ಅಮ್ಮ ಆಗ್ತಿದ್ದಾರಾ ಐಶ್ವರ್ಯ ಡಿಕೆಎಸ್ ಹೆಗ್ಡೆ? ಸೋಶಿಯಲ್ ಮೀಡಿಯಾದಲ್ಲಿ ಜೋರಾಯ್ತು ಪ್ರಶ್ನೆ. ಐಶ್ವರ್ಯ ಡಿಕೆಎಸ್ ಹೆಗ್ಡೆ ಇತ್ತೀಚಿನ ಫೋಟೋ ಹಾಗೂ ವಿಡಿಯೋ ನೋಡಿದ ಜನ ಗುಡ್ ನ್ಯೂಸ್ ಪ್ರಶ್ನೆ ಆರಂಭಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಯುವ ಉದ್ಯಮಿಯಾಗಿ, ಮಹಿಳಾ ಸಬಲೀಕರಣದ ಶಕ್ತಿಯಾಗಿ ಬೆಳೆದು ನಿಂತಿದ್ದಾರೆ. ಶಿಕ್ಷಣ ಸಂಸ್ಥೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಐಶ್ವರ್ಯೆ ಡಿಕೆಎಸ್ ಹೆಗ್ಡೆ ಗುಡ್ ನ್ಯೂಸ್ ನೀಡ್ತಾರಾ ಅನ್ನೋ ಪ್ರಶ್ನೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಅಭಿಮಾನಿಗಳು, ಬೆಂಬಲಿಗರು ಸೇರಿದಂತೆ ಹಲವರು ಈ ಪ್ರಶ್ನೆ ಕೇಳುತ್ತಿದ್ದಾರೆ. ಕನಕೋತ್ಸವ ಸೇರಿದಂತೆ ಇತ್ತೀಚಿನ ಕಾರ್ಯಕ್ರಮಗಳಲ್ಲಿ ಐಶ್ವರ್ಯ ಡಿಕೆಎಸ್ ಹೆಗ್ಡೆ ನೋಡಿದ ಅಭಿಮಾನಿಗಳು ಈ ಪ್ರಶ್ನೆ ಮುಂದಿಟ್ಟಿದ್ದಾರೆ.
25
ಏನು ಗುಡ್ ನ್ಯೂಸ್?
ಕನಕೋತ್ಸವ ಕಾರ್ಯಕ್ರಮಮದಲ್ಲಿ ಐಶ್ವರ್ಯ ಡಿಕೆಎಸ್ ಹೆಗ್ಡೆ ಹಲವು ಜವಾಬ್ದಾರಿ ನಿರ್ವಹಿಸಿದ್ದು ಮಾತ್ರವಲ್ಲ, ಅಷ್ಟೇ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಐಶ್ವರ್ಯ ಡಿಕೆಎಸ್ ಹೆಗ್ಡೆ ಬಹಿರಂಗವಾಗಿ ಕಾಣಿಸಿಕೊಂಡ ಇತ್ತೀಚಿನ ಕಾರ್ಯಕ್ರಮ ಇದು.ಕಾರ್ಯಕ್ರಮದ ಪಾಲ್ಗೊಂಡಿದ್ದ ಐಶ್ವರ್ಯ ಡಿಕೆಎಸ್ ಹೆಗ್ಡೆ ಬಾಡಿ ಲ್ಯಾಂಗ್ವೇಜ್, ಅವರು ಹಾಕಿದ್ದ ಡ್ರೆಸ್ ಒಂದೊಂದು ತಾಳೆಯಾಗುತ್ತಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ವಿಡಿಯೋ ಹಾಗೂ ಫೋಟೋಸ್ ನೋಡಿದ ಹಲವರು ಐಶ್ವರ್ಯ ಪ್ರೆಗ್ನೆಂಟಾ ಎಂದು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.
35
ತಾತಾ ಆಗುತ್ತಿದ್ದಾರೆ ಎಂದು ಕಮೆಂಟ್
ಐಶ್ವರ್ಯ ಡಿಕೆಎಸ್ ಹೆಗ್ಡೆ ಪ್ರೆಗ್ನೆಂಟಾ ಎಂದು ಹಲವರು ಪ್ರಶ್ನಿಸಿದ್ದಾರೆ. ಮತ್ತೆ ಕೆಲವರು ಎರಡು ಹೆಜ್ಜೆ ಮುಂದೆ ಹೋಗಿ ಡಿಕೆ ಶಿವಕುಮಾರ್ ಸಾಹೇಬರು ತಾತ ಆಗುತ್ತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇದೇ ಚರ್ಚೆ ಶುರುವಾಗಿದೆ. ಐಶ್ವರ್ಯ ಡಿಕೆಎಸ್ ಹೆಗ್ಡೆ ಫೋಟೋ , ವಿಡಿಯೋಗಳಿಗೆ ಅಭಿಮಾನಿಗಳು ಗೂಡ್ ನ್ಯೂಸ್ ಪ್ರಶ್ನೆ ಕೇಳುತ್ತಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿರುವ ಐಶ್ವರ್ಯ ಡಿಕೆಎಸ್ ಹೆಗ್ಡೆ, 2021, ಫೆಬ್ರವರಿ 24ರಂದು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಮೊಮ್ಮಗ, ಕಾಫಿ ಡೇ ಮೂಲಕ ಕ್ರಾಂತಿ ಮಾಡಿದ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅದ್ಧೂರಿಯಾಗಿ ವಿವಾಹ ಮಹೋತ್ಸವ ನಡೆದಿತ್ತು.
55
ಫ್ಯಾಶನ್ ಜಗತ್ತಿನಲ್ಲೂ ಐಶ್ವರ್ಯ ಸೈ
ಹಲವು ಶಿಕ್ಷಣ ಸಂಸ್ಥೆ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಐಶ್ವರ್ಯ ಡಿಕೆಎಸ್ ಹೆಗ್ಡೆ, ತಮ್ಮದೇ ಫ್ಯಾಶನ್ ಬ್ರ್ಯಾಂಡ್ ಮೂಲಕ ಮಿಂಚಿದ್ದಾರೆ. ತಮ್ಮ ಫ್ಯಾಶನ್ ಬ್ರ್ಯಾಂಡ್‌ಗೆ ತಾವೇ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.
ಫ್ಯಾಶನ್ ಜಗತ್ತಿನಲ್ಲೂ ಐಶ್ವರ್ಯ ಸೈ
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.