ಫೆಮಿನಾ ಮಿಸ್ ಇಂಡಿಯಾ 2026ರ ವಿಜೇತೆ ಹಾಗೂ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸೈಲ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದರು. ಡಿಸಿಎಂ ಅವರು ಸಾಧ್ವಿಗೆ ಅಭಿನಂದನೆ ಸಲ್ಲಿಸಿ, 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.
ಫೆಮಿನಾ ಮಿಸ್ ಇಂಡಿಯಾ 2026ರ ವಿಜೇತೆ ಸಾಧ್ವಿ ಸೈಲ್ ಇಂದು ರಾಜ್ಯದ ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ. ಸಾಧ್ವಿ ಸೈಲ್ ಅವರ ತಂದೆ ಸತೀಶ್ ಸೈಲ್ ಕಾಂಗ್ರೆಸ್ ಶಾಸಕರಾಗಿದ್ದಾರೆ. ತಂದೆಯೊಂದಿಗೆ ಆಗಮಿಸಿದ ಸಾಧ್ವಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದರು.
24
ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್
ಫೆಮಿನಾ ಮಿಸ್ ಇಂಡಿಯಾ 2026 ಕಿರೀಟ ಗೆದ್ದ, ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸೈಲ್ ಅವರು ಇಂದು ಸದಾಶಿವನಗರದ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. ಈ ವೇಳೆ ಸಾಧ್ವಿ ಸೈಲ್ ಅವರಿಗೆ ಅಭಿನಂದಿಸಿ ಶುಭ ಹಾರೈಸಿದೆ ಎಂದು ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
34
ಭಾರತ ಪ್ರತಿನಿಧಿಸಲಿರುವ ಸಾಧ್ವಿ
2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಸಾಧ್ವಿ ಅವರು ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿಯೂ ಗೆಲುವು ಸಾಧಿಸಿ ನಾಡಿಗೆ ಹಾಗೂ ದೇಶಕ್ಕೆ ಮತ್ತಷ್ಟು ಕೀರ್ತಿಯನ್ನು ತರುವಂತಾಗಲಿ ಎಂದು ಉಪಮುಖ್ಯಮಂತ್ರಿಗಳು ಹಾರೈಸಿ, ಎಕ್ಸ್ ಖಾತೆಯಲ್ಲಿ ಭೇಟಿಯ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದಾರೆ.
ಭಾನುವಾರ ತವರೂರು ಕಾರವಾರಕ್ಕೆ ಆಗಮಿಸಿದ ಸಾಧ್ವಿ ಸೈಲ್ ಅವರನ್ನು ಅದ್ಧೂರಿಯಾಗಿ ಆಗಮಿಸಿಕೊಳ್ಳಲಾಗಿತ್ತು. ಕಾರವಾರದ ಸುಭಾಷ್ ವೃತ್ತದಲ್ಲಿರುವ ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಿ ಮಿಸ್ ಇಂಡಿಯಾ ಕಿರೀಟವನ್ನು ಗಣಪತಿಯ ಮುಂದೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದರು. ಸಿಎಂ ಸಿದ್ದರಾಮಯ್ಯ ಸಹ ಸಾಧ್ವಿ ಅವರಿಗೆ ಶುಭ ಹಾರೈಸಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.