ಸಾರ್ವಜನಿಕ ಆಸ್ಪತ್ರೆಯ ಹೈಟೆಕ್ ಮಾದರಿಯ ಸೌಲಭ್ಯಗಳು ಮತ್ತು ತಜ್ಞ ವೈದ್ಯರ ಮತ್ತು ಸಿಬ್ಬಂದಿ ಉತ್ತಮ ಸೇವೆಗಳಿಂದ ಇತ್ತೀಚಿಗೆ ನಡೆದ ಕೇಂದ್ರ ಸರ್ಕಾರದ ಲಕ್ಷ್ಯ ಕಾರ್ಯಕ್ರಮದ ರಾಷ್ಟ್ರೀಯ ಪ್ರಶಂಸನಾ ಪ್ರಸಸ್ತಿ ದೊರಕಿದೆ.
ಅಣ್ಣಾಸಾಬ ತೆಲಸಂಗ
ಅಥಣಿ (ಜೂ.18) ಸಾರ್ವಜನಿಕ ಆಸ್ಪತ್ರೆಯ ಹೈಟೆಕ್ ಮಾದರಿಯ ಸೌಲಭ್ಯಗಳು ಮತ್ತು ತಜ್ಞ ವೈದ್ಯರ ಮತ್ತು ಸಿಬ್ಬಂದಿ ಉತ್ತಮ ಸೇವೆಗಳಿಂದ ಇತ್ತೀಚಿಗೆ ನಡೆದ ಕೇಂದ್ರ ಸರ್ಕಾರದ ಲಕ್ಷ್ಯ ಕಾರ್ಯಕ್ರಮದ ರಾಷ್ಟ್ರೀಯ ಪ್ರಶಂಸನಾ ಪ್ರಸಸ್ತಿ ದೊರಕಿದೆ.
undefined
ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಮುರುNೕಶ ಮತ್ತು ತೃಪ್ತಿ ನಂದಾ ನೇತೃತ್ವದ ವೈದ್ಯರ ತಂಡ ಕಳೆದ ಮೇ 22ರಂದು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಇಲ್ಲಿನ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಒದಗಿಸುತ್ತಿರುವ ಆರೋಗ್ಯ ಸೇವೆಗಳ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.
NCDFY: ಕೆಎಂಎಫ್‌ಗೆ ಸಾಧನೆಗೆ ರಾಷ್ಟ್ರೀಯ ಪ್ರಶಸ್ತಿ ಗರಿ
ಬಡವರ ಬಾಳಿನ ಬೆಳಕಾಗಿರುವ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ 100 ಹಾಸಿಗೆ ಸೌಲಭ್ಯ ಹೊಂದಿದೆ. ಇಲ್ಲಿನ ಹೆರಿಗೆ ವಿಭಾಗ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಮೂಲಭೂತ ಸೌಲಭ್ಯಗಳ ಜೊತೆಗೆ ವ್ಯವಸ್ಥಿತವಾದ ಕೊಠಡಿಗಳ ವ್ಯವಸ್ಥೆ ಹೊಂದಿದೆ. ಹೆರಿಗೆ ವೇಳೆ ಗರ್ಭಿಣಿಯರು ಆಸ್ಪತ್ರೆಗೆ ಬರಲು ಆ್ಯಂಬುಲೆನ್ಸ್ ವಾಹನ ವ್ಯವಸ್ಥೆ, ಹೆರಿಗೆ ಕೋಣೆಯಲ್ಲಿ ಸ್ವಚ್ಛತೆ ಜೊತೆಗೆ ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ, 24 ಗಂಟೆ ವಿದ್ಯುತ್ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಬೇಕಾಗುವ ಔಷಧಗಳು, ರಕ್ತದ ವ್ಯವಸ್ಥೆ ಮತ್ತು ಇನ್ನಿತರ ವಸ್ತುಗಳ ಅಚ್ಚುಕಟ್ಟಾಗಿ ಮಾಡಲಾಗಿದ್ದು, ಇದರ ಜೊತೆಗೆ ಹೆರಿಗೆಯಾದ ನಂತರ ಬಾಣಂತಿಯರನ್ನು ಪ್ರತ್ಯೇಕ ವಾರ್ಡ್‌ಗೆ ಶಿಫ್‌್ಟಮಾಡಿ ತಾಯಿ ಮತ್ತು ಮಗುವಿನ ಆರೈಕೆಗೆ ಸಂಬಂಧಿಸಿದಂತೆ ಆರೋಗ್ಯ ಸೇವೆಯ ಜೊತೆಗೆ ಪೌಷ್ಟಿಕ ಆಹಾರ ಕೂಡ ನೀಡಲಾಗುತ್ತಿದೆ. ಆದ್ದರಿಂದ ಕೇಂದ್ರ ವೀಕ್ಷಣಾ ತಂಡದ ವೈದ್ಯರು ಹೆರಿಗೆ ವಿಭಾಗದಲ್ಲಿ ಶೇ.85 ರಷ್ಟುಅಂಕಗಳನ್ನು ನೀಡಿದ್ದಾರೆ.
