ಪ್ರತಿದಿನ ಎರಡೇ ಎರಡು ಹಸಿರುಮೆಣಸು ತಿನ್ನಿ… ಆಮೇಲೆ ಏನೆಲ್ಲಾ ಬದಲಾವಣೆ ಆಗುತ್ತೆ ನೋಡಿ

Published : Oct 30, 2026, 01:40 PM IST
Green Chilli

ಸಾರಾಂಶ

Green Chilli Benefits: ಹಸಿರು ಮೆಣಸಿನಕಾಯಿ ತಿಂದರೆ ಗ್ಯಾಸ್, ಆ್ಯಸಿಡಿಟಿ ಉಂಟಾಗುತ್ತದೆ ಎಂದು ಹಲವರು ಭಾವಿಸುತ್ತಾರೆ. ಆದರೆ ಸರಿಯಾದ ಪ್ರಮಾಣದಲ್ಲಿ ಸೇವಿಸಿದರೆ ಇದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ತೂಕ ನಿಯಂತ್ರಣ, ಜೀರ್ಣಕ್ರಿಯೆ ಸುಧಾರಣೆವರೆಗೆ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡೋಣ.

ಹಸಿಮೆಣಸಿನಕಾಯಿಯ ಆರೋಗ್ಯ ಪ್ರಯೋಜನಗಳು

ಹೆಚ್ಚಿನ ಜನರು ಹಸಿರು ಮೆಣಸಿನಕಾಯಿ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂದು ಭಾವಿಸುತ್ತಾರೆ. ಇದನ್ನು ತಿನ್ನುವುದರಿಂದ ಹೊಟ್ಟೆಯಲ್ಲಿ ಉರಿ, ಗ್ಯಾಸ್ ಮತ್ತು ಆ್ಯಸಿಡಿಟಿ ಸಮಸ್ಯೆಗಳು ಉಂಟಾಗುತ್ತವೆ ಎಂದುಕೊಳ್ಳುತ್ತಾರೆ. ಆದರೆ ಸರಿಯಾದ ಪ್ರಮಾಣದಲ್ಲಿ ಹಸಿರು ಮೆಣಸಿನಕಾಯಿ ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ಮೆಣಸಿನಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ವೈದ್ಯರು ಏನು ಹೇಳಿದ್ದಾರೆ ನೋಡಿ.

ತೂಕ ಇಳಿಕೆ ಮತ್ತು ಮೆಟಾಬಾಲಿಸಂ ಹೆಚ್ಚಿಸಲು ಸಹಕಾರಿ:

ಹಸಿರು ಮೆಣಸಿನಕಾಯಿಯಲ್ಲಿ ಕ್ಯಾಪ್ಸೈಸಿನ್ ಎಂಬ ಅಂಶವಿದೆ. ಇದು ದೇಹದ ಮೆಟಾಬಾಲಿಸಂ ಪ್ರಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ, ದೇಹದಲ್ಲಿ ಹೆಚ್ಚುವರಿ ಕ್ಯಾಲೊರಿಗಳನ್ನು ಸುಡುವ ಪ್ರಕ್ರಿಯೆಗೆ ನೆರವಾಗಬಹುದು. ಇದರಿಂದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಕಾರಿಯಾಗುತ್ತದೆ.

ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿ:

ಹಸಿರು ಮೆಣಸಿನಕಾಯಿಯಲ್ಲಿ ಡಯೆಟರಿ ಫೈಬರ್ ಅಂದರೆ ನಾರಿನಂಶವಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಮಲಬದ್ಧತೆ ಸಮಸ್ಯೆಯನ್ನು ನಿಯಂತ್ರಿಸಲು ಮತ್ತು ಆಹಾರದಲ್ಲಿರುವ ಪೋಷಕಾಂಶಗಳು ದೇಹಕ್ಕೆ ಸರಿಯಾಗಿ ಹೀರಿಕೊಳ್ಳಲು ನೆರವಾಗುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ:

ಹಸಿರು ಮೆಣಸಿನಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬೆಂಬಲಿಸುತ್ತದೆ. ಇದರಿಂದ ಶೀತ, ಕೆಮ್ಮು ಮತ್ತು ಸೋಂಕುಗಳ ವಿರುದ್ಧ ಹೋರಾಡಲು ದೇಹಕ್ಕೆ ಸಹಾಯವಾಗುತ್ತದೆ. ಹಸಿರು ಮೆಣಸಿನಕಾಯಿ ವಿಟಮಿನ್ ಸಿ ಹೊಂದಿರುವ ಉತ್ತಮ ಆಹಾರ ಮೂಲವಾಗಿದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಸಹಕಾರಿ:

ಹಸಿರು ಮೆಣಸಿನಕಾಯಿಯಲ್ಲಿರುವ ಕೆಲವು ಅಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ಇನ್ಸುಲಿನ್ ಕಾರ್ಯನಿರ್ವಹಣೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಬಹುದು. ಹೀಗಾಗಿ ಮಧುಮೇಹ ಇರುವವರು ತಮ್ಮ ಆಹಾರದಲ್ಲಿ ಸೂಕ್ತ ಪ್ರಮಾಣದಲ್ಲಿ ಇದನ್ನು ಸೇರಿಸಿಕೊಳ್ಳಬಹುದು.

ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:

ಹಸಿರು ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಸೇರಿದಂತೆ ಕೆಲವು ಸಕ್ರಿಯ ಅಂಶಗಳು ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮತ್ತು ರಕ್ತನಾಳಗಳ ಆರೋಗ್ಯಕ್ಕೆ ಸಹಾಯ ಮಾಡಬಹುದು. ಅಲ್ಲದೆ, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಕಡಿಮೆ ಮಾಡುವ ಸಾಧ್ಯತೆಯ ಬಗ್ಗೆಯೂ ಅಧ್ಯಯನಗಳು ನಡೆಯುತ್ತಿವೆ. ಇದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗಬಹುದು.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ತಿಂಗಳಲ್ಲಿ 5 ಕೆ.ಜಿ ತೂಕ ಹೆಚ್ಚಿಸಿಕೊಳ್ಳಬೇಕೆ? ಮೊದಲು ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ!
ಈರುಳ್ಳಿ ಮನೆಗೆ ತರುವ ಮೊದಲು ಈ ತಪ್ಪು ಮಾಡಬೇಡಿ; ಇಲ್ಲದಿದ್ದರೆ ಅಡುಗೆ ಮಾಡುವ ಬದಲು ಮನೆ ಕ್ಲೀನ್ ಮಾಡ್ಬೇಕಾಗುತ್ತೆ!