
ಬೆಂಗಳೂರು (ಡಿ.6) : ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ರಾಷ್ಟ್ರೋತ್ಥಾನ ಪರಿಷತ್ ರಾಜರಾಜೇಶ್ವರಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಸ್ಮಾರಕರಾಷ್ಟ್ರೋತ್ಥಾನಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸೋಮವಾರ ಲೋಕಾರ್ಪಣೆಗೊಂಡಿತು.
ಆಧುನಿಕ ವೈದ್ಯಕೀಯ ಪದ್ಧತಿ, ಆಯುರ್ವೇದ, ಹೋಮಿಯೋಪಥಿ, ಯೋಗ, ನ್ಯಾಚುರೋಪಥಿ ಮೊದಲಾದ ಚಿಕಿತ್ಸಾ ಸೌಲಭ್ಯವನ್ನು ಆಸ್ಪತ್ರೆ ಹೊಂದಿದೆ. ಆಸ್ಪತ್ರೆಯಲ್ಲಿ 19 ಸಾಮಾನ್ಯ ವಾರ್ಡ್‌ಗಳು, 72 ಸೆಮಿ ಪ್ರೈವೇಟ್ ವಾರ್ಡ್‌ಗಳು, 17 ಪ್ರೈವೇಟ್ ವಾರ್ಡ್‌ಗಳು ಹಾಗೂ 11 ತುರ್ತು ಚಿಕಿತ್ಸಾ ವಾರ್ಡ್‌ಗಳು ಇವೆ. ಒಟ್ಟು 160 ಹಾಸಿಗೆಗಳಿದ್ದು, ಸಮಗ್ರ ಆಧುನಿಕ ವೈದ್ಯಕೀಯ ಮೂಲ ಸೌಕರ್ಯಗಳನ್ನು ಆಸ್ಪತ್ರೆ ಹೊಂದಿದೆ.
ಆರ್‌ಆರ್ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ, ಮುನಿರತ್ನಗೆ ಶಹಭ್ಭಾಸ್‌ಗಿರಿ..!
ವೇದಿಕೆ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿ, ‘ವೈ.ಚ.ಜಯದೇವ ಅವರು ಸಂಘದ ಸಾಮಾನ್ಯ ಕಾರ್ಯಕರ್ತರಾಗಿದ್ದು ಖಾಸಗಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸಂಘದ ಸೂಚನೆಯಿಂದ ರಾಷ್ಟೊ್ರೕತ್ಥಾನ ಜವಾಬ್ದಾರಿ ವಹಿಸಿಕೊಂಡರು. ತಮ್ಮ ಅಧ್ಯಯನ ಅವಲೋಕನದೊಂದಿಗೆ ಸಂಸ್ಥೆಗೆ ಶಿಸ್ತಿನ ಚೌಕಟ್ಟನ್ನು ಹಾಕಿಕೊಟ್ಟರು. ಗುಣಮಟ್ಟವನ್ನು ಕಾಪಾಡಿಕೊಂಡು ಧ್ಯೇಯವನ್ನು ಮುಂದಿಟ್ಟುಕೊಂಡು ಸಂಸ್ಥೆ ಕಟ್ಟಿದರು. ತಮ್ಮ ಶಿಸ್ತಿನ ಜೀವನದ ಮೂಲಕ ತನ್ನನ್ನು ತಾನೇ ಕಡೆದುಕೊಂಡು ಅನೇಕರ ಜೀವನಕ್ಕೆ ಶಿಲ್ಪಿಯಾದರು. ಅಂತಹವರ ಹೆಸರಿನಲ್ಲಿ ಆಸ್ಪತ್ರೆ ನಿರ್ಮಾಣವಾಗಿರುವುದು ಸಂತಸ ವಿಚಾರ’ ಎಂದರು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ತಮ್ಮ ಇಡೀ ಬದುಕನ್ನು ರಾಷ್ಟ್ರೀಯ ಸೇವೆಗಾಗಿ ಮುಡಿಪಾಗಿಟ್ಟಜಯದೇವ ಅವರು ಇಂದು ಇದ್ದಿದ್ದರೆ ಈ ಆಸ್ಪತ್ರೆಗೆ ತಮ್ಮ ಹೆಸರು ಬೇಡ ರಾಷ್ಟ್ರೋತ್ಥಾನ ಆಸ್ಪತ್ರೆ ಎಂದಿರಲಿ ಎನ್ನುತ್ತಿದ್ದರು. ಅಂತಹವರ ಹೆಸರಿನಲ್ಲಿ ಆರಂಭವಾಗಿರುವ ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯರು ತೆರೆದ ಮನಸ್ಸಿನಿಂದ ಚಿಕಿತ್ಸೆ ನೀಡುವಂತಾಗಲಿ ಎಂದು ಹೇಳಿದರು.
Hanuma Jayanthi: ನಗರದಲ್ಲಿ ಭಕ್ತಿಭಾವದಿಂದ ಹನುಮ ಜಯಂತಿ...
ಇಸ್ಫೋಸಿಸ್ ಪೌಂಡೇಷನ್ ಸಂಸ್ಥಾಪಕಿ ಸುಧಾಮೂರ್ತಿ ಮಾತನಾಡಿ, ಆಯುಷ್ ಮತ್ತು ಆಧುನಿಕ ಚಿಕಿತ್ಸಾ ಸೌಲಭ್ಯದೊಂದಿಗೆ ನಿರ್ಮಿಸಿರುವ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆಯನ್ನು ನೋಡಿ ಬಹಳ ಸಂತೋಷವಾಯಿತು. ಮಿತಭಾಷಿಯಾಗಿದ್ದ ವೈ.ಚ.ಜಯದೇವ ಅವರು ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದರು. ಅವರು ಇಂದು ನಮ್ಮ ಜೊತೆ ಇಲ್ಲವಾದರೂ, ಅವರು ಹಾಕಿಕೊಟ್ಟಿರುವ ಮೇಲ್ಪಂಕ್ತಿಯೊಂದಿಗೆ ನಾವು ಮುಂದೆ ನಡೆಯುಬೇಕು ಎಂದು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾರಾಯಣ ಹೆಲ್ತ್ ಸ್ಥಾಪಕ ಡಾ ದೇವಿಪ್ರಕಾಶ್ ಶೆಟ್ಟಿಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ, ಆಸ್ಪತ್ರೆಯ ಆಡಳಿತ ಮಂಡಳಿ ಅಧ್ಯಕ್ಷ ಸುಧೀರ್ ಪೈ ಉಪಸ್ಥಿತರಿದ್ದರು.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.