ನಮ್ಮ ಕುಟುಂಬ ತಪ್ಪು ಮಾಡಿದೆ : ಹಾಸನಾಂಬ ಸನ್ನಿಧಿಯಲ್ಲಿ HDK

By Web Desk  |  First Published Oct 22, 2019, 11:27 AM IST

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಹಾಸನಾಂಬ ದೇಗುಲಕ್ಕೆ ಭೇಟಿ ನೀಡಿ ಹಾಸನಾಂಬೆ ದರ್ಶನ ಪಡೆದಿದ್ದಾರೆ. ಅಲ್ಲದೇ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. 


ಹಾಸನ [ಅ.22]: ಹಾಸನದ ಅಧಿದೇವತೆ ಹಾಸನಾಂಬ ಜಾತ್ರೋತ್ಸವ ಆರಂಭವಾಗಿದ್ದು, ದೇವೇಗೌಡರ ಕುಟುಂಬ ಸದಸ್ಯರು ದೇವಿ ದರ್ಶನ ಪಡೆದಿದ್ದಾರೆ. 

ಹಾಸನಾಂಬೆಯ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ  ಕುಟುಂಬ ಹಾಸನಾಂಬೆಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

Latest Videos

undefined

ಈ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಳೆದ ಚುನಾವಣೆಯಲ್ಲಿ ದೇವೇಗೌಡರು ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕಿತ್ತು. ರಾಜ್ಯ ನೆರೆಯಿಂದ ತತ್ತರಿಸುತ್ತಿರುವ ಈ ಸಂದರ್ಭದಲ್ಲಿ ಅವರು ಪಾರ್ಲಿಮೆಂಟಲ್ಲಿ ಇರಬೇಕಿತ್ತು ಎಂದು ಹೇಳಿದರು. 

ನಮ್ಮ‌ಕುಟುಂಬದಲ್ಲಿ ಕೆಲವು ತಪ್ಪು ಮಾಡಿಕೊಂಡಿದ್ದೀವಿ. ಆದರೆ ಆ ತಪ್ಪು ಜನರಿಗೆ ತೊಂದರೆಯಾಗುವಂತದ್ದಲ್ಲ. ಅದು ನಮ್ಮ ಕುಟುಂಬಕ್ಕೆ ಮಾತ್ರವೇ ಸಂಬಂಧಿಸಿದ್ದಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇನ್ನು ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನರು ನೆರೆಯಿಂದ ತತ್ತರಿಸುತ್ತಿದ್ದಾರೆ. ದೊಡ್ಡ ಮಟ್ಟದ ಅನಾಹುತದಿಂದ ಸಮಸ್ಯೆ ಎದುರಾಗಿದೆ. ಆದರೆ ರಾಜ್ಯದ ಜನರ ನೋವಿಗೆ ಸರ್ಕಾರದಿಂದ ಸೂಕ್ತ ರೀತಿಯಿಂದ ಸ್ಪಂದಿಸುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು. 

ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಸಾಕಷ್ಟು ಮಳೆಯಿಂದ ಹಾನಿಯಾಗಿದೆ. ಆದರೆ ಪುನರ್ವಸತಿ ಬಗ್ಗೆ ಮಾತ್ರ ಯಾರು ಗಮನಹರಿಸುತ್ತಿಲ್ಲ ಎಂದು ಎಚ್ಡಿಕೆ ಅಸಮಾಧಾನ ಹೊರಹಾಕಿದರು.

ಅ.22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!