ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ; ಕಳೆದ 24 ಗಂಟೆಯಲ್ಲಿ 8,582 ಕೇಸ್ ಪತ್ತೆ

Published : Jun 12, 2022, 09:34 AM IST
ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ; ಕಳೆದ 24 ಗಂಟೆಯಲ್ಲಿ 8,582 ಕೇಸ್ ಪತ್ತೆ

ಸಾರಾಂಶ

ಜಗತ್ತನ್ನೇ ನಡುಗಿಸಿದ್ದ ಕೊರೋನಾ (Corona) ವೈರಸ್‌ ಕಾಟ ಕಡಿಮೆಯಾಯ್ತು ಅಂತ ಅಂದುಕೊಳ್ಳುವಾಗ್ಲೇ ಮತ್ತೆ ಶುರುವಾಗಿದೆ. ಮಂಕಿಪಾಕ್ಸ್ (Monkeypox), ಟೊಮೇಟೋ ಫ್ಲೂ ನಡುವೆನೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 8,582 ಕೇಸ್ ಪತ್ತೆಯಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ

ಎರಡು ವರ್ಷಗಳ ಕಾಲ ಜನರನ್ನು ಹೈರಾಣಾಗಿಸಿದ್ದ ಮಹಾಮಾರಿ ಕೊರೋನಾ ವೈರಸ್‌ (Corona virus) ಇನ್ನೇನು ಕಡಿಮೆಯಾಯ್ತು ಅಂದುಕೊಳ್ಳುತ್ತಿರುವಾಗಲೇ ಮತ್ತೆ ಅಬ್ಬರಿಸುತ್ತಿದೆ. ದಿನದಿಂದ ದಿನಕ್ಕೆ ದೇಶಾದ್ಯಂತ ಸೋಂಕಿನ ಪ್ರಮಾಣ ಹೆಚ್ಚಾಗುತ್ತಲೇ ಹೋಗುತ್ತಿದೆ.ಕಳೆದ 24 ಗಂಟೆಗಳಲ್ಲಿ 8,582 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 8,582 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲ ಕೊರೋನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 524761 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಇಂದು 8,582 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Central Ministry) ಮಾಹಿತಿ ನೀಡಿದೆ.

ಮಧುಮೇಹ ಇರುವವರಿಗೆ ದೀರ್ಘಾವಧಿಯ ಕೋವಿಡ್‌ ಅಪಾಯ ಹೆಚ್ಚು, ಅಧ್ಯಯನದ ಹೊಸ ವಿಶ್ಲೇಷಣೆ

ಇನ್ನೊಂದೆಡೆ, ರ್ನಾಟಕದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದರಿಂದ ಆತಂಕ ಶುರುವಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ  ಮಾಹಿತಿ ನೀಡಿದದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ನಿನ್ನೆ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ. ಇನ್ನು  352 ಸೇರಿದಂತೆ ಇದುವರೆಗೆ 3912376 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಈಗ 3387 ಸಕ್ರಿಯ ಪ್ರಕರಣಗಳಿವೆ  ಎಂದು ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾಸನ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಚಿತ್ರದುರ್ಗ 02, ದಕ್ಷಿಣ ಕನ್ನಡ 03 ಮತ್ತು ಮೈಸೂರಿನಲ್ಲಿ ನಾಲ್ವರಿಗೆ ನಿನ್ನೆ ಕೊರೋನಾ ಪಾಸಿಟಿವ್ ( Corona Positive ) ದೃಢಪಟ್ಟಿದೆ.

ರಾಜ್ಯದಲ್ಲಿ 11 ಕೋಟಿ ಡೋಸ್‌ ಲಸಿಕೆ: ಮಹತ್ವದ ಮೈಲಿಗಲ್ಲು ದಾಟಿದ ಕೋವಿಡ್‌ ವ್ಯಾಕ್ಸಿನ್‌ ಅಭಿಯಾನ

ರಾಜ್ಯದ ನಿನ್ನೆ ಪಾಸಿಟಿವಿಟಿ ರೇಟ್ ಶೇ. 2.07 ಏರಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,55,871 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,12,376 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ನಿನ್ನೆ ಒಟ್ಟು 48,604 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 27,123 ಸ್ಯಾಂಪಲ್ (ಆರ್‌ಟಿಪಿಸಿಆರ್ 20,659 + 6,464 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆಯು ಶನಿವಾರ 11 ಕೋಟಿ ಡೋಸ್‌ ಗಡಿ ದಾಟಿದೆ. ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕೊರೋನಾ ಲಸಿಕೆ ಅಭಿಯಾನದಲ್ಲಿ ರಾಜ್ಯ ಪ್ರಮುಖ ಮೈಲಿಗಲ್ಲು ಮುಟ್ಟಿದೆ. ಈವರೆಗೂ 5.45 ಕೋಟಿ ಮೊದಲ ಡೋಸ್‌, 5.28 ಕೋಟಿ ಎರಡನೇ ಡೋಸ್‌, 26 ಲಕ್ಷ ಮುನ್ನೆಚ್ಚರಿಕಾ ಡೋಸ್‌ ಸೇರಿ ಒಟ್ಟಾರೆ 11 ಕೋಟಿ ಡೋಸ್‌ ಲಸಿಕೆ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Heart Problemಗೆ ಎಲ್ಲರೂ ಹೇಳೋ ಕಾರಣವಲ್ಲವೇ ಅಲ್ಲ, ಪೌಷ್ಟಿಕ ತಜ್ಞರ ಮಹಾವಂಚನೆ ಬಯಲಿಗೆ
ಮಹಿಳೆಯರೇ ಎಚ್ಚರ.. ದೇಹ ತೋರಿಸುವ ಈ ಲಕ್ಷಣಗಳು ಕ್ಯಾನ್ಸರ್‌ನ ಆರಂಭಿಕ ಸೂಚನೆಗಳು!