ರಾಜ್ಯದಲ್ಲಿ ದಿನೇದಿನೆ ಹೆಚ್ಚಳವಾಗ್ತಿದೆ ಕೊರೊನಾ! ಇಂದು 252 ಮಂದಿಗೆ ಪಾಸಿಟಿವ್, ಇಬ್ಬರು ಸಾವು!

By Kannadaprabha News  |  First Published Jan 9, 2024, 10:19 PM IST

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ 252 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,131ಕ್ಕೆ ಏರಿಕೆಯಾಗಿದೆ.


ಬೆಂಗಳೂರು (ಜ.9): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ 252 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,131ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 252 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಇಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Tap to resize

Latest Videos

ಇಂದು ಕೋವಿಡ್ ನಿಂದ 441 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,359 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.42ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 

ರಾಜ್ಯಪಾಲ ಥಾವರ್‌ ಚಂದ್ ಗೆಹಲೋತ್‌ಗೆ ಕೊರೊನಾ ಪಾಸಿಟಿವ್!

ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 172 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 8, ಹಾಸನ 20, ಧಾರವಾಡ 6 ಪ್ರಕರಣ ಸೇರಿದಂತೆ ಒಟ್ಟು 252 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

click me!