ಮಹಾರಾಷ್ಟ್ರದ ರಾಯಗಢದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಎಲ್‌ಪಿಜಿ ಸಿಲಿಂಡರ್‌ಗಳು ನದಿಯಲ್ಲಿ ಕೊಚ್ಚಿಕೊಂಡು ಹೋದ ಹಿನ್ನೆಲೆಯಲ್ಲಿ, ಅವುಗಳನ್ನು ಮುಟ್ಟದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಇದೀಗ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ರಾಯಗಢ ಜಿಲ್ಲೆಯ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್ ಘಟಕಕ್ಕೆ ಪ್ರವಾಹದ ನೀರು ನುಗ್ಗಿದ ಪರಿಣಾಮ ಸುಮಾರು 3,000 ಎಲ್‌ಪಿಜಿ ಸಿಲಿಂಡರ್‌ಗಳು ನದಿಯಲ್ಲಿ ಕೊಚ್ಚಿಕೊಂಡು ಹೋಗಿವೆ. ಈ ದೃಶ್ಯಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
24
ಅಧಿಕಾರಿಗಳ ಮಾಹಿತಿ
ಅಧಿಕಾರಿಗಳ ಮಾಹಿತಿ ಪ್ರಕಾರ, ನಿರಂತರ ಮಳೆಯಿಂದ ಘಟಕದ ರಕ್ಷಣಾ ಗೋಡೆ ಕುಸಿದಿದ್ದು, ಪ್ರವಾಹದ ನೀರು ನೇರವಾಗಿ ಘಟಕದೊಳಗೆ ನುಗ್ಗಿದೆ. ಇದರಿಂದ ತುಂಬಿದ ಹಾಗೂ ಖಾಲಿ ಸಿಲಿಂಡರ್‌ಗಳು ಪಾತಾಳಗಂಗಾ ನದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕೊಚ್ಚಿಕೊಂಡು ಹೋಗಿವೆ.
34
ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ
ಈ ಘಟನೆ ಬಳಿಕ ಜಿಲ್ಲಾಡಳಿತ ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಿದೆ. ನದಿಯಲ್ಲಿ ಅಥವಾ ಸುತ್ತಮುತ್ತ ಸಿಲಿಂಡರ್‌ಗಳು ಕಂಡುಬಂದರೆ ಅವುಗಳನ್ನು ಮುಟ್ಟಬಾರದು, ಮನೆಗೆ ತೆಗೆದುಕೊಂಡು ಹೋಗಬಾರದು ಅಥವಾ ತೆರೆಯಲು ಪ್ರಯತ್ನಿಸಬಾರದು ಎಂದು ಸೂಚಿಸಲಾಗಿದೆ. ಕೆಲವು ಸಿಲಿಂಡರ್‌ಗಳಲ್ಲಿ ಇನ್ನೂ ಅನಿಲ ಇರಬಹುದಾದ ಕಾರಣ ಅವು ಅಪಾಯಕಾರಿಯಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
44
ಸಾರ್ವಜನಿಕರಲ್ಲಿ ಮನವಿ
ರಾಯಗಢ ಜಿಲ್ಲಾಧಿಕಾರಿ, ಸಿಲಿಂಡರ್‌ಗಳು ಕಂಡುಬಂದರೆ ಅವುಗಳನ್ನು ಸಮೀಪದ ಎಚ್‌ಪಿಸಿಎಲ್ ಡೀಲರ್, ತಹಶೀಲ್ದಾರ್ ಕಚೇರಿ ಅಥವಾ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಒಪ್ಪಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪ್ರವಾಹದಿಂದ ಕೊಚ್ಚಿಕೊಂಡು ಹೋದ ಸಿಲಿಂಡರ್‌ಗಳನ್ನು ಪತ್ತೆಹಚ್ಚುವ ಹಾಗೂ ಸುರಕ್ಷಿತವಾಗಿ ವಾಪಸ್ ಪಡೆಯುವ ಕಾರ್ಯಾಚರಣೆ ಮುಂದುವರಿದಿದೆ.