ಅದೇ ರೀತಿ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿ ಹವಾ ನಿಯಂತ್ರಿತ ವ್ಯವಸ್ಥೆ ಕಲ್ಪಿಸಲಾಗಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆ ಮಾಡುವ ವ್ಯವಸ್ಥೆ ಇದೆ. ಇಲ್ಲಿ ತಜ್ಞವೈದ್ಯರು, ಚಿಕಿತ್ಸೆಗೆ ಬೇಕಾಗುವ ಸಲಕರಣೆಗಳು ಹಾಗೂ ಹೊಸ ಮಾದರಿಯ ಯಂತ್ರಗಳು, ಲ್ಯಾಬ… ವ್ಯವಸ್ಥೆ, ಎಕ್ಸ್ ರೇ ವ್ಯವಸ್ಥೆ, 24 ಗಂಟೆ ವಿದ್ಯುತ್ ವ್ಯವಸ್ಥೆ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಬೇಕಾಗುವ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ನಂತರ ವಿಶ್ರಾಂತಿ ಕೊಠಡಿಗಳಲ್ಲಿ ಕೂಡ ಸಮಯಕ್ಕೆ ಅನುಗುಣವಾಗಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಕೊಠಡಿಗೆ ಶೇ.78 ರಷ್ಟುಅಂಕಗಳನ್ನು ಪಡೆದು ಗುಣಾತ್ಮಕ ಸುಧಾರಣೆಗಾಗಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಜಿಲ್ಲಾ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮಾಜಿ ಡಿಸಿಎಂ ಹಾಗೂ ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆ ಸೇವಾ ಗುಣಮಟ್ಟ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ಅಥಣಿ ಸಾರ್ವಜನಿಕ ಆಸ್ಪತ್ರೆ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ರಾಷ್ಟ್ರೀಯ ಪ್ರಶಂಸನಾ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತೋಷದ ವಿಚಾರ. ಬಡ ರೋಗಿಗಳಿಗೆ ಉತ್ತಮ ಸೇವೆ ಒದಗಿಸುತ್ತಿರುವ ವೈದ್ಯರನ್ನು ಮತ್ತು ಸಿಬ್ಬಂದಿಯನ್ನು ತಾಲೂಕಿನ ಜನತೆಯ ಪರವಾಗಿ ಅಭಿನಂದಿಸುವೆ. ತಾಲೂಕಿನ ಬಡ ರೋಗಿಗಳಿಗೆ ಆರೋಗ್ಯ ಸೇವೆಗಳು ಸುಲಭವಾಗಿ ದೊರಕಬೇಕು. ಈ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು, ಆಕ್ಸಿಜನ್ ಘಟಕಗಳನ್ನು ಮತ್ತು ಆ್ಯಂಬುಲೆನ್ಸ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸುವಲ್ಲಿ ನನ್ನ ಅಳಿಲು ಸೇವೆ ಮಾಡಿದ್ದೇನೆ. ಮುಂದಿನ ದಿನಮಾನಗಳಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪನೆ, ಇನ್ನಷ್ಟುಆರೋಗ್ಯ ಸೇವೆಗಳು ಬಡಜನತೆಗೆ ಸುಲಭವಾಗಿ ಸಿಗುವ ನಿಟ್ಟಿನಲ್ಲಿ ಸುಧಾರಣೆ ಕೈಕೊಳ್ಳಲಾಗುವುದು.
ಲಕ್ಷ್ಮಣ ಸವದಿ, ಮಾಜಿ ಡಿಸಿಎಂ, ಶಾಸಕರು ಅಥಣಿ
ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಎಲ್ಲ ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು 250ಕ್ಕೂ ಹೆರಿಗೆಗಳು ಆಗುತ್ತವೆ. ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದಂತೆ 200ಕ್ಕೂ ಅಧಿಕ ಶಸ್ತ್ರಚಿಕಿತ್ಸೆಗಳು ನಡೆಯುತ್ತವೆ. ಇತ್ತೀಚಿಗೆ ಕೇಂದ್ರ ಸರ್ಕಾರದ ಲಕ್ಷ್ಯ ಕಾರ್ಯಕ್ರಮದಡಿ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಹೆರಿಗೆ ಕೊಠಡಿ ಮತ್ತು ಶಸ್ತ್ರಚಿಕಿತ್ಸೆಯ ಕೊಠಡಿಗಳ ಗುಣಾತ್ಮಕ ಸೇವೆಯನ್ನ ಗುರುತಿಸಿ ನಮ್ಮ ಆಸ್ಪತ್ರೆಯನ್ನು ರಾಷ್ಟ್ರೀಯ ಪ್ರಸಂಶನಾ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನಮ್ಮೆಲ್ಲರಿಗೆ ಖುಷಿ ತಂದಿದೆ. ಆಸ್ಪತ್ರೆಯ ಎಲ್ಲ ತಜ್ಞ ವೈದ್ಯರ ಮತ್ತು ಸಿಬ್ಬಂದಿಯರ ಸಹಕಾರ ಮತ್ತು ಉತ್ತಮ ಸೇವೆಗೆ ಈ ಪ್ರಶಸ್ತಿ ಸಲ್ಲುತ್ತದೆ.
ಡಾ.ಬಸಗೌಡ ಕಾಗೆ, ತಾಲೂಕು ವೈದ್ಯಾಧಿಕಾರಿಗಳು ಅಥಣಿ.