
ಬೆಂಗಳೂರು(ಏ.08): ಮಿಂಟೋ ಆಸ್ಪತ್ರೆ ಆಯೋಜಿಸಿದ್ದ ನೇತ್ರದಾನ ಶಿಬಿರದಲ್ಲಿ ನೇತ್ರದಾನಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ಇದೇ ವೇಳೆ ಮಾತನಾಡಿದ ಸಚಿವ ಡಾ. ಕೆ.ಸುಧಾಕರ್ ಅವರು, ನೇತ್ರದಾನ ಮಾಡುವ ಸಂಕಲ್ಪ ಕೈಗೊಂಡಿರುವುದು ಸಾರ್ಥಕ ಭಾವ ಮೂಡಿಸಿದೆ. ನಮ್ಮ ಕಣ್ಣು ನಮ್ಮ ಮರಣದ ನಂತರ ಮತ್ತೊಬ್ಬರಿಗೆ ದಾರಿದೀಪವಾಗಲಿದೆ. ಪ್ರತಿಯೊಬ್ಬರು ನೇತ್ರದಾನ ಮಾಡುವ ಸಂಕಲ್ಪ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನಾನೂ ಕೂಡ ನೇತ್ರ ದಾನ ಮಾಡುತ್ತೇನೆ: ಶಿವರಾಜ್ ಕುಮಾರ್
ಈ ನೇತ್ರದಾನ ಶಿಬಿರದ ವೇಳೆ ಸುಮಾರು 200 ಮಂದಿ ನೇತ್ರದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಿಂಟೋ ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.