ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಎರಡು ಕಡೆ ಪ್ರತ್ಯೇಕ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟು, ಹತ್ತಕ್ಕೂ ಹೆಚ್ಚು ಗಂಭೀರ ಗಾಯಗೊಂಡ ದುರ್ಘಟನೆ ನಡೆದಿದೆ. ತುಮಕೂರು ಮತ್ತು ಅಥಣಿ ಭಾಗದಲ್ಲಿ ಅಪಘಾತ ಸಂಭವಿಸಿದೆ.
ತುಮಕೂರು (ಆ.20): ಇಂದು ಬೆಳ್ಳಂಬೆಳಗ್ಗೆ ಸ್ವಿಫ್ಟ್ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಬಂವಿಸಿದೆ. ಕಳ್ಳಂಬೆಳ್ಳ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸ್ವೀಫ್ಟ್ ಕಾರಿಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
ರಸ್ತೆ ಅಪಘಾತ: ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ ಶರಣು ಸಲಗರ
ಈ ಅಪಘಾತದಲ್ಲಿ ಅವಿನಾಶ(28), ಪ್ರಣಂತಿ ಇಬ್ಬರು ಮೃತ ದುರ್ದೈವಿಗಳು. ಸೌಮ್ಯ ಗಂಭೀರ ಗಾಯಗೊಂಡ ಮಹಿಳೆ. ಗಾಯಳು ಮಹಿಳೆಯನ್ನ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಕಾಲೇಜು ಬಸ್-ಲಾರಿ ಡಿಕ್ಕಿ; ಸ್ಥಳದಲ್ಲೇ ಇಬ್ಬರ ಸಾವು
ಚಿಕ್ಕೋಡಿ: ಬೆಳ್ಳಂಬೆಳಗ್ಗೆ ಕಾಲೇಜು ವಾಹನ-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತಕ್ಕೆ ಇಬ್ಬರು ಬಲಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ಅಥಣಿ ಹೊರವಲಯದಲ್ಲಿ ನಡೆದಿದೆ.
ಬನಜವಾಡ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್ ಅಥಣಿ ಗ್ರಾಮೀಣ ಭಾಗದಿಂದ ಅಥಣಿ ಪಟ್ಟಣಕ್ಕೆ ಪಿಯು ವಿದ್ಯಾರ್ಥಿಗಳನ್ನು ಹೊತ್ತು ಬರುತ್ತಿತ್ತು. ಇದೇ ವೇಳೆ ಅಥಣಿಯಿಂದ ವಿಜಯಪುರದ ಕಡೆಗೆ ವೇಗವಾಗಿ ಹೊರಟಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಅವಘಡ. ಈ ಅಪಘಾತದಲ್ಲಿ ಬಸ್ ಚಾಲಕ ಮತ್ತು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.