ಭಾರತದಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬುಧವಾರ ಒಂದೇ ದಿನ 4,435 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು,ಇದು ಕಳೆದ 5 ತಿಂಗಳಲ್ಲೇ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ.
ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಸಾಂಕ್ರಾಮಿಕ ಹರಡುವಿಕೆ ಪ್ರಮಾಣ ಹೆಚ್ಚುತ್ತಿದ್ದು ಬುಧವಾರ ಒಂದೇ ದಿನ 4,435 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದು ಕಳೆದ 163 ದಿನ(5 ತಿಂಗಳು)ಗಳಲ್ಲೇ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ. ಕಳೆದ ಸೆಪ್ಟೆಂಬರ್ನಲ್ಲಿ 4,777 ಕೋವಿಡ್ ಸಂಖ್ಯೆ ದಾಖಲಾಗಿದ್ದವು. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ಏರಿಕೆಯಾಗಿದ್ದು ಮಹಾರಾಷ್ಟ್ರದಲ್ಲಿ 4, ಕೇರಳದಲ್ಲಿ 4, ಹಾಗೂ ಕರ್ನಾಟಕ, ಪಾಂಡಿಚೇರಿ, ರಾಜಸ್ಥಾನ, ಹರಿಯಣ, ಗುಜರಾತ್, ಛತ್ತೀಸ್ಗಢ ಮತ್ತು ದೆಹಲಿಗಳಲ್ಲಿ ತಲಾ 1 ಸೇರಿ ಒಟ್ಟು 15 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ವೇಳೆ ದೈನಂದಿನ ಹಾಗೂ ವಾರದ ಪಾಸಿಟಿವಿಟಿ ದರಗಳು ಕ್ರಮವಾಗಿ ಹೆಚ್ಚು ಎನ್ನಬಹುದಾದ 3.38 ಹಾಗೂ 2.79 ರಷ್ಟುದಾಖಲಾಗಿದೆ. ಚೇತರಿಕೆಯ ಪ್ರಮಾಣವು 98.76 ರಷ್ಟು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Health ministry) ತಿಳಿಸಿದೆ. ದೇಶದಲ್ಲಿ ಈವರೆಗೆ ಒಟ್ಟು 4.47 ಕೋಟಿ ಜನರಿಗೆ ಕೋವಿಡ್ ತಗುಲಿದ್ದು ಒಟ್ಟು 220.19 ಕೋಟಿ ಡೋಸ್ ಕೋವಿಡ್ ಲಸಿಕೆಗಳ (Vaccine) ವಿತರಣೆಯಾಗಿದೆ.
undefined
Covid Case ಹೆಚ್ಚಳ, ಮತ್ತೊಮ್ಮೆ ಬೂಸ್ಟರ್ ಡೋಸ್ ನೀಡಲು ಡಬ್ಲ್ಯುಎಚ್ಒ ಸಲಹೆ
ವಕೀಲರಿಗೆ ವರ್ಕ್ಫ್ರಂ ಹೋಂಗೆ ಸುಪ್ರೀಂಕೋರ್ಟ್ ಅಸ್ತು
ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವಕೀಲರಿಗೆ (Lawyers) ಮನೆ ಯಿಂದಲೇ ಎಡಿಯೋ ಕಾನ್ಸರೆನ್ಸ್ ಮೂಲಕ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ. ಈ ಮೂಲಕ ಏರುತ್ತಿರುವ ಸೋಂಕಿನ (Virus) ವಿರುದ್ಧ ಸುಪ್ರೀಂ ಮುಂಜಾಗ್ರತ ಕ್ರಮವನ್ನು ಜಾರಿಗೊಳಿಸಿದೆ. ಬುಧವಾರ ಸಿಜೆಐ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾ.ಜೆ.ಬಿ.ಪರ್ಡಿವಾಲಾ ಅವರಿದ್ದ ಪೀಠ ಹೈಬ್ರಿಡ್ ಮೂಲಕ ಕೋರ್ಟಿನ ಕೆಲಸ ಮಾಡಲು ಅವಕಾಶ ನೀಡಿದರು. ಈ ಹಿಂದೆ ಕೋವಿಡ್ ಸೋಂಕು ಅಧಿಕವಾಗಿದ್ದ ಸಂದರ್ಭದಲ್ಲಿ ದೇಶದ ಎಲ್ಲಾ ನ್ಯಾಯಾಲಯಗಳಿಗೂ ಹೈಬ್ರಿಡ್ ವಿಧಾನ ಪಾಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.
