ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್.
1938 ಮೇ 19 ರಂದು ಗಿರೀಶ್ ಕಾರ್ನಾಡ್ ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಗಿರೀಶ್ ಕಾರ್ನಾಡ್, ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು.
ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿರುವ ಕಾರ್ನಾಡ್, ಆಕ್ಸ್ ಫರ್ಡ್ ಡಿಬೇಟ್ ಕ್ಲಬ್ ಅಧ್ಯಕ್ಷರಾದ ಪ್ರಥಮ ಏಷಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದ ಕಾರ್ನಾಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯ ಪಸರಿಸಿದ್ದರು.
ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ' ಯಯಾತಿ' ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು.
ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು.
ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ಕಾರ್ನಾಡರ ಪ್ರಮುಖ ನಾಟಕ ಕೃತಿಗಳು.
ಸರಸ್ವತಿ ಗಣಪತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.