ಬೆಂಗಳೂರಿಗರಿಗೆ ರಿಲೀಫ್‌, ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯ ಮಂಕಿಪಾಕ್ಸ್ ವರದಿ ನೆಗೆಟಿವ್‌

Published : Jul 31, 2022, 12:39 PM ISTUpdated : Jul 31, 2022, 12:43 PM IST
ಬೆಂಗಳೂರಿಗರಿಗೆ ರಿಲೀಫ್‌, ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯ ಮಂಕಿಪಾಕ್ಸ್ ವರದಿ ನೆಗೆಟಿವ್‌

ಸಾರಾಂಶ

ಬೆಂಗಳೂರಿಗರಿಗೆ ಬಿಗ್ ರಿಲೀಫ್ ಆಗಿದೆ. ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈಗ ಅವರ ವರದಿಯಲ್ಲಿ ಮಂಕಿಪಾಕ್ಸ್ ನೆಗೆಟಿವ್ ಎಂದು ದೃಢಪಟ್ಟಿದೆ.

ಬೆಂಗಳೂರು: ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಂಕಿಪಾಕ್ಸ್‌ ಬೆಂಗಳೂರಿಗೆ ವಕ್ಕರಿಸಿತಾ ಅನ್ನೋ ಭೀತಿ ಎದುರಾಗಿತ್ತು. ಸದ್ಯ ಆ ಆತಂಕ ದೂರವಾಗಿದೆ. ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈಗ ಅವರ ವರದಿಯಲ್ಲಿ ಮಂಕಿಪಾಕ್ಸ್ ನೆಗೆಟಿವ್ ಎಂದು ದೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಸುಧಾಕರ್ ಅವರೇ ಟ್ವೀಟ್ ಮಾಡಿದ್ದಾರೆ.

ಮೂತ್ರಪಿಂಡ ಚಿಕಿತ್ಸೆ ಪಡೆಯಲು ಬಂದಿದ್ದ ಆಫ್ರಿಕಾ ಮೂಲದ ವ್ಯಕ್ತಿ
ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೂತ್ರಪಿಂಡ ಚಿಕಿತ್ಸೆ ಪಡೆಯುತ್ತಿದ್ದ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್‌ ಸೋಂಕಿನ ಲಕ್ಷಣಗಳು ಕಂಡುಬಂದಿತ್ತು. ಆತನ ಮಾದರಿಗಳನ್ನು ಸಂಗ್ರಹಿಸಿ ಸೋಂಕು ಪರೀಕ್ಷೆಗೆಂದು ರಾಷ್ಟ್ರೀಯ ವೈರಾಣು ಸಂಸ್ಥೆ(ಎನ್‌ಐವಿ) ಕಳುಹಿಸಲಾಗಿತ್ತು. ಆ ವರದಿ ನೆಗೆಟಿವ್ ಬಂದಿದೆ.

ಬೆಂಗಳೂರಿಗೂ ವಕ್ಕರಿಸಿತೇ ಮಂಕಿಪಾಕ್ಸ್ ? ಆಫ್ರಿಕಾ ಮೂಲದ ಪ್ರಜೆಯಲ್ಲಿ ಸೋಂಕಿನ ಲಕ್ಷಣ

ತೀವ್ರ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಆಫ್ರಿಕಾದ ಇಥಿಯೋಪಿಯಾದ ವ್ಯಕ್ತಿಯು ಇಬ್ಬರು ಸಂಬಂಧಿಗಳೊಂದಿಗೆ ಜುಲೈ 4ರಂದು ಬೆಂಗಳೂರಿಗೆ ಬಂದು ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ನಿತ್ಯ ಡಯಾಲಿಸಿಸ್‌ ಒಳಗಾಗುತ್ತಿದ್ದ ಈ ವ್ಯಕ್ತಿಗೆ ಕೆಲ ದಿನಗಳಿಂದ ಮೈಮೇಲೆ ತುರಿಕೆ ಕಾಣಿಸಿಕೊಂಡಿದ್ದು, ಬಳಿಕ ದೇಹವಿಡಿ ಸಣ್ಣ ಗುಳ್ಳೆಗಳು ಕಂಡುಬಂದಿತ್ತು. ಕೂಡಲೇ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಂಕಿಪಾಕ್ಸ್‌ ಲಕ್ಷಣಗಳಿರಬಹುದು ಎಂದು ಗುರುತಿಸಿ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದರು. ಬಳಿಕ ಆ ವ್ಯಕ್ತಿಯ ದೇಹದಿಂದ ರಕ್ತದ ಮಾದರಿ, ಗಂಟಲು ದ್ರವ, ಗುಳ್ಳೆಗಳ ದ್ರವ ಮಾದರಿಗಳನ್ನು ತೆಗೆದು ಸೋಂಕು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. 

