ಇದೇ ಸಂದರ್ಭದಲ್ಲಿ ಅಮೆರಿಕದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದ ರಿಷಬ್ ಶೆಟ್ಟಿ ಅವರು, ವಾಷಿಂಗ್ಟನ್‌ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್‌ಗೆ 95 ವರ್ಷಗಳ ಇತಿಹಾಸವಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ "ವಿಶ್ವ ಶ್ರೇಷ್ಠ ಕನ್ನಡಿಗ 2023" ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ.