ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ 153 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 994ಕ್ಕೆ ಏರಿಕೆಯಾಗಿದೆ.
ಬೆಂಗಳೂರು (ಜ.12) : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ 153 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 994ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 50 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 163 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
undefined
ಸಸ್ಯಾಹಾರಿಗಳಿಗೆ ಕೋವಿಡ್ ಬರುವ ಸಾಧ್ಯತೆ ಶೇ.39ರಷ್ಟು ಕಡಿಮೆ; ಹೊಸ ಅಧ್ಯಯನ
ಇಂದು ಕೋವಿಡ್ ನಿಂದ 162 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 6396 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.54 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ದಿನೇದಿನೆ ಹೆಚ್ಚಳವಾಗ್ತಿದೆ ಕೊರೊನಾ! ಇಂದು 252 ಮಂದಿಗೆ ಪಾಸಿಟಿವ್, ಇಬ್ಬರು ಸಾವು!
ಸೋಂಕಿತರಲ್ಲಿ 934 ಮಂದಿ ಮನೆ ಆರೈಕೆಗೆ ಒಳಗಾದರೆ, 41 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 14 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.