
ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (PCOS) ಅನೇಕ ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಹಾರ್ಮೋನ್ ಅಸ್ವಸ್ಥತೆಗಳಲ್ಲಿ ಒಂದಾಗಿದೆ. ಈ ಸ್ಥಿತಿಯು ಅಂಡಾಶಯಗಳಲ್ಲಿ ಹೆಚ್ಚು ಆಂಡ್ರೋಜೆನ್ (ಪುರುಷ ಹಾರ್ಮೋನುಗಳು) ಉತ್ಪಾದಿಸಲು ಕಾರಣವಾಗುತ್ತದೆ. ಇದು ಅನಿಯಮಿತ ಮುಟ್ಟು, ಮೊಡವೆ ಅಥವಾ ಅತಿಯಾದ ಕೂದಲು ಬೆಳವಣಿಗೆಗೆ ಕಾರಣವಾಗುತ್ತದೆ.
ದೇಹದ ತೂಕ ಹೆಚ್ಚಾಗುವುದು ಕೂಡ ಒಂದು ಪ್ರಮುಖ ಚಿಂತೆಯಾಗಿದೆ. ಏಕೆಂದರೆ ಇದು ಹಾರ್ಮೋನುಗಳ ಸಮತೋಲನವನ್ನು ಮತ್ತಷ್ಟು ಹದಗೆಡಿಸುತ್ತದೆ. ಪಿಸಿಓಎಸ್‌ನಿಂದ ಬಳಲುತ್ತಿರುವವರಲ್ಲಿ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುವ 4 ಬೆಳಗಿನ ಅಭ್ಯಾಸಗಳ ಬಗ್ಗೆ ಆರೋಗ್ಯ ತಜ್ಞ ಡ್ರೂ ಬೈರ್ಡ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇನ್ಸುಲಿನ್ ಮತ್ತು ಕಾರ್ಟಿಸೋಲ್ ಎಂಬ ಎರಡು ಹಾರ್ಮೋನುಗಳನ್ನು ಕಡಿಮೆ ಮಾಡುವುದು ಗಮನಿಸಬೇಕಾದ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ.
1. ಪ್ರತಿದಿನ ಒಂದೇ ಸಮಯದಲ್ಲಿ ಮಲಗುವುದು ಮತ್ತು ಏಳುವುದು ಸರ್ಕಾಡಿಯನ್ ರಿದಮ್ ಅನ್ನು ನಿಯಂತ್ರಿಸಲು ಮತ್ತು ದೇಹದಲ್ಲಿನ ಕಾರ್ಟಿಸೋಲ್ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.
2. ಪ್ರೋಟೀನ್ ಭರಿತ ಉಪಹಾರವನ್ನು ಸೇವಿಸುವುದು ಗಮನಿಸಬೇಕಾದ ಇನ್ನೊಂದು ವಿಷಯ. ನಿಮ್ಮ ಉಪಹಾರದ ಭಾಗವಾಗಿ 25 ಗ್ರಾಂ ಪ್ರೋಟೀನ್ ಸೇರಿಸಿ. ಇದು ಚಯಾಪಚಯ, ಶಕ್ತಿ, ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್‌ಗೆ ಬಹಳ ಮುಖ್ಯವಾಗಿದೆ.
3. ಪಿಸಿಓಎಸ್ ಸಮಸ್ಯೆ ಇರುವವರು ಪ್ರತಿದಿನ ಒಂದು ಕಪ್ ಗ್ರೀನ್ ಟೀ ಕುಡಿಯಿರಿ. ಇದು ಇನ್ಸುಲಿನ್ ಪ್ರತಿರೋಧವನ್ನು ಸುಧಾರಿಸಲು, ಟೆಸ್ಟೋಸ್ಟೆರಾನ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಗಳು ಸಾಬೀತುಪಡಿಸಿವೆ. ಗ್ರೀನ್ ಟೀ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುವುದರಿಂದ, ಪ್ರತಿದಿನ 2 ಕಪ್ ಗ್ರೀನ್ ಟೀ ಕುಡಿಯಿರಿ. ಪಿಸಿಓಎಸ್ ಇರುವ ಮಹಿಳೆಯರಲ್ಲಿ ಇದು ಫಾಸ್ಟಿಂಗ್ ಇನ್ಸುಲಿನ್ ಅನ್ನು ಕಡಿಮೆ ಮಾಡುತ್ತದೆ ಮತ್ತು ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ.
4. ಪ್ರತಿದಿನ 100 ಗ್ರಾಂ ಪ್ರೋಟೀನ್ ಸೇವಿಸಿ. ಏಕೆಂದರೆ ಪ್ರೋಟೀನ್ ರಕ್ತದಲ್ಲಿನ ಸಕ್ಕರೆಯನ್ನು ಸಮತೋಲನಗೊಳಿಸುತ್ತದೆ. ಅಲ್ಲದೆ, ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ಅಧಿಕ ಪ್ರೋಟೀನ್ ಆಹಾರವು ಪಿಸಿಓಎಸ್ ಇರುವವರಲ್ಲಿ ಇನ್ಸುಲಿನ್ ಮತ್ತು ಆಂಡ್ರೋಜೆನ್ ಮಟ್ಟವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.