ಇತ್ತೀಚೆಗೆ ಶಂಕಿತರೊಬ್ಬರ ವರದಿ ನೆಗೆಟಿವ್‌
ಕೆಲ ದಿನಗಳ ಹಿಂದೆ ಇಂಗ್ಲೆಂಡ್‌ಗೆ ತೆರಳಿ ವಾಪಸ್‌ ಆಗಿದ್ದ ಬೆಂಗಳೂರು ಮೂಲದ ವ್ಯಕ್ತಿಗೂ ಮಂಕಿಪಾಕ್ಸ್ ರೋಗ ಲಕ್ಷಣಗಳು ಕಂಡು ಬಂದಿತ್ತು. ಕೂಡಲೇ ಆತನ ಮಾದರಿಯನ್ನು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಆದರೆ, ಆತನ ವರದಿ ನೆಗೆಟಿವ್‌ ಬಂದಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಬ್ಬರು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಕಠಿಣ ಸೂಚನೆ
ಸದ್ಯ ವಿದೇಶಗಳಿಂದ ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ನಿಗಾವಹಿಸಲು, ಪ್ರಾಥಮಿಕ ತಪಾಸಣೆ ನಡೆಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ಸೋಂಕು ಲಕ್ಷಣಗಳೊಂದಿಗೆ ಯಾರಾದರು ಖಾಸಗಿ ಆಸ್ಪತ್ರೆಗೆ ಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಆ ವ್ಯಕ್ತಿಗಳ ಮಾದರಿ ಸಂಗ್ರಹಿಸಿ ಕೂಡಲೇ ಎನ್‌ಐವಿ ಪ್ರಯೋಗಾಲಯಕ್ಕೆ ರವಾನಿಸಬೇಕು ಎಂದು ತಿಳಿಸಿದ್ದಾರೆ.

ಮಂಕಿಪಾಕ್ಸ್‌ನಿಂದ ಬ್ರೆಜಿಲ್‌ನಲ್ಲಿ ಮೊದಲ ಸಾವು; ವಿಶ್ವದಾದ್ಯಂತ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನಚ್ಚರಿಕಾ ಕ್ರಮ
ಇನ್ನು, ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಕಡ್ಡಾಯಗೊಳಿಸಲಾಗಿದೆ. ಮಂಕಿಪಾಕ್ಸ್ ಗುಣಲಕ್ಷಣಗಳು ಕಂಡುಬಂದವರಿಗೆ ಐಸೋಲೇಟ್ ಗೆ ಸೂಚನೆ ನೀಡಲಾಗುತ್ತದೆ. ಚರ್ಮ ತೊಂದರೆ, ಕೆಮ್ಮು, ನೆಗಡಿ, ತುರಿಕೆ, ಕಫ, ಜ್ವರ ಬಂದವರನ್ನು ಸಹ ಪರಿಕ್ಷೆಗೊಳಿಪಡಿಸಲು ಸೂಚನೆ ಕೊಡಲಾಗಿದೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚಳಿಗಾಲದಲ್ಲಿ ಡಯಾಬಿಟಿಸ್ ರೋಗಿಗಳು ಈ ಸಣ್ಣ ಬಿರುಕನ್ನ ನಿರ್ಲಕ್ಷಿಸಿದರೂ ಕಾಲನ್ನೇ ಕತ್ತರಿಸಬೇಕಾಗಬಹುದು!
ಆರೋಗ್ಯಕರ ತುಳಸಿ ಅಗೆದು ತಿಂದ್ರೆ ಅಪಾಯ, ಧರ್ಮ- ಆಯುರ್ವೇದ ಹೇಳೋದೇನು?