ದೇಶದ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ; ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

By Kannadaprabha News  |  First Published Sep 18, 2022, 7:56 AM IST

ದೇಶದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆ, 18 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆ ಹೊಂದಿದ್ದಾರೆ. ರಾಜ್ಯದಲ್ಲಿ 2.5 ಲಕ್ಷ ಮಕ್ಕಳು ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.


ಹುಬ್ಬಳ್ಳಿ (ಸೆ.18) : ದೇಶದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆ, 18 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆ ಹೊಂದಿದ್ದಾರೆ. ರಾಜ್ಯದಲ್ಲಿ 2.5 ಲಕ್ಷ ಮಕ್ಕಳು ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಇಲ್ಲಿನ ಆದರ್ಶ ನಗರದ ಕನ್ನಡ ಭವನದಲ್ಲಿ ಶನಿವಾರ ತಾಲೂಕು ಆಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಪ್ರಧಾನ ಮಂತ್ರಿ ಪೋಷಣ ಅಭಿಯಾನ, ಸಂಸದರ ಆರೋಗ್ಯವಂತ ಮಗುವಿನ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಧಾರವಾಡ: ಶೀಘ್ರದಲ್ಲೇ  IIT Campus ಉದ್ಘಾಟನೆ - ಪ್ರಲ್ಹಾದ್ ಜೋಶಿ

Tap to resize

Latest Videos

ದೇಶದ 15 ಕೋಟಿ ಮಕ್ಕಳು ಕಡಿಮೆ ಎತ್ತರ ಹೊಂದಿದ್ದಾರೆ. 2014ರಿಂದ ಪೋಷಣ ಅಭಿಯಾನ ಆರಂಭಿಸಲಾಗಿದೆ. ಅಪೌಷ್ಟಿಕತೆಯಿಂದ ಮಕ್ಕಳಲ್ಲಿ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮಕ್ಕಳ ಪೊಷಣೆಗಾಗಿ . 26 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದರು. ಆರೋಗ್ಯವಂತ ಸಮಾಜದಲ್ಲಿ ಆರೋಗ್ಯವಂತ ಮಕ್ಕಳಿರಬೇಕು. ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳಾಗಬೇಕು. ಸಂಸದರ ಆರೋಗ್ಯವಂತ ಮಗುವಿನ ಸ್ಪರ್ಧಾ ಕಾರ್ಯಕ್ರಮದಂತೆ ವಿಧಾನ ಪರಿಷತ್‌ ಸದಸ್ಯರ ಕ್ಷೇತ್ರಗಳಲ್ಲೂ ಕಾರ್ಯಕ್ರಮ ಆಯೋಜಿಸಲಾಗುವುದು. ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮಾತನಾಡಿ, ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಮೇಕ್‌ ಇನ್‌ ಇಂಡಿಯಾ ಮೂಲಕ ಸ್ವದೇಶದಲ್ಲಿ ವಸ್ತುಗಳು ಉತ್ಪಾದನೆಯಾಗುತ್ತಿವೆ. ದೇಶದ ಆರ್ಥಿಕತೆ ಬದಲಾಗುತ್ತಿದೆ. ಅಲ್ಲದೇ ಬಲಿಷ್ಠ ದೇಶವಾಗಿ ಭಾರತ ಹೊರಹೊಮ್ಮುತ್ತಿದೆ ಎಂದರು.

ದೇಶಕ್ಕೆ 0.5ರಷ್ಟಿದ್ದ ವಿದ್ಯುತ್‌ ಕೊರತೆ ನಿವಾರಣೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಇದೇ ಸಂದರ್ಭ ಗರ್ಭಿಣಿಯರಿಗೆ ಸೀಮಂತ ಮತ್ತು 6 ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ ಹಾಗೂ ಸಿರಿಧಾನ್ಯಗಳಿಂದ ತಯಾರಿಸಿದ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ವಿಪ ಸದಸ್ಯ ಬಸವರಾಜ್‌ ಹೊರಟ್ಟಿ, ಜಿಪಂ ಸಿಇಒ ಡಾ. ಸುರೇಶ ಇಟ್ನಾಳ, ಉಪಮೇಯರ್‌ ಉಮಾ ಮುಕುಂದ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಸೀಮಾ ಮೊಗಲಿಶೆಟ್ಟರ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಎಂ. ಸೇರಿ ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಚ್‌.ಎಚ್‌. ಕುಕನೂರ ಪ್ರಾಸ್ತಾವಿಕ ಮಾತನಾಡಿದರು.

click me!