ಕೋವಿಡ್ ಹೆಚ್ಚಳದಿಂದ ಭಾರತದಲ್ಲಿ ಮಾರ್ಗಸೂಚಿ ಜಾರಿ, ಮತ್ತೆ ಬಂತು ಮಾಸ್ಕ್!
ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇತ್ತ ಭಾರತದಲ್ಲೂ ಕೊರೋನಾ ಮತ್ತೆ ಕಾಣಿಸಿಕೊಂಡಿದೆ. ಪ್ರತಿ ದಿನ ಸರಾಸರಿ 3,000 ಪ್ರಕರಣ ದಾಖಲಾಗುತ್ತಿದೆ. ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೆಲ ಮಾರ್ಗಸೂಚಿ (Guidelines) ಬಿಡುಗಡೆ ಮಾಡಿದೆ. ವಿದೇಶಿ ಪ್ರಯಾಣಿಕರು, ಹಾಗೂ ವಿಮಾನ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ವಿಮಾನ ಪ್ರಯಾಣಿಕರು ಮಾಸ್ಕ್ ಧರಿಸುವಂತೆ ಸೂಚಿಸಿದೆ.
COVID-19 : ಆಪ್ತರನ್ನು ಗುರುತಿಸೋದೂ ಕಷ್ಟ! ಕೊರೊನಾದಿಂದ ಕಾಡ್ತಿದೆ ಮತ್ತೊಂದು ಸಮಸ್ಯೆ
ವಿದೇಶಿ ಪ್ರಯಾಣಿಕರು ಮೇಲೆ ನಿಗಾ ಇಡಲಾಗುತ್ತಿದೆ. ವಿಮಾನ ಪ್ರಯಾಣಿಕರು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಆದರೆ ಕಡ್ಡಾಯ ಮಾಡಿಲ್ಲ. ಸದ್ಯ ಸರಾಸರಿ 3,000 ಕೋವಿಡ್ ಪ್ರಕರಣ ದಾಖಲಾಗುತ್ತಿದೆ. ಆದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಹೀಗಾಗಿ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಲಾಗುತ್ತಿದೆ. ಕೋವಿಡ್ ವೈರಸ್ ಅಂಟಿಕೊಳ್ಳದಂತೆ ದೂರವಿರಲಿ ತಜ್ಞರು ಸೂಚಿಸಿದ ಸಲಹೆಗಳನ್ನೂ ಸೂಚಿಸಲಾಗಿದೆ ಎಂದು ರಾಜ್ಯಸಭೆಯಲ್ಲಿ ವಿಮಾನಯಾನ ರಾಜ್ಯ ಸಚಿವ ನಿವೃತ್ತ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ.
ವಿದೇಶದಲ್ಲಿ ಗಣನೀಯವಾಗಿ ಕೋವಿಡ್ ಏರಿಕೆಯಾಗುತ್ತಿದೆ. ಇದರ ಆತಂಕ ಭಾರತದಲ್ಲೂ ಇದೆ. ಆದರೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೂ ಆತಂಕಪಡವು ಅಗತ್ಯವಿಲ್ಲ. ದೇಶದಲ್ಲಿನ ಕೋವಿಡ್ ಪ್ರಕರಣ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ನಿಗಾವಹಿಸಲಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಅಧಿಕಾರಿಗಳಿಗೆ ಮಹ್ವದ ಸೂಚನೆ ನೀಡಿದ್ದಾರೆ ಎಂದು ವಿಕೆ ಸಿಂಗ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.