
ಗುಂಟೂರು: ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ತರಗತಿಯಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ವೇಟಪಾಲೆಂನಲ್ಲಿ ನಡೆದಿದೆ. ಮೃತರನ್ನು ಇಂಕೊಳ್ಳು ಗ್ರಾಮದ ವೀರಬಾಬು (45) ಎಂದು ಗುರುತಿಸಲಾಗಿದೆ. ಇವರು ವಾಕಾವರಿ ಪಾಲೆಂನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ವಿದ್ಯಾರ್ಥಿಗಳಿಗೆ ತರಗತಿ ತೆಗೆದುಕೊಳ್ಳುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದರು.
ಗಾಬರಿಗೊಂಡ ವಿದ್ಯಾರ್ಥಿಗಳು ತಕ್ಷಣ ಇತರ ವಿದ್ಯಾರ್ಥಿಗಳಿಗೆ (Students) ಮಾಹಿತಿ ನೀಡಿದ್ದು, ಅವರು ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಶಿಕ್ಷಕರನ್ನು ಹತ್ತಿರದ ಆಸ್ಪತ್ರೆಗೆ (Hospital) ಸಾಗಿಸಿದ್ದಾರೆ. ಆದರೆ ಅಷ್ಟರಲ್ಲೇ ವೀರಬಾಬು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಈ ಮೂಲಕ ತಮ್ಮ ದೈನಂದಿನ ಕಾರ್ಯಗಳಿಗೆ ಹಾಜರಾಗುವ ವ್ಯಕ್ತಿಗಳು ಹಠಾತ್ ಹೃದಯ ಸ್ತಂಭನದಿಂದ ಸಾವನ್ನಪ್ಪಿದ ಘಟನೆಗಳ ಸರಣಿ ಹೆಚ್ಚಾಗ್ತಿದೆ. ತರಗತಿಯಲ್ಲಿ ಕೆಲವೇ ನಿಮಿಷಗಳಲ್ಲಿ ಇಡೀ ಘಟನೆ ಸಂಭವಿಸಿದ್ದರಿಂದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಂಪೂರ್ಣ ಆಘಾತಕ್ಕೊಳಗಾದರು. ಶಿಕ್ಷಕರ ಸಾವಿನಿಂದ (Teachers death) ಶಾಲಾ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ.
ಮಾರ್ನಿಂಗ್ ವಾಕ್ ಮಾಡುವಾಗ ಹಾರ್ಟ್‌ಅಟ್ಯಾಕ್, ಅಪಾಯ ಮೊದಲೇ ತಿಳಿದುಕೊಳ್ಳೋದು ಹೇಗೆ ?
ಡಿಜೆ ಸೌಂಡ್ ಗದ್ದಲಕ್ಕೆ ಹೃದಯಾಘಾತವಾಗಿ ಸಾವನ್ನಪ್ಪಿದ ವರ
ಮದುವೆಯ ವಿಧಿವಿಧಾನಗಳು ನಡೆಯುತ್ತಿದ್ದಾಗ ಹೃದಯಾಘಾತದಿಂದ ವರ ಸಾವನ್ನಪ್ಪಿದ್ದಾನೆ. ಬಿಹಾರದ ಸೀತಾಮರ್ಹಿ ಜಿಲ್ಲೆಯ ಸೋನ್‌ಬರ್ಸಾ ಬ್ಲಾಕ್‌ನ ಇಂದರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿವಾಹ ವಿಧಿವಿಧಾನಗಳು ನಡೆಯುತ್ತಿದ್ದ ವೇಳೆಯೇ ಯುವಕ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತರನ್ನು ಅದೇ ಜಿಲ್ಲೆಯ ಮಾಣಿಕ್ತಾರ್ ಗ್ರಾಮದ ಸುರೇಂದ್ರ ಎಂದು ಗುರುತಿಸಲಾಗಿದೆ. ಮದುವೆಯ ದಿಬ್ಬಣ ಸ್ಥಳಕ್ಕೆ ಆಗಮಿಸಿದ ನಂತರ ವಿವಾಹ ವಿಧಿವಿಧಾನಗಳು ನಡೆಯುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮದುವೆಯ (Marriage) ಶಾಸ್ತ್ರದಂತೆ ಹೂವಿನ ಮಾಲೆ ಹಾಕುವ ಸಂದರ್ಭ ಸುರೇಂದ್ರ ಅವರು ವೇದಿಕೆಯ ಮೇಲೆ ಹಠಾತ್ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಸುರೇಂದ್ರ ಅವರು ವಿಪರೀತ ಡಿಜೆ ಸೌಂಡ್ ಹಾಕದಂತೆ ಮನವಿ ಮಾಡಿದ್ದರು. ಆದರೂ ಇದನ್ನು ನಿರ್ಲಕ್ಷಿಸಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಡಿಜೆ ಅಬ್ಬರ ಸಂಭ್ರಮದ ವಾತಾವರಣವನ್ನ ಶೋಕ ಸಾಗರವಾಗಿ ಪರಿವರ್ತಿಸಿದೆ. ವಧು-ವರರು (Bride-groom) ಹಾರಗಳನ್ನು ಬದಲಾಯಿಸಿಕೊಂಡ ಕೆಲವೇ ಕ್ಷಣಗಳಲ್ಲಿ ವರ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾನೆ. ಹೈ ಡೆಸಿಬಲ್ ಡಿಜೆ ಮ್ಯೂಸಿಕ್ ಪರಿಣಾಮ ವರ ಅಸ್ವಸ್ಥನಾಗಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಹಾರ್ಟ್ ಅಟ್ಯಾಕ್ ಆದಾಗ ನೋವಿನ ಅನುಭವ ಹೇಗಿರುತ್ತೆ? ಬದುಕುಳಿದವರು ಹೇಳಿದ್ದಿಷ್ಟು
ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹಾರ್ಟ್ಅಟ್ಯಾಕ್, ಕುಸಿದುಬಿದ್ದು ಯುವಕ ಸಾವು
ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಯುವಕನೊಬ್ಬ ಹೃದಯಾಘಾತಗೊಂಡು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಹೈದರಾಬಾದ್‌ನ ಸಿಕಂದರಾಬಾದ್‌ನಲ್ಲಿ ನಡೆದಿದೆ. ಸಿಕಂದರಾಬಾದ್‌ನ ಲಾಲಾಪೇಟ್‌ನ ಪ್ರೊಫೆಸರ್ ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದ 39 ವರ್ಷದ ವ್ಯಕ್ತಿ ಹೃದಯಾಘಾತದಿಂದ (Heartattack) ಸಾವನ್ನಪ್ಪಿದ್ದಾರೆ. ಮೃತನನ್ನು ಮಲ್ಕಾಜ್ಗಿರಿ ಮೂಲದ ಪರಮೇಶ್ ಯಾದವ್ ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ನಿಯಮಿತವಾಗಿ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ಯಾವತ್ತಿನಂತೆ ಕ್ರೀಡಾಂಗಣಕ್ಕೆ (Playground) ಹೋಗಿದ್ದರು. ಅಲ್ಲೇ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.