ಹಾವೇರಿಯ ಹಿರೇಕೆರೂರನಲ್ಲಿ ಅಕ್ರಮ ಬಿಪಿಎಲ್‌ ಕಾರ್ಡ್‌ ರದ್ದು

By Web Desk  |  First Published Oct 20, 2019, 8:08 AM IST

ಸುಳ್ಳು ಮಾಹಿತಿ ನೀಡಿ ಇಲಾಖೆ ಮಾನದಂಡಗಳನ್ನು ಮರೆಮಾಚಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡುಬಂದಿದೆ|  ಮಾನದಂಡಗಳನ್ನು ಮೀರಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಬಗ್ಗೆ ತನಿಖೆ| ಅ. 31 ರೊಳಗಾಗಿ ತಾಲೂಕು ಕಚೇರಿ ಆಹಾರ ವಿಭಾಗಕ್ಕೆ ತೆರಳಿ ತಮ್ಮ ಪಡಿತರ ಚೀಟಿಗಳನ್ನು ರದ್ದು ಪಡಿಸಬೇಕು|


ಹಿರೇಕೆರೂರು(ಅ.20): ತಾಲೂಕಿನಲ್ಲಿರುವ ಬಿಪಿಎಲ್‌(ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿಗಳ ಪಟ್ಟಿಯನ್ನು ಗಮನಿಸಲಾಗಿ ಬಿಪಿಎಲ್‌ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಇಲಾಖೆ ಮಾನದಂಡಗಳನ್ನು ಮರೆಮಾಚಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡುಬಂದಿದೆ ಅಂತಹ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುವುದು ಎಂದು ತಹಶೀಲ್ದಾರ ಆರ್‌.ಎಚ್‌. ಭಾಗವಾನ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ತಿಳಿಸಿರುವ ಅವರು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಹೊಂದಿದ ಕುಟುಂಬಗಳನ್ನು ಹೊರತುಪಡಿಸಿ ಸ್ವಂತ ಉಪಯೋಗಕ್ಕಾಗಿ ಕಾರು, ವಾಣಿಜ್ಯ ಉದ್ದೇಶಕ್ಕಾಗಿ ಲಾರಿ, ಜೆಸಿಬಿ ಅಂತಹ ವಾಹನಗಳನ್ನು ಹೊಂದಿರುವವರು, ಕುಟುಂಬದಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಅನುದಾನ ಪಡೆಯುತ್ತಿರುವ ಸಂಸ್ಥೆಗಳ ನೌಕರರು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು ಸ್ವಾಯುತ್ತ ಸಂಸ್ಥೆಗಳಲ್ಲಿ ನೌಕರಿ ಇರುವವರು, ತೆರಿಗೆಯನ್ನು ಪಾವತಿಸುವ ಕುಟುಂಬಗಳು, 3 ಹೆಕ್ಟೇರ್‌ಗಿಂತ ಹೆಚ್ಚಿನ ಜಮೀನು ಹೊಂದಿರುವವರು, ವಾರ್ಷಿಕ 20 ಸಾವಿರಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು, ನಗರ ಪ್ರದೇಶದಲ್ಲಿ ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಮನೆಯನ್ನು ಹೊಂದಿರುವ ಕುಟುಂಬಗಳು. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಮಾನದಂಡಗಳನ್ನು ಮೀರಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು ಇಂತಹ ಪಲಾನುಭವಿಗಳು ಪಡಿತರ ಚೀಟಿಗಳನ್ನು ಹೊಂದಿದ್ದಲ್ಲಿ ಸ್ವಯಂ ಪ್ರೇರಿತರಾಗಿ ಅ. 31 ರೊಳಗಾಗಿ ತಾಲೂಕು ಕಚೇರಿ ಆಹಾರ ವಿಭಾಗಕ್ಕೆ ತೆರಳಿ ತಮ್ಮ ಪಡಿತರ ಚೀಟಿಗಳನ್ನು ರದ್ದು ಪಡಿಸಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಇಲಾಖೆ ನೆಡೆಸುವ ತನಿಖೆಯಲ್ಲಿ ಪಡಿತರ ಹೊಂದಿರುವುದು ಕಂಡು ಬಂದಲ್ಲಿ ಪಡಿತರ ಚೀಟಿ ಪಡೆದ ದಿನದಿಂದ ಇಲ್ಲಿಯವರೆಗೆ ಪ್ರತಿ 1 ಕೆಜಿ ಅಕ್ಕಿಗೆ 35 ಗಳಂತೆ ದಂಡ ಪಾವತಿಸಬೇಕಾಗುತ್ತದೆ ಹಾಗೂ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
 

click me!