ಮಕ್ಕಳಲ್ಲಿ ಕಂಡು ಬರುತ್ತಿದೆ ಚಾಂದಿಪುರ ವೈರಸ್; ಒಂದು ವಾರದಲ್ಲಿ 6 ಕಂದಮ್ಮಗಳ ಸಾವು!

By Kannadaprabha News  |  First Published Jul 17, 2024, 7:31 AM IST

ರೋಗ ಕಾಣಿಸಿಕೊಂಡ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವನ್ನು ವಹಿಸಲಾಗಿದೆ.  12 ಜನರ ಮಾದರಿಯನ್ನು ಪುಣೆಯ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದೆ


ಅಹಮದಾಬಾದ್‌: ಗುಜರಾತ್‌ ರಾಜ್ಯದಲ್ಲಿ ‘ಚಾಂದಿಪುರ’ ಹೆಸರಿನ ವೈರಸ್ ಪತ್ತೆಯಾಗಿದೆ. ಈ ಸೋಂಕಿಗೆ ಜು.10ರಿಂದ ಈವರೆಗೆ 6 ಮಕ್ಕಳು ಸಾವನ್ನಪ್ಪಿದ್ದು, ಈವರೆಗೆ 12 ಜನರಿಗೆ ಈ ಸೋಂಕು ತಗುಲಿದೆ. ಮಹಾರಾಷ್ಟ್ರದ ಚಾಂದಿಪುರದಲ್ಲಿ 1965ರಲ್ಲಿ ಇದು ಮೊದಲ ಬಾರಿ ಕಾಣಿಸಿತ್ತು. ಹೀಗಾಗಿ ಇದಕ್ಕೆ ಚಾಂದಿಪುರ ವೈರಸ್‌ ಎನ್ನುತ್ತಾರೆ. ರಾಬ್ಡೋವೆರಿಡೆ ವರ್ಗಕ್ಕೆ ಸೇರಿದ ವೈರಸ್ ಈ ರೋಗಕ್ಕೆ ಕಾರಣ. ಇದು ಸಾಂಕ್ರಾಮಿಕ ರೋಗ ಅಲ್ಲದಿದ್ದರೂ ಸೊಳ್ಳೆ, ನೊಣಗಳಿಂದ ಈ ಸೋಂಕು ಹರಡುತ್ತದೆ.

ಗುಜರಾತ್‌ನ ಸಬರ್‌ಕಾಂಠಾ ರಾವಳಿ, ಮಹಿಸಾರ, ಖೇಡಾ ಜಿಲ್ಲೆಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಇನ್ನು ಮಧ್ಯಪ್ರದೇಶ ಮತ್ತು ರಾಜಸ್ಥಾನದ ಮೂಲದ ತಲಾ ಒಬ್ಬರಲ್ಲಿಯೂ ಈ ಸೋಂಕು ಕಾಣಿಸಿಕೊಂಡಿದ್ದು, ಗುಜರಾತ್‌ನಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Latest Videos

undefined

ಚೀನಾ ಲ್ಯಾಬ್‌ನಲ್ಲಿ ಮತ್ತೊಂದು ಮಾರಣಾಂತಿಕ ವೈರಸ್ ವಿನ್ಯಾಸಗೊಳಿಸಿದ ವಿಜ್ಞಾನಿಗಳು!

ಸೋಂಕಿನ ಲಕ್ಷಣಗಳೇನು?

ಚಂಡೀಪುರ ಸೋಂಕು ಸಾಮಾನ್ಯ ಜ್ವರದ ರೋಗ ಲಕ್ಷಣಗಳಂತೆಯೇ ಇರುತ್ತದೆ. ದಿಢೀರ್ ಜ್ವರ, ತೀವ್ರ ತಲೆನೋವು, ವಾಂತಿ, ಸ್ನಾಯು ಸೆಳೆತ, ಪ್ರಜ್ಞಾಹೀನತೆ, ಅರೆನಿದ್ರಾವಸ್ಥೆ ಸೇರಿದಂತೆ ಕೆಲ ಲಕ್ಷಣಗಳು ಈ ರೋಗ ಬಂದವರಲ್ಲಿ ಕಾಣಿಸಿಕೊಳ್ಳುತ್ತದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಋುಷಿಕೇಶ್ ಪಟೇಲ್ ಮಾಹಿತಿ ನೀಡಿದ್ದು, ‘ಚಾಂದಿಪುರ ವೈರಸ್‌ ಸಾಂಕ್ರಾಮಿಕ ರೋಗವಲ್ಲ. ಆದರೂ ರೋಗ ಕಾಣಿಸಿಕೊಂಡ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವನ್ನು ವಹಿಸಲಾಗಿದೆ. ರೋಗ ತಡೆ ಕಾರ್ಯ ನಿರ್ವಹಿಸುತ್ತಿದ್ದೇವೆ. ರೋಗದ ಲಕ್ಷಣಗಳನ್ನು ಹೊಂದಿರುವ 12 ಜನರ ಮಾದರಿಯನ್ನು ಪುಣೆಯ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.

ಜ್ವರ ಜತೆ ಕಣ್ಣು ಕೆಂಪಾಯ್ತಾ? ಝೀಕಾ ವೈರಸ್ ಟೆಸ್ಟ್ ಮಾಡಿಸಿ!

click me!