ಶಿವಮೊಗ್ಗದಲ್ಲಿ 200ರ ಗಡಿ‌ದಾಟಿದ ಡೆಂಘೀ ಪ್ರಕರಣ: ಜೂನ್ ಬಳಿಕ ಇನ್ನೂ ಏರಿಕೆ ಸಾಧ್ಯತೆ

By Kannadaprabha News  |  First Published Jun 23, 2024, 10:31 PM IST

ಮಲೆನಾಡು ಶಿವಮೊಗ್ಗದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 200ರ ಗಡಿ‌ದಾಟಿದೆ. ಬಿಸಿಲ ಝಳದಿಂದ ಕಂಗೆಟ್ಟಿದ್ದ ಜಿಲ್ಲೆಗೆ ವರುಣರಾಯನ ಆಗಮನವಾಗಿದೆ. ಈ ಮಧ್ಯೆ ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ಜಿಲ್ಲೆಯನ್ನು ಕಾಡುತ್ತಿದೆ. 


ಗಣೇಶ್‌ ತಮ್ಮಡಿಹಳ್ಳಿ

ಶಿವಮೊಗ್ಗ (ಜೂ.23): ಮಲೆನಾಡು ಶಿವಮೊಗ್ಗದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 200ರ ಗಡಿ‌ದಾಟಿದೆ. ಬಿಸಿಲ ಝಳದಿಂದ ಕಂಗೆಟ್ಟಿದ್ದ ಜಿಲ್ಲೆಗೆ ವರುಣರಾಯನ ಆಗಮನವಾಗಿದೆ. ಈ ಮಧ್ಯೆ ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ಜಿಲ್ಲೆಯನ್ನು ಕಾಡುತ್ತಿದೆ. ಕಳೆದ ಎರಡು ತಿಂಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಘೀ ಖಚಿತ ಅನ್ನುವ ರೀತಿಯ ಸ್ಥಿತಿ ಇದೆ. ಮಳೆ ಆರಂಭ ವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಘೀ ಭೀತಿ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 23 ಪ್ರಕರಣ ವರದಿಯಾಗಿವೆ. 

Tap to resize

Latest Videos

undefined

ಡೆಂಘೀ ಜ್ವರದಿಂದ ಈವರೆಗೆ ಇಬ್ಬರು ಮೃತಪಟ್ಟಿದ್ದರೂ ಮೃತಪಟ್ಟವರಲ್ಲಿ ಬೇರೆ ರೋಗಗಳ ಲಕ್ಷಣಗಳು ಕಂಡು ಬಂದಿರುವುದರಿಂದ ಡೆಂಘೀ ಜ್ವರದಿಂದಲೇ ಮೃತಪಟ್ಟಿರುವ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿಲ್ಲ. ಕಳೆದ ಬಾರಿಗೆ ಹೋಲಿಸಿಕೊಂಡರೆ ಈ ಬಾರಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ವರ್ಷ ಒಟ್ಟು 456 ಪ್ರಕರಣಗಳು ಖಂಡು ಬಂದಿದ್ದವು. ಕಳೆದ ಬಾರಿ ಜೂನ್‌ ವರೆಗೆ ಪ್ರತಿ ತಿಂಗಳು ಬೆರಳಿಕೆಯಷ್ಟು ಪ್ರಕರಣಗಳು ಮಾತ್ರ ದಾಖ ಲಾಗು ತ್ತಿದ್ದವು. ಜೂನ್‌ ಬಳಿಕ ಪ್ರಕರಣಗಳ ಸಂಖ್ಯೆ ವೇಗ ಪಡೆದುಕೊಂಡಿತ್ತು. ಆದರೆ, ಬಾರಿ ಜೂನ್‌ನಲ್ಲೇ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದೆ. ಜೂನ್‌ ಬಳಿಕ ಇವುಗಳ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ಸರ್ಕಾರಕ್ಕೆ ತಾಕತ್ತಿದ್ದರೆ ಜಿಪಂ, ಬಿಬಿಎಂಪಿ ಚುನಾವಣೆ ಘೋಷಿಸಲಿ: ಆರ್‌.ಅಶೋಕ್‌ ಸವಾಲು

