ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿ ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ ನವಜಾತ ಶಿಶುಗಳ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ನೂತನ 4 ನವಜಾತ ಆಂಬ್ಯುಲೆನ್ಸ್ ಸೇವೆಗಳಿಗೆ ಚಾಲನೆ ನೀಡಿದರು.
ಬೆಂಗಳೂರು (ಫೆ.14): ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿ ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ ನವಜಾತ ಶಿಶುಗಳ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ನೂತನ 4 ನವಜಾತ ಆಂಬ್ಯುಲೆನ್ಸ್ ಸೇವೆಗಳಿಗೆ ಚಾಲನೆ ನೀಡಿದರು.
ಅವಧಿಪೂರ್ವವಾಗಿ ಜನಿಸಿದ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಈ ಅಂಬ್ಯುಲೆನ್ಸ್ ಗಳು ಸಹಕಾರಿಯಾಗಲಿವೆ. ಸುಧಾರಿತ ಜೀವ ರಕ್ಷಕ ಸೌಲಭ್ಯಗಳನ್ನು ಒಳಗೊಂಡ ವಾಹನದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ದೂರದ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆ ಇರುವ ಮತ್ತು ವಿಶೇಷ ಆರೈಕೆಯ ಅಗತ್ಯವಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಆಸ್ಪತ್ರೆಗಳಿಗೆ ಸಾಗಿಸುವಲ್ಲಿ ಅಂಬ್ಯುಲೆನ್ಸ್ ಗಳ ಸೇವೆ ಮುಖ್ಯವಾಗಿದೆ
ಆಶಾ ಕಾರ್ಯಕರ್ತರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ₹7,000 ಗೌರವ ಧನ ಭರವಸೆ ನೀಡಿದ ದಿನೇಶ್ ಗುಂಡೂರಾವ್
ನೂತನ ನವಜಾತ ಶಿಶು ಆಂಬ್ಯುಲೆನ್ಸ್‌ಗಳು ಸೇವೆಗೆ ಲಭ್ಯವಾಗುವುದರ ಮೂಲಕ ಆರೈಕೆಯಲ್ಲಿನ ಅಂತರವು ಕಡಿಮೆಯಾಗಲಿದೆ. ವೆಂಟಿಲೇಟರ್, ಮೇಲ್ವಿಚಾರಣೆ ವ್ಯವಸ್ಥೆಗಳು ಸೇರಿದಂತೆ ಸುಧಾರಿತ ಜೀವ ರಕ್ಷಕ ಸಾಧನಗಳನ್ನು ಈ ಆಂಬ್ಯುಲೆನ್ಸ್ ಗಳು ಒಳಗೊಂಡಿವೆ. ಗಂಭೀರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ನವಜಾತ ಶಿಶುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆರೈಕೆ ಮಾಡಲು ಪರಿಣತಿ ಹೊಂದಿರುವ ನರ್ಸ್‌ಗಳು ಲಭ್ಯವಿರುತ್ತಾರೆ. ರಾಜ್ಯದ ನಾಲ್ಕು ವಿಭಾಗಗಳ ಪ್ರಮುಖ ಆಸ್ಪತ್ರೆಗಳಿಗೆ ನವಜಾತಾ ಅಂಬ್ಯುಲೆನ್ಸ್ ಅನ್ನ ವಿತರಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ನವಜಾತಾ ಅಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.