ರಾಜ್ಯಕ್ಕೆ ಎಂಟ್ರಿ ಕೊಟ್ಟ ಕೊವಿಡ್:ಒಂದೇ ದಿನದಲ್ಲಿ 125 ಜನರಿಗೆ ಸೋಂಕು, ಮೂರು ಸಾವು!

By Kannadaprabha News  |  First Published Dec 26, 2023, 12:24 AM IST

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮೂವರು ಸಾವನ್ನಪ್ಪಿದ್ದಾರೆ.


ಬೆಂಗಳೂರು (ಡಿ.26): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮೂವರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 125 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,089,587 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 436ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 3.96ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.

Latest Videos

undefined

ಬೆಂಗಳೂರಿನಲ್ಲಿಯೇ ಬರೊಬ್ಬರಿ 94 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದ್ದರೆ ದಕ್ಷಿಣ ಕನ್ನಡ-5, ಹಾಸನ-5, ಮೈಸೂರು-13, ಶಿವಮೊಗ್ಗ-2, ವಿಜಯಪುರ-2, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ವೈರಸ್​ ಪತ್ತೆಯಾಗಿದೆ.

ಸಮುದಾಯಕ್ಕೆ ಹಬ್ಬಿದ ಸೋಂಕು: ಕೊಚ್ಚಿಯಲ್ಲಿ ಜ್ವರವಿರುವ ಶೇ.30ರಷ್ಟು ಜನರಲ್ಲಿ ಕೋವಿಡ್ ಸೋಂಕು

ಕರ್ನಾಟಕಕ್ಕೂ ಓಮಿಕ್ರಾನ್ ಉಪತಳಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ ಕೊರೊನಾ ರೂಪಾಂತರಿ JN.1 ವೈರಸ್ ಕರ್ನಾಟಕಕ್ಕೂ ಎಂಟ್ರಿ ಕೊಟ್ಟಿದ್ದು, 35 ಪ್ರಕರಣಗಳು ಪತ್ತೆಯಾಗಿವೆ. ಕೇವಲ ಕೇರಳದಲ್ಲಿ ಓಮಿಕ್ರಾನ್ ಉಪತಳಿ ಜೆಎನ್.1 ವೈರಸ್ ಪತ್ತೆಯಾಗಿತ್ತು. ಆದರೆ ಇದೀಗ ರಾಜ್ಯಕ್ಕೂ ಎಂಟ್ರಿ ಕೊಟ್ಟಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ಕೋವಿಡ್‌ ಉಪ ತಳಿ ಜೆ.ಎನ್.1 ಪತ್ತೆಯಾಗಿದ್ದು, 35ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

 

ಹಿಂದಿನ ಕೋವಿಡ್‌ ತಪ್ಪು ಮತ್ತೆ ಆಗಕೂಡದು: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

click me!