Covid New Variant: ಭಾರತದಲ್ಲಿ ಹೊಸ ಕೋವಿಡ್ ರೂಪಾಂತರ XBB 1.16: 76 ಮಾದರಿಗಳು ಪತ್ತೆ

By Kannadaprabha NewsFirst Published Mar 18, 2023, 9:23 PM IST
Highlights

ದೇಶದಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೆ, ಹೊಸ ರೂಪಾಂತರ XBB ​​1.16 ನ 76 ಮಾದರಿಗಳು ಪತ್ತೆಯಾಗಿವೆ.  ಕರ್ನಾಟಕದಾದ್ಯಂತ 30, ಮಹಾರಾಷ್ಟ್ರ 29, ಪುದುಚೇರಿ 7, ದೆಹಲಿ 5, ತೆಲಂಗಾಣ 2 ಗುಜರಾತ್, ಹಿಮಾಚಾಲ ಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಒಂದೊಂದು ಮಾದರಿಗಳು ಕಂಡುಬಂದಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ INSACOG ಡೇಟಾ ಹೇಳಿದೆ.

ನವದೆಹಲಿ (ಮಾ.18): ದೇಶದಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೆ, ಹೊಸ ರೂಪಾಂತರ XBB ​​1.16 ನ 76 ಮಾದರಿಗಳು ಪತ್ತೆಯಾಗಿವೆ.  ಕರ್ನಾಟಕದಾದ್ಯಂತ 30, ಮಹಾರಾಷ್ಟ್ರ 29, ಪುದುಚೇರಿ 7, ದೆಹಲಿ 5, ತೆಲಂಗಾಣ 2 ಗುಜರಾತ್, ಹಿಮಾಚಾಲ ಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಒಂದೊಂದು ಮಾದರಿಗಳು ಕಂಡುಬಂದಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ INSACOG ಡೇಟಾ ಹೇಳಿದೆ.

ಜನವರಿಯಲ್ಲಿ ಮೊದಲ ಬಾರಿಗೆ ಎರಡು ಮಾದರಿಗಳ ಪರೀಕ್ಷೆ ನಡೆಸಿದಾಗ  XBB 1.16 ರೂಪಾಂತರ ದೃಢಪಟ್ಟಿತ್ತು. ಫೆಬ್ರವರಿಯಲ್ಲಿ ಒಟ್ಟು 59 ಮಾದರಿಗಳು ಪತ್ತೆಯಾದರೆ, ಮಾರ್ಚ್ ನಲ್ಲಿ ಇಲ್ಲಿಯವರೆಗೂ  ಇದೀಗ 15 ಮಾದರಿಗಳು ಪತ್ತೆಯಾಗಿವೆ ಎಂದು INSACOG ಹೇಳಿದೆ. 

ತ್ವರಿತಗತಿಯಲ್ಲಿ ಹರಡುತ್ತಿದೆ H3N2 ವೈರಸ್, ಪುದುಚೇರಿಯ ಎಲ್ಲಾ ಶಾಲೆಗಳು ಬಂದ್!

ಈ ರೂಪಾಂತರದ ಕಾರಣದಿಂದ ಇತ್ತೀಚಿಗೆ ಕೋವಿಡ್-19(Covid-19) ಪ್ರಕರಣಗಳು ಹೆಚ್ಚಿವೆ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. H3N2 ಕಾರಣ ಇನ್ಫ್ಲುಯೆನ್ಸ ಪ್ರಕರಣಗಳು ಹೆಚ್ಚಾದರೆ, XBB 1.16 ರೂಪಾಂತರದ ಪ್ರಭಾವದಿಂದ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಷ್ಟ್ರೀಯ ಕೋವಿಡ್ ಕಾರ್ಯಪಡೆಯ ನೇತೃತ್ವ ವಹಿಸಿದ್ದ ಮಾಜಿ ಎಐಐಎಂಎಸ್ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದರಿಂದ ಈ ಸೋಂಕು ಹರಡುವಿಕೆಯನ್ನು ತಡೆಯಬಹುದಾಗಿದೆ. ಆದ್ದರಿಂದ ಸದ್ಯಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. 

ಅಮೆರಿಕ, ಬ್ರೂನಿ, ಸಿಂಗಾಪುರ ಮತ್ತು ಯುಕೆ ನಂತರ ಭಾರತದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕನಿಷ್ಠ 12 ದೇಶಗಳಲ್ಲಿ ಹೊಸ ರೂಪಾಂತರ XBB 1.16 ಪತ್ತೆಯಾಗಿದೆ. ಭಾರತದಲ್ಲಿ ಪ್ರಕರಣಗಳಲ್ಲಿ ಶೇ.281 ರಷ್ಟು ಹೆಚ್ಚಾಗಿದೆ. ಕಳೆದ 14 ದಿನಗಳಲ್ಲಿ ಸಾವಿನ ಪ್ರಕರಣದಲ್ಲಿ ಶೇ.17 ರಷ್ಟು ಹೆಚ್ಚಾಗಿದೆ ಎಂದು ಬಿಜ್ನೋರ್ ನ ಮಂಗಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಿಶು ವೈದ್ಯ ವಿಪಿನ್ ಎಂ ವಶಿಷ್ಠ ಟ್ವೀಟ್ ಮಾಡಿದ್ದಾರೆ.

ದೇಶಕ್ಕೆ ವೈರಸ್‌ಗಳ ಆಘಾತ: H3N2 ವೈರಸ್‌ ಜೊತೆಗೆ ಕೋವಿಡ್‌-19, ಹಂದಿಜ್ವರವೂ ಹೆಚ್ಚಳ

126 ದಿನಗಳ ನಂತರ ಶನಿವಾರದಂದು ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 800 ದಾಟಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 5,389 ಕ್ಕೆ ಏರಿದೆ.

click me!