ಇರಾನ್-ಅಮೆರಿಕ ನಡುವೆ ಶಾಂತಿ ಒಪ್ಪಂದ; ಹರ್ಮೋಜ್ ಜಲಸಂಧಿ ಓಪನ್‌, ಇಳಿಕೆಯತ್ತ ತೈಲ ದರ

Published : Jun 15, 2026, 07:58 AM IST

ಕಳೆದ ಮೂರು ತಿಂಗಳ ಅಮೆರಿಕ-ಇರಾನ್ ಸಂಘರ್ಷವು ಅಂತ್ಯಗೊಳ್ಳುವ ಹಂತ ತಲುಪಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಉಭಯ ದೇಶಗಳು ಶಾಂತಿ ಒಪ್ಪಂದಕ್ಕೆ ಬಂದಿದ್ದು, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಅಮೆರಿಕ ಒಪ್ಪಿಕೊಂಡಿದೆ. 

PREV
14
ಅಮೆರಿಕ-ಇರಾನ್ ಸಂಘರ್ಷ

ಕಳೆದ ಮೂರು ತಿಂಗಳಿಂದ ನಡೆಯುತ್ತಿದ್ದ ಅಮೆರಿಕ-ಇರಾನ್ ಸಂಘರ್ಷಕ್ಕೆ ಕೊನೆಗೂ ಬ್ರೇಕ್ ಬೀಳುವ ಲಕ್ಷಣ ಕಾಣಿಸಿದೆ. ಜಗತ್ತು ಎದುರು ನೋಡುತ್ತಿದ್ದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್ ಬಂದಿವೆ ಎಂದು ಪಾಕಿಸ್ತಾನ ಹೇಳಿದೆ. ಯುದ್ಧವನ್ನು ನಿಲ್ಲಿಸಲು ಮತ್ತು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ವರದಿಯಾಗಿದೆ

24
ಶಾಂತಿ ಒಪ್ಪಂದಕ್ಕೆ ಜೂನ್ 19ರಂದು ಸಹಿ

ಎರಡೂ ದೇಶಗಳ ನಡುವಿನ ಒಪ್ಪಂದದ ಸಂಪೂರ್ಣ ವಿವರಗಳು ಇನ್ನೂ ಹೊರಬಿದ್ದಿಲ್ಲ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರು ಈ ಮಾತುಕತೆಯಲ್ಲಿ ಮಧ್ಯಸ್ಥಿಕೆ ವಹಿಸಿದ್ದರು. ಜೂನ್ 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಈ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುತ್ತೆ ಅಂತ ಅವರು ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಒಪ್ಪಂದ ಅಂತಿಮವಾಗಿದೆ ಎಂದು ಖಚಿತಪಡಿಸಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ನೌಕಾಪಡೆ ಹಾಕಿದ್ದ ದಿಗ್ಬಂಧನವನ್ನು ತೆಗೆದುಹಾಕಲು ಟ್ರಂಪ್ ಆದೇಶ ನೀಡಿದ್ದಾರೆ.

34
ಟ್ರಂಪ್‌ರಿಂದಲೂ ಗ್ರೀನ್ ಸಿಗ್ನಲ್

ಪಾಕ್ ಪ್ರಧಾನಿ ಹೇಳಿಕೆ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ತಮ್ಮ 'ಟ್ರೂತ್ ಸೋಶಿಯಲ್' ಖಾತೆಯಲ್ಲಿ ಈ ಒಪ್ಪಂದವನ್ನು ಖಚಿತಪಡಿಸಿದ್ದಾರೆ. "ಇರಾನ್ ಇಸ್ಲಾಮಿಕ್ ರಿಪಬ್ಲಿಕ್ ಜೊತೆಗಿನ ಒಪ್ಪಂದ ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು. ಹಾರ್ಮುಜ್ ಜಲಸಂಧಿಯನ್ನು ಯಾವುದೇ ಶುಲ್ಕವಿಲ್ಲದೆ ತೆರೆಯಲು ನಾನು ಸಂಪೂರ್ಣ ಅಧಿಕಾರ ನೀಡುತ್ತಿದ್ದೇನೆ. ಅಮೆರಿಕ ನೌಕಾಪಡೆಯ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಲು ಆದೇಶಿಸುತ್ತಿದ್ದೇನೆ. ಜಗತ್ತಿನ ಹಡಗುಗಳೇ, ನಿಮ್ಮ ಇಂಜಿನ್‌ಗಳನ್ನು ಸ್ಟಾರ್ಟ್ ಮಾಡಿಕೊಳ್ಳಿ. ತೈಲ ಹರಿಯಲಿ" ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

44
ಪಾಕ್ ಪ್ರಧಾನಿ ಹೇಳಿಕೆ

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿರೋದು ಖುಷಿಯ ವಿಚಾರ ಎಂದು ಶಹಬಾಜ್ ಷರೀಫ್ ಹೇಳಿದ್ದಾರೆ. ಲೆಬನಾನ್ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿನ ಸೇನಾ ಕಾರ್ಯಾಚರಣೆಗಳನ್ನು ತಕ್ಷಣ ಮತ್ತು ಶಾಶ್ವತವಾಗಿ ನಿಲ್ಲಿಸುವುದಾಗಿ ಎರಡೂ ಕಡೆಯವರು ಘೋಷಿಸಿದ್ದಾರೆ ಅಂತಾನೂ ಪಾಕ್ ಪ್ರಧಾನಿ ತಿಳಿಸಿದ್ದಾರೆ. ಇತ್ತ, ಇರಾನ್ ಸರ್ಕಾರ ಈ ಬಗ್ಗೆ ಇನ್ನೂ ಅಧಿಕೃತವಾಗಿ ಏನೂ ಹೇಳಿಲ್ಲ. ಆದರೆ, ಇರಾನ್‌ನ ಸರ್ಕಾರಿ ಟಿವಿಯಲ್ಲಿ ಒಂದು ಬ್ಯಾನರ್ ಪ್ರದರ್ಶಿಸಲಾಗಿದ್ದು, 'ಯುದ್ಧವನ್ನು ನಿಲ್ಲಿಸಲು ಅಮೆರಿಕವೇ ಒಪ್ಪಂದಕ್ಕೆ ಸಹಿ ಹಾಕುವಂತಾಯಿತು' ಎಂದು ಅದರಲ್ಲಿ ಬರೆಯಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories