ಕೊರೋನಾ ವೈರಸ್ ಮಹಾಮಾರಿ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಸೋಂಕಿಗೆ ಔಷದ ಕಂಡು ಹಿಡಿಯಲು ಪ್ರಯತ್ನಗಳು ನಡೆಯುತ್ತಿದೆ. ಇದೀಗ ಬ್ರಿಟನ್ನಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಲಸಿಕೆ ಕಂಡು ಹಿಡಿದಿದ್ದಾರೆ. ಗುರುವಾರದಿಂದ (ಏ.23) ಮಾನವನ ಮೇಲೆ ಪ್ರಯೋಗ ಮಾಡಲಾಗಿದೆ. 500 ಸ್ವಯಂ ಸೇವಕರಿಗೆ ಹೊಸ ಲಸಿಕೆ ಪ್ರಯೋಗ ಮಾಡಲಾಗಿದೆ. ನೂತನ ಲಸಿಕೆ ಕುರಿತ ಹೆಚ್ಚಿನ ವಿವರ ಇಲ್ಲಿದೆ.