ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕ್ಯಾರ್ ಚಂಡ ಮಾರುತದ ಅಬ್ಬರ ಹೆಚ್ಚಾಗಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಿಂದ ಜನಜೀವನ ತತ್ತರಿಸಿದೆ. ಉತ್ತರ ಕನ್ನಡ ಕಾರವಾರ, ಅಂಕೋಲ ಸೇರಿದಂತೆ ಹಲವೆಡೆ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಘಡಗಳಾಗುತ್ತಿದೆ. ಬೃಹತ್ ಗಾತ್ರದ ಮರಗಳು ರಸ್ತೆಗೆ ಉರುಳಿವೆ. ವಿದ್ಯುತ್ ವ್ಯತ್ಯಯವಾಗಿದೆ.