ಪ್ರಧಾನಿ ನರೇಂದ್ರ ಮೋದಿ ದೇಶದ ಆರೋಗ್ಯ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸುವಂತೆ ಸೂಚನೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಕೋವಿಡ್ ಆತಂಕ ಇನ್ನು ಅಂತ್ಯವಾಗಿಲ್ಲ. ಮುಂಬರುವ ಹಬ್ಬಗಳ ದಿನಗಳಲ್ಲಿ ಕೋವಿಡ್ ಇನ್ನು ಉಲ್ಬಣಿಸುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿಡುವಂತೆ ಹೇಳಿದ್ದಾರೆ.
ನವದೆಹಲಿ: ಚೀನಾ, ಜಪಾನ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಉಲ್ಬಣವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಆರೋಗ್ಯ ವ್ಯವಸ್ಥೆ (Health System)ಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸುವಂತೆ ಸೂಚನೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಜೊತೆ ತುರ್ತು ಸಭೆ (Meeting) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಕೋವಿಡ್ ಆತಂಕ ಇನ್ನು ಅಂತ್ಯವಾಗಿಲ್ಲ. ಮುಂಬರುವ ಹಬ್ಬಗಳ ದಿನಗಳಲ್ಲಿ ಕೋವಿಡ್ ಇನ್ನು ಉಲ್ಬಣಿಸುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಬೇಕು. ಆಸ್ಪತ್ರೆಗಳಲ್ಲಿ ಕೋವಿಡ್ ಸಂಬಂಧಿತ ಚಿಕಿತ್ಸೆಗಾಗಿ (Treatment) ಆಕ್ಸಿಜನ್ ಸಿಲಿಂಡರ್, ಪಿಎಸ್ಎ ಘಟಕ, ವೆಂಟಿಲೇಟರ್, ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗಾಗಿ ಹಾಸಿಗೆ ಹಾಗೂ ವೈದ್ಯಕೀಯ ಸಿಬ್ಬಂದಿ ಸಾಕಷ್ಟುಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು' ಎಂದು ಸೂಚಿಸಿದ್ದಾರೆ.
ಕೋವಿಡ್ ಸಂಬಂಧಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ
ಅಲ್ಲದೇ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ಲಸಿಕೆ (Vaccine) ಹಾಗೂ ಔಷಧಿಗಳನ್ನು ಅಗತ್ಯ ಪ್ರಮಾಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಈ ಔಷಧಿಗಳ ಬೆಲೆಯ ಮೇಲೂ ನಿಗಾ ಇರಿಸಬೇಕು ಎಂದು ಸೂಚನೆ ನೀಡಿದ್ದಾರೆ. ಇದಲ್ಲದೆ ಜನರು ಕೂಡಾ ಕೋವಿಡ್ ಸಂಬಂಧಿ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಮತ್ತೆ ಆರಂಭಿಸಬೇಕು. ವಿಶೇಷವಾಗಿ ವಯಸ್ಕರು ಶೀಘ್ರವೇ ಮುಂಜಾಗ್ರತಾ ಡೋಸು ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
undefined
ಆದಷ್ಟು ಬೇಗ ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಿ: ಸಾರ್ವಜನಿಕರಿಗೆ ಐಎಂಎ ವೈದ್ಯರ ಎಚ್ಚರಿಕೆ
ಪ್ರತಿ ರಾಜ್ಯಗಳಿಗೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಒಳಪಡಿಸಬೇಕು ಎಂದು ಸೂಚಿಸಿದ್ದು, ಹೊಸ ತಳಿಗಳು ಪತ್ತೆಯಾದಲ್ಲಿ ಅವುಗಳ ಬಗ್ಗೆ ತಿಳಿದುಕೊಳ್ಳಲು ಇದರಿಂದ ನೆರವಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಅಧಿಕಾರಿಗಳಿಗೆ (Officers) ವಿಶೇಷವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಸೋಂಕಿನ ನಿಗಾ ವ್ಯವಸ್ಥೆಯನ್ನು ಬಲಪಡಿಸಲು ಸೂಚಿಸಿದ್ದಾರೆ.