ಸದ್ಯ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಘೀ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಬೇಸಿಗೆ ಅವಧಿಯಲ್ಲಿ ಮಳೆ ಇಲ್ಲದೆ ಚರಂಡಿ, ಮೋರಿ-ಕಾಲುವೆಗಳಲ್ಲಿ ನೀರು ನಿಂತು ಸೊಳ್ಳೆಗಳ ಲಾರ್ವ ಪ್ರಮಾಣ ಹೆಚ್ಚಾಗಿ ಸೊಳ್ಳೆಗಳ ಕಾಟವು ಜಿಲ್ಲೆಯಲ್ಲಿ ಮಿತಿ ಮೀರಿದೆ. ಇದರ ಪರಿಣಾಮ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಒಟ್ಟಾರೆ, ಡೆಂಘೀ ಆತಂಕ ಬೇಡ, ಎಚ್ಚರವಿರಲಿ ಎನ್ನುವ ಸಂದೇಶವನ್ನು ಚಿಕ್ಕಮಗಳೂರು ಆರೋಗ್ಯ ಇಲಾಖೆ ನೀಡುತ್ತಿದ್ದು, ಸೊಳ್ಳೆಗಳಿಂದ ಸೂಕ್ತ ರಕ್ಷಣೆ ಪಡೆ ಯಲು ಜನರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ. 

ಆದರೂ, ಈ ಪರಿ ಡೆಂಘೀ ಮಹಾಮಾರಿ ಜಿಲ್ಲೆಯನ್ನು ಕಾಡುತ್ತಿದ್ದು, ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮತ್ತಷ್ಟು ಎಚ್ಚೆತ್ತುಕೊಳ್ಳುವ ಅವಶ್ಯಕತೆ ಇದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೆಡ್​ಗಳ ಸಮಸ್ಯೆ ಎದುರಾದರು ಆಶ್ಚರ್ಯವಿಲ್ಲ. ಡೆಂಘೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ನಿಯಂತ್ರಣ ಕ್ರಮಗಳ ತೀವ್ರಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಇಲಾಖೆಯು ಡಿಎಚ್‌ಒ ನೇತೃತ್ವದಲ್ಲಿ ರೋಗ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆಗಳು ನಡೆಸುವುದರ ಜೊತೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇದಲ್ಲದೆ, ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಪ್ರತಿನಿತ್ಯ ಮನೆ-ಮನೆಗೆ ಭೇಟಿ ನೀಡುವುದು, ಜಿಲ್ಲಾ ಆಸ್ಪತ್ರೆಗಳಲ್ಲಿ ದೃಢಪಟ್ಟ ಡೆಂಘೀ ಪ್ರಕರಣಗಳ ಮೇಲ್ವಿಚಾರಣೆ, ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನಗಳು ಮತ್ತು ಪರೀಕ್ಷಾ ಕಿಟ್‌ಗಳು ಮತ್ತು ಚಿಕಿತ್ಸಾ ಔಷಧಿಗಳ ಲಭ್ಯತೆಯನ್ನು ಪರೀಶೀಲನೆ ನಡೆಸಲಾಗುತ್ತಿದೆ.ತಾಲೂಕುವಾರು ಪ್ರಕರಣ: ಡೆಂಘೀ ಪ್ರಕರಣಗಳ ಸಂಖ್ಯೆ ಇಳಿಮುಖದ ಲಕ್ಷಣ ಕಾಣ್ತಿಲ್ಲ. ಈವರೆಗೆ ಶಿವಮೊಗ್ಗದಲ್ಲಿ 64 , ಹೊಸನಗರ 15, ಸಾಗರ 24 , ಶಿಕಾರಿಪುರ 72 , ಸೊರಬ 21, ತೀರ್ಥ ಹಳ್ಳಿ 10, ಭದ್ರಾವತಿಯಲ್ಲಿ 25 ಪ್ರಕರಣಗಳು ಕಂಡು ಬಂದಿವೆ. ಇನ್ನು, ಕಳೆದ ಬಾರಿ ಜೂನ್‌ 20ವರೆಗೆ ಕೇವಲ 83 ಪ್ರಕರಣಗಳು ದಾಖಲಾಗಿದ್ದವು. ಈ ಬಾರಿ ಡೆಂಘೀ ಪ್ರಕರಣಗಳ ಸಂಖ್ಯೆ 236ಕ್ಕೆ ಏರಿಕೆಯಾಗಿದೆ.

ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್‌

ಶಿವಮೊಗ್ಗ ಡಿಎಚ್‌ಒ ನಟರಾಜ್‌ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಘೀ ಪ್ರಕರಣ ಹೆಚ್ಚಳವಾಗಿದೆ. ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ತಾತ್ಕಾಲಿಕ ವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್‌ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಜನರು ಜ್ವರ ಬಂದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದರೆ ರೋಗದ ತೀವ್ರತೆಯನ್ನು ತಡೆಯಬಹುದು ಎಂದರು.

click me!