ಉತ್ತರ ಕನ್ನಡಕ್ಕೆ ಸುಸಜ್ಜಿತ ಆಸ್ಪತ್ರೆ ಮಂಜೂರಾತಿಗೆ ಆಗ್ರಹಿಸಿ 412 ಸಾರ್ವಜನಿಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಿದ್ದಾರೆ.
ಕಾರವಾರ (ಆ.2) : ಉತ್ತರ ಕನ್ನಡಕ್ಕೆ ಸುಸಜ್ಜಿತ ಆಸ್ಪತ್ರೆ ಮಂಜೂರಾತಿಗೆ ಆಗ್ರಹಿಸಿ 412 ಸಾರ್ವಜನಿಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಿದ್ದಾರೆ. ನಗರದ ಎಂ.ಜಿ. ರಸ್ತೆಯಲ್ಲಿನ ನಗರಸಭೆ ಉದ್ಯಾನವನದ ಬಳಿ ಸೊಮವಾರ ವಿದ್ಯಾರ್ಥಿ ಒಕ್ಕೂಟ ಹಾಗೂ ಸಮಾನ ಮನಸ್ಕರಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಿಂದ ಪತ್ರ ಬರೆಯುವ ಚಳವಳಿ ನಡೆಯಿತು. ಹೋರಾಟಕ್ಕೆ ಹಾಸಿಗೆ ಮೇಲಿದ್ದ 85 ವರ್ಷದ ವೃದ್ಧೆ ಅಜ್ಮತ್ ಹಾಗೂ 8 ತಿಂಗಳ ಗರ್ಭಿಣಿ ಪ್ರಶಾಂತಿ ನಾಯ್ಕ ಎನ್ನುವವರು ಸ್ವಯಂ ಪ್ರೇರಿತವಾಗಿ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಚಳವಳಿಗೆ ಚಾಲನೆ ನೀಡಿದರು.
ಉತ್ತರಕನ್ನಡ: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕಾಗಿ ಆರೋಗ್ಯ ಇಲಾಖೆಗೆ ಡಿಸಿ ಪ್ರಸ್ತಾವ
ಬಳಿಕ ಹೋರಾಟದಲ್ಲಿ ಭಾಗವಹಿಸಿದ್ದ ನಗರದ ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು, ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ 412 ಜನರು ಸ್ವಯಂ ಪ್ರೇರಿತರಾಗಿ ತಮ್ಮ ರಕ್ತದಿಂದ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಮಂಜೂರು ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಸಹಿ ಮಾಡಿ ಆಗ್ರಹಿಸಿದರು.
ಕಾರ್ಯಕ್ರಮ ಸಂಯೋಜಕ ರಾಘು ನಾಯ್ಕ(Raghu Naik) ಮಾತನಾಡಿ, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ(Hospital) ಇಲ್ಲದ ಕಾರಣ ಅದೆಷ್ಟೋ ಸಂದರ್ಭಗಳಲ್ಲಿ ದೂರದ ಮಂಗಳೂರು(Mangaluru), ಗೋವಾ(Goa), ಹುಬ್ಬಳ್ಳಿ(hubli), ಶಿವಮೊ(Shivamogga)ಗ್ಗ ಆಸ್ಪತ್ರೆಗಳಿಗೆ ರೋಗಿಗಳನ್ನು ಕೊಂಡೊಯ್ಯುವಾಗ ದಾರಿ ಮಧ್ಯೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಲವಾರು ವರ್ಷದಿಂದ ಆಸ್ಪತ್ರೆಗಾಗಿ ಪ್ರಯತ್ನ ನಡೆದಿದ್ದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಪ್ರಧಾನಮಂತ್ರಿಗೆ ರಕ್ತದಿಂದ ಪತ್ರ ಬರೆದು ಸುಸಜ್ಜಿತ ಅಸ್ಪತ್ರೆಗಾಗಿ ಆಗ್ರಹಿಸುತ್ತಿದ್ದೇವೆ ಎಂದರು.
ಕಳೆದ ಕೆಲ ವರ್ಷಗಳ ಹಿಂದೆ ಶಸ್ತ್ರ ಚಿಕಿತ್ಸೆಗೊಳಗಾಗಬೇಕಿದ್ದ ನನಗೆ ಇಲ್ಲಿ ವ್ಯವಸ್ಥೆಯಿಲ್ಲ ಎಂದು ಮಂಗಳೂರಿಗೆ ಕಳುಹಿಸಿದ್ದರು. ಹೀಗೆ ಕಳುಹಿಸುವಾಗ ಅದೇಷ್ಟೊಜೀವಗಳು ದಾರಿ ಮೇಲೆ ಪ್ರಾಣ ಬಿಡುತ್ತಿವೆ. ಇಂತಹ ಪರಿಸ್ಥಿತಿ ಕೊನೆಗೊಳ್ಳಲಿ ಎಂಬ ಉದ್ದೇಶದಿಂದ ತುಂಬು ಗರ್ಭಿಣಿಯಾದರೂ ಬಂದು ರಕ್ತದಲ್ಲಿ ಪತ್ರ ಬರೆದಿದ್ದೇನೆ. ಕೂಡಲೇ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು.
ಪ್ರಶಾಂತಿ ನಾಯ್ಕ, ಚಳಿವಳಿಯಲ್ಲಿ ಭಾಗವಹಿಸಿ ಗರ್ಭಿಣಿ
ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ಹಿಂದಿನಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಈ ಬಾರಿ ಆಸ್ಪತ್ರೆ ನಿರ್ಮಾಣ ಆಗುವವರೆಗೆ ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈಬಾರಿ ಆಸ್ಪತ್ರೆ ಮಂಜೂರಾತಿಗೆ ಆಗ್ರಹಿಸಿ 412 ಸಾರ್ವಜನಿಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ಮೋದಿಗೆ ಕಳುಹಿಸಿದ್ದಾರೆ. ಬೇಡಿಕೆ ಈಡೇರಿಸದಿದ್ದಲ್ಲಿ ಉಗ್ರ ಹೋರಾಟಕ್ಕೂ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ. ಹೋರಾಟದಲ್ಲಿ ಭಾಗವಹಿಸಿದ್ದ ನಗರದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿ 412 ಮಂದಿ ಸ್ವಯಂ ಪ್ರೇರಿತರಾಗಿ ತಮ್ಮ ರಕ್ತದಿಂದ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಮಂಜೂರು ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದು ಸಹಿ ಮಾಡಿ ಆಗ್ರಹಿಸಿದೆ.