ಸಂಸತಲ್ಲೂ ಮಾಸ್ಕ್ ಧರಿಸಲು ಸೂಚನೆ
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆ ಮುಖ್ಯಸ್ಥೆ ಜಗದೀಪ್ ಧನಕರ್ ಅವರು ಸ್ವತಃ ತಾವು ಮಾಸ್ಕ್ ಧರಿಸಿಕೊಂಡು ಕಲಾಪಕ್ಕೆ ಹಾಜರಾಗಿ ಸದಸ್ಯರಿಗೂ ಮಾಸ್ಕ್ ಧರಿಸುವಂತೆ ಸೂಚಿಸಿದರು. ಜೊತೆಗೆ ಎಲ್ಲಾ ಸಂಸದರು ಸಾಮಾಜಿಕ ಅಂತರ (Social distance) ಕಾಪಾಡಿಕೊಳ್ಳುವ ಮೂಲಕ ದೇಶದ ಜನರಿಗೆ ಮಾದರಿಯಾಗಬೇಕು ಎಂದು ಹೇಳಿದರು. ಪ್ರಧಾನಿ ಮೋದಿ ಸೇರಿದಂತೆ ಆಡಳಿತ ಬಿಜೆಪಿಯ ಬಹುತೇಕ ಸದಸ್ಯರು ಸಂಸತ್ತಿನ ಉಭಯ ಸದನಗಳಲ್ಲಿ ಮಾಸ್ಕ್ ಧರಿಸಿ ಗಮನ ಸೆಳೆದರೆ, ವಿಪಕ್ಷ ನಾಯಕರು ಮಾಸ್ಕ್‌ನಿಂದ ದೂರವೇ ಉಳಿದಿದ್ದರು.
ಕೋವಿಡ್ ನಿಗಾ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ
ಜಾಗತಿಕವಾಗಿ ಕೋವಿಡ್ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ರಾಜ್ಯಗಳಲ್ಲಿ ಕೋವಿಡ್ ಬಗ್ಗೆ ಕಟ್ಟೆಚ್ಚರ ವಹಿಸಲು ಹಾಗೂ ನಿಯಂತ್ರಣ ಕ್ರಮಗಳನ್ನು ಬಿಗಿಗೊಳಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅಲ್ಲದೆ, ಕೋವಿಡ್ ಹೆಚ್ಚಿರುವ ಸ್ಥಳಗಳಲ್ಲಿ ಕಂಟೋನ್ಮೆಂಟ್ ನಿಯಮ ಜಾರಿ ಮತ್ತು ಎಲ್ಲೆಡೆ ಬೂಸ್ಟರ್ ಡೋಸ್ ಹೆಚ್ಚಿಸುವುದಕ್ಕೂ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದೆ.
ಆದಷ್ಟು ಬೇಗ ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಿ: ಸಾರ್ವಜನಿಕರಿಗೆ ಐಎಂಎ ವೈದ್ಯರ ಎಚ್ಚರಿಕೆ
ಸಂಸತ್ತಿನ ಉಭಯ ಸದನಗಳಿಗೆ ಈ ಕುರಿತು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ, ವಿಮಾನ ನಿಲ್ದಾಣಗಳಲ್ಲಿ ಶನಿವಾರದಿಂದ ವಿದೇಶದಿಂದ ಬರುವ ಪ್ರಯಾಣಿಕರಲ್ಲಿ ಶೇ.2ರಷ್ಟು ಪ್ರಯಾಣಿಕರನ್ನು ರ್ಯಾಂಡಮ್ ಟೆಸ್ಟ್‌ಗೆ ಒಳಪಡಿಸಲಾಗುತ್ತಿದೆ. ಜಗತ್ತಿನಲ್ಲಿ ನಿತ್ಯ ಈಗ 5.87 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದರೆ, ಭಾರತದಲ್ಲಿ ಕೇವಲ 153 ಕೇಸ್ ಪತ್ತೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಕೋವಿಡ್ ಹೆಚ್ಚಳದ ಬಗ್ಗೆ ತೀವ್ರ ನಿಗಾ ವಹಿಸಿದೆ. ಅಗತ್ಯವಿದ್ದರೆ ಕಠಿಣ ಕ್ರಮಗಳನ್ನು ಸರ್ಕಾರ ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.