಸ ಫೋಟೋಗಳನ್ನು ನಟಿ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿಕೊಂಡಿದ್ದು, ವಿವಿಧ ಭಂಗಿಗಳಲ್ಲಿ ನಗು ನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.
ಸದ್ಯ ವೈಷ್ಣವಿ ಗೌಡ ಅವರ ಫೋಟೋಗಳಿಗೆ ಭಾರಿ ಕಾಮೆಂಟ್ಸ್ ಹರಿದುಬರುತ್ತಿದೆ. ಐಶೂ.. ಅಲ್ಲ ವೈಶೂ, ಚೆಲುವಿನ ಚಿತ್ತಾರ-2 ಸಿನಿಮಾ ಮಾಡಿದ್ರೆ ವೈಷ್ಣವಿ ಗೌಡನೇ ಹೀರೋಯಿನ್, ಮುದ್ದಾದ ಬೊಂಬೆ ಹುಡುಗಿ, ಬ್ಯೂಟಿಫುಲ್, ನನ್ನ ಫೇವರಿಟ್ ನಟಿ ಎಂದಿದ್ದಾರೆ.
ನಟಿ ವೈಷ್ಣವಿ ಗೌಡ ಈ ಹಿಂದೆ ಅಗ್ನಿಸಾಕ್ಷಿ ಸೀರಿಯಲ್‌ನಲ್ಲಿ ಸನ್ನಿಧಿ ಎಂದೇ ಫೇಮಸ್ ಆದವರು. ಇದೀಗ ಸನ್ನಿಧಿಯ ಜಾಗವನ್ನು ಸೀತೆ ಪಡೆದುಕೊಂಡಿದ್ದಾಳೆ. ಸೀತಾರಾಮ ಸೀರಿಯಲ್ನ ವೈಷ್ಣವಿ ಅವರ ಸೀತಾಳ ಪಾತ್ರ ಮನೆಮಾತಾಗಿದೆ.
ವೈಷ್ಣವಿ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್. ಆಗಾಗ್ಗೆ ಸಕತ್ ಪೋಸ್ ಕೊಟ್ಟು ಫೋಟೋ, ವಿಡಿಯೋ ಶೂಟ್ಗಳನ್ನು ಮಾಡಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಟ್ರೋಲ್ ಕೂಡ ಆಗುತ್ತಾರೆ.
ಇನ್ನು ವೈಷ್ಣವಿ ಅವರ ಕುರಿತು ಹೇಳುವುದಾದರೆ, ಇವರು ಕಿರುತೆರೆ ಕಲಾವಿದೆ ಮಾತ್ರವಲ್ಲದೇ ಹಲವು ಉತ್ಪನ್ನಗಳ ರಾಯಭಾರಿಯೂ ಹೌದು. ಇವರು ಕಿರುತೆರೆ ಪ್ರವೇಶಿಸಿದ್ದರ ಬಗ್ಗೆಯೂ ಹಿಂದೊಮ್ಮೆ ಹೇಳಿಕೊಂಡಿದ್ದರು.
ಇವರು ಒಂದು ದಿನ ತಮ್ಮ ತಾಯಿಯೊಂದಿಗೆ ಮಂದಿರಕ್ಕೆ ಹೋದಾಗ ಸಹಾಯಕ ನಿರ್ದೇಶಕರೊಬ್ಬರು ನೋಡಿ ತಮ್ಮ ಸೀರಿಯಲ್ ದೇವಿಯಲ್ಲಿ ನಟಿಸಲು ಆಫರ್ ನೀಡಿದ್ದರು ಎಂಬುದನ್ನು ನೆನಪಿಸಿಕೊಂಡಿದ್ದರು. ಹೀಗೆ ಜೀ ಕನ್ನಡದ `ದೇವಿ' ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿರೋ ವೈಷ್ಣವಿ, ಪುನರ್‌ವಿವಾಹದಲ್ಲಿ ನಟಿಸಿದರು.