2014ರಲ್ಲಿ ಭಾರತದ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಅವರ ಜತೆ ಮಲಾಲಾ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿದ್ದರು. ಹೆಣ್ಣು ಮಕ್ಕಳ ಶಿಕ್ಷಣ ವಿರೋಧಿಯಾಗಿದ್ದ ತಾಲಿಬಾನ್ ಉಗ್ರರು, 2012ರಲ್ಲಿ ಮಲಾಲಾ ಅವರು ಪರೀಕ್ಷೆ ಮುಗಿಸಿ ಮನೆಗೆ ಬರುತ್ತಿರುವ ವೇಳೆ ಗುಂಡಿನ ದಾಳಿ ನಡೆಸಿದ್ದರು. ಇದಾದ ಬಳಿಕ ಮಲಾಲಾ ಅವರ ಜನಪ್ರಿಯತೆ ಹೆಚ್ಚಾಯಿತು.