'ಹಾವೇರಿ ಮೆಡಿಕಲ್‌ ಕಾಲೇಜಿಗೆ ಶೀಘ್ರ ಅಡಿಗಲ್ಲು'

By Web Desk  |  First Published Oct 27, 2019, 1:57 PM IST

ಮೆಡಿಕಲ್‌ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ| ಶೀಘ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಶಂಕುಸ್ಥಾಪನೆ| ದೇವಗಿರಿ ಯಲ್ಲಾಪುರ ಗ್ರಾಮದ ಬಳಿ ಮೆಡಿಕಲ್‌ ಕಾಲೇಜಿಗೆ ಸ್ಥಳ ನಿಗದಿ ಮಾಡಲಾಗಿತ್ತು| ಈಚೆಗೆ ಅತಿವೃಷ್ಠಿ ಸಂದರ್ಭದಲ್ಲಿ ಅಲ್ಲಿ ನೀರು ನಿಲ್ಲುತ್ತಿರುವುದು ಗಮನಕ್ಕೆ ಬಂದಿದೆ| ರಾಷ್ಟ್ರೀಯ ಹೆದ್ದಾರಿ ಹಾಗೂ ಜಿಲ್ಲಾಸ್ಪತ್ರೆಗೆ ಹತ್ತಿರವಿರುವ ನೆಲೋಗಲ್‌ ಗುಡ್ಡದಲ್ಲಿ 44 ಎಕರೆ ಜಮೀನು ಪರಿಶೀಲನೆ ನಡೆಸಲಾಗಿದೆ|
ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ|
 


ಹಾವೇರಿ(ಅ.27): ಮೆಡಿಕಲ್‌ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗೆ ಒಪ್ಪಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಸಕ ನೆಹರು ಓಲೇಕಾರ ಅವರು ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಡಿಕಲ್‌ ಕಾಲೇಜಿಗೆ ಕೇಂದ್ರದ ಶೇ. 60 ಮತ್ತು ರಾಜ್ಯದ 40ರ ಅನುಪಾತದಲ್ಲಿ ಅನುದಾನ ದೊರೆಯಲಿದೆ. ಕೇಂದ್ರ ಸರ್ಕಾರವು ತನ್ನ ಪಾಲಿನ 195 ಕೋಟಿ ಬಿಡುಗಡೆ ಮಾಡಲು ಒಪ್ಪಿದೆ ಎಂದು ತಿಳಿಸಿದರು.

Latest Videos

undefined

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಹಿಂದೆಯೇ ದೇವಗಿರಿ ಯಲ್ಲಾಪುರ ಗ್ರಾಮದ ಬಳಿ ಮೆಡಿಕಲ್‌ ಕಾಲೇಜಿಗೆ ಸ್ಥಳ ನಿಗದಿ ಮಾಡಲಾಗಿತ್ತು. ಆದರೆ, ಈಚೆಗೆ ಅತಿವೃಷ್ಠಿ ಸಂದರ್ಭದಲ್ಲಿ ಅಲ್ಲಿ ನೀರು ನಿಲ್ಲುತ್ತಿರುವುದು ಗಮನಕ್ಕೆ ಬಂದಿದೆ. ಅಲ್ಲಿ ಕಾಲೇಜು ಆರಂಭಿಸಿದರೆ ಮುಂದೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಜಿಲ್ಲಾಸ್ಪತ್ರೆಗೆ ಹತ್ತಿರವಿರುವ ನೆಲೋಗಲ್‌ ಗುಡ್ಡದಲ್ಲಿ 44 ಎಕರೆ ಜಮೀನು ಪರಿಶೀಲನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಯ ಮೆಡಿಕಲ್‌ ಕಾಲೇಜು ಆರಂಭಿಸಬೇಕು ಎಂಬ ಚಿಂತನೆ ನಡೆದಿದೆ ಎಂದು ಹೇಳಿದರು.

ರಸ್ತೆ ಅಭಿವೃದ್ಧಿಗೆ ಅನುದಾನ:

ಮಳೆಯಿಂದ ಕ್ಷೇತ್ರದ ವಿವಿಧ ರಸ್ತೆಗಳು ಹಾಳಾಗಿವೆ. ಆದ್ದರಿಂದ ಗುತ್ತಲ ರಸ್ತೆಯ ರೈಲ್ವೆ ಮೇಲ್ಸೇತುವೆ ತನಕ ಹಾಗೂ ತೋಟದಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ ವರೆಗೆ ದ್ವಿಪಥ ರಸ್ತೆ ಕಾಮಗಾರಿಗೆ 15 ಕೋಟಿ ಅನುದಾನ ಮಂಜೂರಾಗಿದೆ. ಇದಲ್ಲದೇ ಕ್ಷೇತ್ರದ ಇನ್ನಿತರ ರಸ್ತೆ ಅಭಿವೃದ್ಧಿಗೆ 25 ಕೋಟಿ ಕ್ರಿಯಾ ಯೋಜನೆ ತಯಾರಿಸಿ ಸಂಬಂಧಪಟ್ಟವರಿಗೆ ಸಲ್ಲಿಸಲಾಗುತ್ತಿದೆ. ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಏಕಲವ್ಯ ಕಾಲೇಜು ಮುಂಜೂರಾಗಿದ್ದು, ಎಸ್ಸಿ ಎಸ್ಟಿವಸತಿ ಕಾಲೇಜಿಗೆ ವೀರಾಪುರ ಬಳಿ 10 ಎಕರೆ ಜಾಗ ಗುರುತಿಸಲಾಗಿದೆ. ಇದಲ್ಲದೇ ನಾಲ್ಕು ಯಾತ್ರಿ ನಿವಾಸ ನಿರ್ಮಾಣಕ್ಕೆ ತಲಾ 25 ಲಕ್ಷ ಮಂಜೂರಾಗಿದೆ. ಶೀಘ್ರದಲ್ಲಿ ಇವೆಲ್ಲ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಓಲೇಕಾರ ತಿಳಿಸಿದರು.

click me!