ಮದ್ರಾಸ್ ಐ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಪದರದ ಸೋಂಕಿಗೆ (ಊರಿಊತ) ಇದಕ್ಕೆ ಕಂಜಕ್ಟ್ವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡುಬರುತ್ತದೆ. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಈ ಕಾಯಿಲೆ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡುಬರುತ್ತದೆ. ವಿಶೇಷವಾಗಿ
ವಿಜಯಪುರ(ಆ.12): ಕಂಜಕ್ಟ್ವೈಟೀಸ್ (ಮದ್ರಾಸ್) ಇದು ವೈರಸ್‌ನಿಂದ ಹರಡುವ ಕಾಯಿಲೆಯಾಗಿದ್ದು, ಸಾರ್ವಜನಿಕರು ಭಯಪಡದೇ ಎಚ್ಚರಿಕೆಯಿಂದಿರಲು ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಡಾ.ಸಂಪತ್ ಗುಣಾರಿ ಅವರು ಸಲಹೆ ನೀಡಿದರು.
ಮದ್ರಾಸ್ ಐ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಪದರದ ಸೋಂಕಿಗೆ (ಊರಿಊತ) ಇದಕ್ಕೆ ಕಂಜಕ್ಟ್ವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡುಬರುತ್ತದೆ. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಈ ಕಾಯಿಲೆ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡುಬರುತ್ತದೆ. ವಿಶೇಷವಾಗಿ ಶಾಲೆ, ಕಾಲೇಜು, ವಸತಿನಿಲಯಗಳಲ್ಲಿ ಮತ್ತು ಅತಿಥಿಗೃಹಗಳಲ್ಲಿ ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು. 3ರಿಂದ 5 ದಿನಗಳಲ್ಲಿ ಗುಣಮುಖವಾಗುತ್ತದೆ. ಎಲ್ಲ ವಯಸ್ಸಿನವರಲ್ಲೂ ಈ ಕಾಯಿಲೆ ಕಂಡುಬರುತ್ತದೆ ಎಂದು ಅವರು ತಿಳಿಸಿದ್ದಾರೆ.
undefined
ಕೊಡಗು ಜಿಲ್ಲೆಯಲ್ಲಿ ಹರಡುತ್ತಿದೆ ಮದ್ರಾಸ್ ಐ ಸೋಂಕು: 10 ದಿನಗಳಲ್ಲಿ 136 ಜನರಿಗೆ ಹರಡಿದ ರೋಗ
ಸೂಕ್ತ ಚಿಕಿತ್ಸೆಯನ್ನು ತಕ್ಷಣ ಪಡೆಯಬೇಕು:
ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಛಗೊಳಿಸುವುದು, ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸುವುದು, ಶಾಲಾ ವಿದ್ಯಾರ್ಥಿ-ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತ್ರಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳುಸುವುದು ಉತ್ತಮ. ರೋಗ ಕಾಣಿಸಿಕೊಂಡರೆ ನಿರ್ಲಕ್ಷ್ಯ ವಹಿಸದೇ ತಕ್ಷಣ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಅವರು ಹೇಳಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಥವಾ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಡಾ.ಸಂಪತ್ ಗುಣಾರಿ ತಿಳಿಸಿದ್ದಾರೆ.
ಹವಾಮಾನ ವೈಪರಿತ್ಯ: ರಾಜ್ಯದ ಹಲವೆಡೆ Madras eye ಹಾವಳಿ
ರೋಗದ ಲಕ್ಷಣಗಳು
* ಕಣ್ಣು ಕೆಂಪಾಗುವಿಕೆ
* ನೀರು ಸೋರುವಿಕೆ
* ಅತಿಯಾದ ಕಣ್ಣೀರು
* ಕಣ್ಣಿನಲ್ಲಿ ತುರಿಕೆ
* ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ
* ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
* ದೃಷ್ಟಿ ಮಸಕಾಗುವುದು
* ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು
* ರೆಪ್ಪೆ ಊದಿಕೊಳ್ಳುವುದು
ಏನು ಮಾಡಬೇಕು?
* ಸ್ವಚ್ಛವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು.
* ಸೋಂಕು ಕಂಡು ಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ-ಸಲಹೆ ಪಡೆಯಬೇಕು.
* ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಅಹಾರ ನೀಡಬೇಕು.
* ಸೋಂಕಿತ ವ್ಯಕ್ತಿಗಳು ಬಳಸಿದ ಕೈವಸ್ತ್ರ-ಟವೆಲ್ ಇನ್ನಿತರ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.
* ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು.
* ಆರೋಗ್ಯವಂತೆ ವ್ಯಕ್ತಿಯು ಸೋಂಕವುಳ್ಳ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರಬೇಕು.
* ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು.
* ಸೋಂಕಿತ ವ್ಯಕ್ತಿಗಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯಬೇಕು.
* ತೀವ್ರತರದ ಸೋಂಕು ಉಂಟಾದಲ್ಲಿ ತಕ್ಷಣವೇ ನೇತ್ರತಜ್ಞರಿಂದ ಚಿಕಿತ್ಸೆ ಪಡೆಯಬೇಕು.
ಏನು ಮಾಡಬಾರದು?
* ಕೈಗಳಿಂದ ಪದೇಪದೇ ಕಣ್ಣುಗಳನ್ನು ಮುಟ್ಟಬಾರದು.
* ಸ್ವಯಂಚಿಕಿತ್ಸೆ ವಿಧಾನಗಳನ್ನು ಮಾಡಬಾರದು.
* ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು.
* ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು.