Brain Health: ದೇಶದಲ್ಲೇ ಮೊದಲು, ಕರ್ನಾಟಕ ಮೆದುಳು ಆರೋಗ್ಯ, ಮಹತ್ವ ತಿಳಿಸಿದ ಸುಧಾಕರ್

Published : Jan 26, 2022, 09:42 PM ISTUpdated : Jan 27, 2022, 08:11 AM IST
Brain Health: ದೇಶದಲ್ಲೇ ಮೊದಲು, ಕರ್ನಾಟಕ ಮೆದುಳು ಆರೋಗ್ಯ, ಮಹತ್ವ ತಿಳಿಸಿದ ಸುಧಾಕರ್

ಸಾರಾಂಶ

* ಕರ್ನಾಟಕ ಮೆದುಳು ಆರೋಗ್ಯಕಾರ್ಯಕ್ರಮ ಇದು ದೇಶದಲ್ಲೇ ಮೊದಲು ಸುಧಾಕರ್‌ * ರಾಜ್ಯಕ್ಕೆ ಮಾನಸಿಕ ರೋಗ ತಜ್ಞರ ಹೆಚ್ಚು ಅವಶ್ಯಕತೆ ಇದೆ * ಹೀಗಾಗಿ 2 ಲಕ್ಷ ವಿದ್ಯಾರ್ಥಿಗಳ ಬಳಕೆಗೆ ನಿರ್ಧಾರ: ಸುಧಾಕರ್‌ * ‘ಕರ್ನಾಟಕ ಮೆದುಳು ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು(ಜ. 26) ರಾಜ್ಯದಲ್ಲಿ ವೈದ್ಯ ಶಿಕ್ಷಣ (Medical Education) ಪಡೆಯುತ್ತಿರುವ ಸುಮಾರು 2 ಲಕ್ಷ ಮಂದಿಯನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆರೋಗ್ಯ (Health Minister) ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ (Dr. K Sudhakar) ತಿಳಿಸಿದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ನರರೋಗ ವಿಜ್ಞಾನಗಳ ಸಂಸ್ಥೆಯು (Nimans) ನೀತಿ ಆಯೋಗ ಹಾಗೂ ಆರೋಗ್ಯ ಇಲಾಖೆಯ ನೆರವಿನಲ್ಲಿ ಪ್ರಾಯೋಗಿಕವಾಗಿ ಕೈಗೊಂಡಿರುವ ಮಾನಸಿಕ ರೋಗಿಗಳ ತಪಾಸಣೆ, ವೈದ್ಯರಿಗೆ ತರಬೇತಿ ನೀಡುವ ‘ಕರ್ನಾಟಕ ಮೆದುಳು ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.

Omicron Threat: ಲಸಿಕೆ ಹಾಕಿಸದವರಿಗೆ ಶಾಕಿಂಗ್ ನ್ಯೂಸ್ ಕೊಟ್ಟ WHO!

ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನವಜಾತ ಶಿಶುವಿಗೂ ಮಾನಸಿಕ ಆರೋಗ್ಯದ ತಪಾಸಣೆ ಮಾಡಿ ರೋಗ ಪತ್ತೆ ಮಾಡುವ ಅಗತ್ಯವಿದೆ ಎಂದರು.

ದೇಶದಲ್ಲೇ ಮೊದಲು: ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ನಿಂದ ‘ಕರ್ನಾಟಕ ಮೆದುಳು ಆರೋಗ್ಯ’ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದು, ದೇಶದಲ್ಲೇ ಮೊದಲ ಪ್ರಯತ್ನವಾಗಿದೆ. ಮಾನಸಿಕ ರೋಗಗಳ ತಪಾಸಣೆ ಮಾಡುವ ಜತೆಗೆ ಚಿಕಿತ್ಸೆ ನೀಡುವ ಕುರಿತು ಸ್ಥಳೀಯ ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಸ್ಥಳೀಯ ರೋಗಿಗಳನ್ನು ಪತ್ತೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ಬಜೆಟ್‌ನಲ್ಲಿ ಈ ಕಾರ್ಯಕ್ರಮಕ್ಕಾಗಿ ಹೆಚ್ಚು ಅನುದಾನ ಮೀಸಲಿಡಲಾಗುವುದು ಎಂದರು.

