Covid Cases: ದೇಶದಲ್ಲಿ 7830 ಹೊಸ ಕೋವಿಡ್‌ ಕೇಸ್‌, 16 ಸೋಂಕಿತರ ಸಾವು

By Kannadaprabha News  |  First Published Apr 13, 2023, 8:19 AM IST

ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ತಿದೆ. ನಿನ್ನೆ 7,830 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಆದರೆ ಇದೆಲ್ಲದರ ಮಧ್ಯೆ ದೇಶದಲ್ಲಿ ಮತ್ತೊಂದು ಕೋವಿಡ್‌ ಅಲೆಯ ಭೀತಿಯನ್ನು ತಜ್ಞರು ತಳ್ಳಿಹಾಕಿದ್ದಾರೆ.


ನವದೆಹಲಿ: ಬುಧವಾರ ಬೆಳಗ್ಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 7,830 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದೆ. ಇದು ಕಳೆದ 7 ತಿಂಗಳಲ್ಲೇ (223 ದಿನ) ಗರಿಷ್ಠ ಪ್ರಮಾಣವಾಗಿದೆ. ಇದೇ ವೇಳೆ ಸೋಂಕಿಗೆ 16 ಮಂದಿ ಸೋಂಕಿಗೆ ಮೃತರಾಗಿದ್ದು, ಒಟ್ಟು ಮೃತರ ಸಂಖ್ಯೆ 5.30 ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಗುಣಮುಖರ ಸಂಖ್ಯೆ ಕಡಿಮೆ ಇರುವುದರಿಂದ ಸಕ್ರಿಯ ಪ್ರಕರಣಗಳು 40,215ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ 4.47 ಮಂದಿ ಸೋಂಕಿಗೆ ಗುರಿಯಾಗಿದ್ದು ಅದರಲ್ಲಿ 4.42 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮತ್ತೆ ಕೋವಿಡ್ ಭೀತಿ, ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ
ಇತ್ತೀಚಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ (Mask compulsory). ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.    

Latest Videos

undefined

Covid and Health: ಕೊರೋನಾ ಬಂದಿದ್ದೇ ಬಂದಿದ್ದು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಲ್ಲಿ ವಿಪರೀತ ಏರಿಕೆ

ಕೇರಳ: ಗರ್ಭಿಣಿಯರು, ವೃದ್ಧರು, ಮಕ್ಕಳು ಮತ್ತು ವಯೋಸಹಜ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕೇರಳದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್‌ ಸೋಂಕು ತುಸು ಹೆಚ್ಚೇ ಇದೆ. ಶನಿವಾರ ರಾಜ್ಯದಲ್ಲಿ 1,801 ಜನರಿಗೆ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ (Health minister) ವೀಣಾ ಜಾರ್ಜ್ ಶನಿವಾರ ಮಾಸ್ಕ್‌ ಕಡ್ಡಾಯಯ ಬಗ್ಗೆ ಆದೇಶ ಹೊರಡಿಸಿದ್ದಾರೆ.ರು.

ಪುದುಚೇರಿ: ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪುದುಚೇರಿ ಆಡಳಿತವು ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೊರೋನಾ ವೈರಸ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎತ್ತಿ ಹಿಡಿದ ಜಿಲ್ಲಾಧಿಕಾರಿ ಇ ವಲ್ಲವನ್ ಅವರು,'ಮುಂದಿನ ದಿನಗಳಲ್ಲಿ ಕೋವಿಡ್ -19 ರ ಪ್ರಸರಣ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡಲು ಆಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕೋವಿಡ್ ಸೋಂಕಿಗೂ, ಹಾರ್ಟ್‌ಅಟ್ಯಾಕ್‌ಗೂ ಸಂಬಂಧವಿದ್ಯಾ? ಕೇಂದ್ರ ಆರೋಗ್ಯ ಸಚಿವರು ಹೇಳಿದ್ದೇನು?

ಹರಿಯಾಣ: ಹರಿಯಾಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶುಕ್ರವಾರ ಹರ್ಯಾಣದಲ್ಲಿ 407 ಮಂದಿಗೆ ಸೋಂಕು ತಗುಲಿದೆ. ಮಾಹಿತಿಯ ಪ್ರಕಾರ, ಹರಿಯಾಣದ ಅರ್ಧದಷ್ಟು ಕೋವಿಡ್ ಪ್ರಕರಣಗಳು ಗುರುಗ್ರಾಮ್ ಜಿಲ್ಲೆಯಿಂದ ದಾಖಲಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ಶುಕ್ರವಾರ ಬುಲೆಟಿನ್‌ನಲ್ಲಿ ತಿಳಿಸಿದೆ. ಈ ವಾರ ಎರಡು ಕೋವಿಡ್ ಸಂಬಂಧಿತ ಸಾವುಗಳು ಸಂಭವಿಸಿವೆ.

ಕೋವಿಡ್‌ ಸಾಂಕ್ರಾಮಿಕ ಅಂತ್ಯದತ್ತ, 2 ವಾರದಲ್ಲಿ ಸೋಂಕು ಪೂರ್ಣ ಇಳಿಕೆ
ದೇಶದಲ್ಲಿ ಮತ್ತೊಂದು ಕೋವಿಡ್‌ ಅಲೆಯ ಭೀತಿಯನ್ನು ತಳ್ಳಿಹಾಕಿರುವ ತಜ್ಞರು (Experts), ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ಅಂತ್ಯದತ್ತ ಸಾಗಿದೆ. ಮುಂದಿನ 10 -12 ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಬಳಿಕ ಕಡಿಮೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಕ್ಸ್‌ಬಿಬಿ.1.16 ರೂಪಾಂತರಿಯ ಕಾರಣ ಸೋಂಕಿನ ಪ್ರಮಾಣ ಹೆಚ್ಚಿದೆಯಾದರೂ ಆಸ್ಪತ್ರೆಗೆ (Hospital) ದಾಖಲಾತಿ ಕಡಿಮೆ ಇದೆ. ಇವುಗಳ ಉಪತಳಿ ಪ್ರಬಲವಾದ ರೂಪಾಂತರಿಗಳಾಗಿ (Variant) ಮುಂದುವರೆದರೂ ರೋಗವು ಗಮನಾರ್ಹವಾಗಿ ಹರಡುವುದಿಲ್ಲ. ಅದರ ತೀವ್ರತೆ ಕಡಿಮೆ ಇರಲಿದೆ. ಹೀಗಾಗಿ ಕೋವಿಡ್‌ ಒಮ್ಮೆಲೆ ಏರಿಕೆ ಕಂಡು ಕುಸಿಯಲಿದೆ ಎಂದು ತಜ್ಞರು ಹೇಳಿದ್ದಾರೆ.

click me!