ಸಾಮಾಜಿಕ ಪರಿಸ್ಥಿತಿ, ಕೌಟುಂಬಿಕ ಸ್ಥಿತಿ ಮೊದಲಾದ ಕಾರಣಗಳಿಂದ ಅನೇಕರು ಮಾನಸಿಕ ಒತ್ತಡದಿಂದ ಬಳಲುತ್ತಾರೆ. ಇದು ಪ್ರತಿ ದಿನದ ಚಟುವಟಿಕೆಗಳ ಮೇಲೆ ಕೆಟ್ಟಪರಿಣಾಮ ಬೀರುತ್ತದೆ. ಆದ್ದರಿಂದ ಮಾನಸಿಕ ಆರೋಗ್ಯ ತಜ್ಞರು ರಾಜ್ಯಕ್ಕೆ ಹೆಚ್ಚು ಬೇಕಾಗಿದೆ. ಸದ್ಯ ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ನಿಮ್ಹಾನ್ಸ್‌ ನೆರವು: ಕೊರೋನಾ ಮೊದಲ ಎರಡು ಅಲೆಗಳ ಸಂದರ್ಭದಲ್ಲಿ ನಿಮ್ಹಾನ್ಸ್‌ ನೇತೃತ್ವದಲ್ಲಿ ಸೊಂಕಿತರ ಹಾಗೂ ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆ ಮಾಡಲಾಯಿತು. ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು.ಸಾಮಾನ್ಯ ವೈದ್ಯರು ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್‌ ತರಬೇತಿ ನೀಡಲಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಸುಧಾಕರ್,  ಆರೋಗ್ಯ ಇಲಾಖೆಯಿಂದ ವಿಷನ್ ವರದಿ ರೂಪಿಸಲಾಗುತ್ತಿದೆ. ಮುಂದಿನ 20 ವರ್ಷಗಳಲ್ಲಿ ಕರ್ನಾಟಕ ಹೇಗೆ ಸ್ವಾಸ್ಥ್ಯ ರಾಜ್ಯವಾಗಬೇಕು ಹಾಗೂ ಮೂರು ಹಂತಗಳ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಹೇಗೆ ಸಾಧ್ಯ ಎನ್ನುವ ವರದಿ ಸಿದ್ಧಮಾಡಲಾಗುತ್ತಿದೆ. ಸಮಿತಿಯಲ್ಲಿ 30 ಹಿರಿಯ ತಜ್ಞರಿದ್ದಾರೆ. ಕಳೆದೊಂದು ವರ್ಷದಲ್ಲಿ ಸುಮಾರು 750 ತಜ್ಞರು ಇದನ್ನು ರೂಪಿಸಲು ಭಾಗಿಯಾಗಿದ್ದಾರೆ. ಜ. 28 ಕ್ಕೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಆರು ತಿಂಗಳಾಗುತ್ತದೆ. ಈ ಸಂದರ್ಭದಲ್ಲಿ ಒಂದು ವರದಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಸಿದರು.

ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಸಹ ಒಂದು ಹಂತದ ನಿಯಂತ್ರಣದಲ್ಲಿ ಇದ್ದರೂ ಪ್ರತಿದಿನ ನಲವತ್ತು ಸಾವಿರಕ್ಕೂ ಅಧಿಕ ಕೇಸುಗಳು ದಾಖಲಾಗುತ್ತಿದೆ. ಹಿಂದಿನ ಅಲೆಗಳಿಗೆ ಹೋಲಿಕೆ ಮಾಡಿದರೆ ಮೂರನೇ ಅಲೆ ಪ್ರಾಣಕ್ಕೆ ಸಂಚಕಾರ ತರುತ್ತಿರುವ ಪ್ರಕರಣಗಳು ಕಡಿಮೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ.

 

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾತ್ರಿ ವೇಳೆ ಅಪ್ಪಿತಪ್ಪಿಯೂ ತಿನ್ನಬಾರದ ಹಣ್ಣುಗಳು ಇವು: ತಜ್ಞರು ಹೇಳೋದೇನು?
ಸೀನು ಯಾಕೆ ಬರುತ್ತೆ ಗೊತ್ತಾ? ಇಲ್ಲಿದೆ ಅದರ ಹಿಂದಿರುವ ಕುರಿತ ಅಚ್ಚರಿಯ ಸಂಗತಿಗಳು!